HomeNews2nd Metro Tragedy in 5 Days-5 ದಿನದಲ್ಲಿ 2ನೇ ಮೆಟ್ರೋ ದುರಂತ

2nd Metro Tragedy in 5 Days-5 ದಿನದಲ್ಲಿ 2ನೇ ಮೆಟ್ರೋ ದುರಂತ

Another person dies after jumping in front of a train on the Delhi Metro Rail Corporation tracks

2nd Metro Tragedy in 5 Days-5 ದಿನದಲ್ಲಿ 2ನೇ ಮೆಟ್ರೋ ದುರಂತ

ದೆಹಲಿಯ ಉತ್ತಮ್ ನಗರ ಪೂರ್ವ ಮೆಟ್ರೋ ನಿಲ್ದಾಣದಲ್ಲಿ ಹಳಿ ಮೇಲೆ ಹಾರಿ ವ್ಯಕ್ತಿಯೊಬ್ಬ ಪ್ರಾಣ ಕಳೆದುಕೊಂಡಿರುವ ಘಟನೆ ನಡೆದಿದೆ. 45 ವರ್ಷದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ಮೃತರನ್ನು ರಾಜಸ್ಥಾನದ ಕರೋಲಿ ಜಿಲ್ಲೆಯ ಹಂಡು ರಾಮ್ ಅವರ ಪುತ್ರ ಮಹಾರಾಜ್ ಸಿಂಗ್ ಎಂದು ಗುರುತಿಸಲಾಗಿದೆ. ಅವರ ಶವವನ್ನು ಹಳಿಯಿಂದ ಹೊರತೆಗೆದು ಡಿಡಿಯು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.

ವೈಯಕ್ತಿಕ ಸಮಸ್ಯೆಗೆ ಬೆಸತ್ತು ದೆಹಲಿ ಮೆಟ್ರೋಗೆ ಹಾರಿ ಯುವಕ ಸೂ*ಸೈಡ್ - Suddiyaana -  ಕನ್ನಡ ಸುದ್ದಿ: ಇತ್ತೀಚಿನ ಕನ್ನಡ ಸುದ್ದಿ, ಬ್ರೇಕಿಂಗ್ ಕನ್ನಡ ನ್ಯೂಸ್ ಲೈವ್, ಇಂದು ...

ನವದೆಹಲಿ, ಫೆಬ್ರವರಿ 24: ದೆಹಲಿಯ ಉತ್ತಮ್ ನಗರ ಪೂರ್ವ ಮೆಟ್ರೋ(Metro) ನಿಲ್ದಾಣದಲ್ಲಿ ಹಳಿ ಮೇಲೆ ಹಾರಿ ವ್ಯಕ್ತಿಯೊಬ್ಬ ಪ್ರಾಣ ಕಳೆದುಕೊಂಡಿರುವ ಘಟನೆ ನಡೆದಿದೆ. 45 ವರ್ಷದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ಮೃತರನ್ನು ರಾಜಸ್ಥಾನದ ಕರೋಲಿ ಜಿಲ್ಲೆಯ ಹಂಡು ರಾಮ್ ಅವರ ಪುತ್ರ ಮಹಾರಾಜ್ ಸಿಂಗ್ ಎಂದು ಗುರುತಿಸಲಾಗಿದೆ. ಅವರ ಶವವನ್ನು ಹಳಿಯಿಂದ ಹೊರತೆಗೆದು ಡಿಡಿಯು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.

ಪೊಲೀಸರು CrPC ಸೆಕ್ಷನ್ 174 ರ ಅಡಿಯಲ್ಲಿ ವಿಚಾರಣೆ ಆರಂಭಿಸಿದ್ದಾರೆ. ಘಟನೆಯ ಸುತ್ತಲಿನ ಸಂದರ್ಭಗಳನ್ನು ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ. ಐದು ದಿನಗಳಲ್ಲಿ ಉತ್ತಮ್ ನಗರ ಪೂರ್ವ ಮೆಟ್ರೋ ನಿಲ್ದಾಣದಲ್ಲಿ ನಡೆದ ಎರಡನೇ ಆತ್ಮಹತ್ಯೆ ಪ್ರಕರಣ ಇದಾಗಿದೆ.

ಮತ್ತೊಂದು ಘಟನೆ 

ವೈಯಕ್ತಿಕ ಸಮಸ್ಯೆಗಳಿಂದ ಬೇಸತ್ತು ಬಾಲಕನೊಬ್ಬ ದೆಹಲಿ ಮೆಟ್ರೋ(Delhi Metro) ಎದುರು ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿತ್ತು. ಇಂದು ಬೆಳಗ್ಗೆ ಪಶ್ಚಿಮ ದೆಹಲಿಯ ಉತ್ತಮ್ ನಗರ ಪೂರ್ವ ಮೆಟ್ರೋ ನಿಲ್ದಾಣದಲ್ಲಿ ಈ ಘಟನೆ ನಡೆದಿತ್ತು.

ಪೊಲೀಸರು ನೀಡಿರುವ ಮಾಹಿತಿ ಪ್ರಕಾರ, ಬೆಳಗ್ಗೆ 11.7ಕ್ಕೆ ನಿಲ್ದಾಣ ನಿಯಂತ್ರಕರಿಂದ ವ್ಯಕ್ತಿಯೊಬ್ಬ ಹಳಿಗಳ ಮೇಲೆ ಹಾರಿದ ಬಗ್ಗೆ ಮಾಹಿತಿ ಬಂದಿತ್ತು. ದ್ವಾರಕಾ ಕಡೆಯಿಂದ ಬರುತ್ತಿದ್ದ ಮೆಟ್ರೋ ರೈಲು ಆತನ ಮೇಲೆ ಹರಿದಿದೆ. ಪೊಲೀಸರು ಬರುವ ಮೊದಲೇ ಮೃತದೇಹವನ್ನು ಹಳಿಗಳಿಂದ ತೆಗೆಯಲಾಗಿತ್ತು.

ಮೃತ ವ್ಯಕ್ತಿಯನ್ನು ನಜಾಫ್‌ಗಢ ನಿವಾಸಿ ಎಂದು ಗುರುತಿಸಲಾಗಿದೆ. ಆತ 12ನೇ ತರಗತಿ ಪೂರ್ಣಗೊಳಿಸಿದ್ದು, ಉತ್ತಮ್ ನಗರದ ಖಾಸಗಿ ಸಂಸ್ಥೆಯಲ್ಲಿ ಕೋಚಿಂಗ್ ತರಗತಿಗಳಿಗೆ ಹಾಜರಾಗುತ್ತಾ ಹೆಚ್ಚಿನ ಅಧ್ಯಯನಕ್ಕೆ ತಯಾರಿ ನಡೆಸುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಈ ಘಟನೆಯಿಂದಾಗಿ ನೀಲಿ ಮಾರ್ಗದಲ್ಲಿ ಮೆಟ್ರೋ ಸೇವೆಗಳು ಸಹ ಸ್ವಲ್ಪ ಸಮಯದವರೆಗೆ ಸ್ಥಗಿತಗೊಂಡಿದ್ದವು.

ಪ್ರಾಥಮಿಕ ತನಿಖೆಯಲ್ಲಿ ಆತ ವೈಯಕ್ತಿಕ ಸಮಸ್ಯೆಗಳಿಂದ ಬಳಲುತ್ತಿದ್ದ ಎಂದು ತಿಳಿದುಬಂದಿದೆ. ಆತನ ತಂದೆ ಡಿಟಿಸಿಯಲ್ಲಿ ಗುತ್ತಿಗೆ ಚಾಲಕರಾಗಿ ಕೆಲಸ ಮಾಡುತ್ತಿದ್ದಾರೆ, ಪೋಷಕರಿಗೆ ಆತನೊಬ್ಬನೇ ಆ ಎಂದು ಡಿಸಿಪಿ ಮೆಟ್ರೋ ಕುಶಾಲ್ ಪಾಲ್ ಸಿಂಗ್ ಹೇಳಿದ್ದಾರೆ.

ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ದೀನ್ ದಯಾಳ್ ಉಪಾಧ್ಯಾಯ ಆಸ್ಪತ್ರೆಗೆ ರವಾನಿಸಲಾಗಿದೆ. ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ (ಬಿಎನ್‌ಎಸ್‌ಎಸ್) ಸೆಕ್ಷನ್ 194 ರ ಅಡಿಯಲ್ಲಿ ತನಿಖಾ ಪ್ರಕ್ರಿಯೆಗಳನ್ನು ಪ್ರಾರಂಭಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Follow Us 

Follow KannadaFolks channel on WhatsApp

Visit the Kannadafolks.in follow the latest updates

Subscribe and Receive exclusive content and updates on your favourite topics

Subscribe to KannadaFloks YouTube Channel and watch Videos

Subscribe for Free and Support Us 

ನಿಮ್ಮ ಈ - ಮೇಲ್ ಬಳಸಿ 👇ಇದೀಗ ಉಚಿತವಾಗಿ 🆓 ಚಂದಾದಾರರಾಗಿ..!  ನಿಮಗೆ ನಮ್ಮ ಕಥೆಗಳು, ಹಾಡುಗಳು ಮತ್ತು ಮಾಹಿತಿ ಇಷ್ಟವಾದರೆ ನಿಮ್ಮ ಸಮೂಹಕ್ಕೆ ಶೇರ್ ಮಾಡುವುದನ್ನ ಮರೆಯದಿರಿ 
RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

×