HomeNewsKnow the Todays Gold Rate-ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಇಲ್ಲಿದೆ |Kannada Folks

Know the Todays Gold Rate-ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಇಲ್ಲಿದೆ |Kannada Folks

Latest price movement update from Multi Commodity Exchange of India shows rise in gold and silver rates

Know the Todays Gold Rate-ಇಲ್ಲಿದೆ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಕೆ

ದೇಶೀಯ ಮತ್ತು ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆ ಏರಿಕೆಯತ್ತ ಮುಖ ಮಾಡಿದ್ದು, ಇಂದು (ಫೆ.20-ಶುಕ್ರವಾರ) ಮಲ್ಟಿ ಕಮಾಡಿಟಿ ಎಕ್ಸ್ಚೇಂಜ್ (MCX) ನಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಕೆ ಕಂಡುಬಂದಿದೆ. ಕರ್ನಾಟಕ ರಾಜಧಾನಿ ಬೆಂಗಳೂರು ಸೇರಿದಂತೆ ದೇಶದ ಎಲ್ಲಾ ಪ್ರಮುಖ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರಗಳಲ್ಲಿ ಏರಿಕೆ ದಾಖಲಾಗಿದೆ.ಈ ನಿರಂತರ ಏರಿಕೆ ಗ್ರಾಹಕರ ಬೇಸರಕ್ಕೆ ಕಾರಣವಾಗಿದ್ದು, ಬೆಲೆ ಇಳಿಕೆಯತ್ತ ಮುಖ ಮಾಡುವುದನ್ನು ಕಾಯುತ್ತಿದ್ದಾರೆ. ಇಲ್ಲಿದೆ ಮಹಿತಿ.
ಚಿನ್ನದ ಬೆಲೆ ಕೇವಲ 5 ದಿನಗಳಲ್ಲಿ ಬರೋಬ್ಬರಿ 5700 ರೂಪಾಯಿ ಏರಿಕೆ! ಇಳಿಕೆ ಲಕ್ಷಣ ಸದ್ಯಕ್ಕಿಲ್ಲ - Gold And Silver Prices Surge Sharply In Just Five Days | Kannada News Today
ರ್ನಾಟಕ ರಾಜಧಾನಿ ಬೆಂಗಳೂರು ಮತ್ತು ತೆಲಂಗಾಣ ರಾಜಧಾನಿ ಹೈದರಾಬಾದ್‌ನಲ್ಲಿ ಚಿನ್ನದ ಬೆಲೆ 1.55 ಲಕ್ಷ ರೂ. ಸಮೀಪಿಸಿದೆ.
ಬೆಂಗಳೂರಿನಲ್ಲಿ 10 ಗ್ರಾಂ ಗೆ ಚಿನ್ನದ ಬೆಲೆ 1,54,910 ರೂ. ಮತ್ತು ಹೈದರಾಬಾದ್‌ನಲ್ಲಿ 1,55,030 ರೂ. ವಹಿವಾಟು ನಡೆಸುತ್ತಿದೆ. ಈ ಎರಡೂ ನಗರಗಳಲ್ಲಿ ಬೆಳ್ಳಿ ಬೆಲೆಯೂ ಹೆಚ್ಚು ಭಿನ್ನವಾಗಿಲ್ಲ. ಬೆಂಗಳೂರಿನಲ್ಲಿ ಪ್ರತಿ ಕೆಜಿಗೆ 2,42,270 ರೂ. ಮತ್ತು ಹೈದರಾಬಾದ್‌ನಲ್ಲಿ ಪ್ರತಿ ಕೆಜಿಗೆ ₹2,42,460 ರೂ. ಇದೆ.

ಚಿನ್ನದ ಬೆಲೆಯಲ್ಲಿ ಮತ್ತೆ ಭರ್ಜರಿ ಏರಿಕೆ: ಭಾರತದಲ್ಲಿ ಡಿಸ್ಕೌಂಟ್ ಸಿಕ್ಕರೂ ಬಂಗಾರ ಖರೀದಿಸದ ಜನ! ಏನಾಗ್ತಿದೆ?

ಅದೇ ರೀತಿ ಪಶ್ಚಿಮ ಬಂಗಾಳ ರಾಜಧಾನಿ ಕೋಲ್ಕತ್ತಾದಲ್ಲಿ ಇಂದು 24 ಕ್ಯಾರೆಟ್ ಚಿನ್ನದ ಬೆಲೆ 10 ಗ್ರಾಂ ಗೆ 1,54,580 ರೂ. ಮತ್ತು ಪ್ರತಿ ಕೆಜಿ ಬೆಳ್ಳಿ ಬೆಲೆ 2,41,760 ರೂ.ನಲ್ಲಿ ವಹಿವಾಟು ನಡೆಸುತ್ತಿದೆ. ಫೆ.18ರಂದು ಚಿನ್ನದ ಬೆಲೆ ತಟಸ್ಥ ಆಗಿದ್ದನ್ನು ನಾವು ಇಲ್ಲಿ ಉಲ್ಲೇಖಿಸಬಹುದು.

ಇನ್ನು ತಮಿಳುನಾಡು ರಾಜಧಾನಿ ಚೆನ್ನೈನಲ್ಲಿ ಚಿನ್ನದ ಬೇಡಿಕೆ ಮತ್ತು ಬೆಲೆಗಳು ಎಂದಿನಂತೆ ಹೆಚ್ಚಿವೆ. ಚೆನ್ನೈನಲ್ಲಿ 24 ಕ್ಯಾರೆಟ್ ಚಿನ್ನವು 10 ಗ್ರಾಂ ಗೆ 1,55,240 ರೂ. ಆಗಿದ್ದರೆ, ಬೆಳ್ಳಿ ಬೆಲೆಗಳು ಪ್ರತಿ ಕಿಲೋಗ್ರಾಂ ಗೆ 2,42,780 ರೂ. ಇದೆ.

ಹಾಗೆಯೇ ಮಹಾರಾಷ್ಟ್ರ ರಾಜಧಾನಿ ಮುಂಬೈನ ಬುಲಿಯನ್ ಮಾರುಕಟ್ಟೆಯಲ್ಲಿ ಇಂದು ಚಿನ್ನದ ಬೆಲೆ ಏರಿಕೆಯಾಗಿದೆ. 24 ಕ್ಯಾರೆಟ್ ಚಿನ್ನದ ಬೆಲೆ 10 ಗ್ರಾಂ ಗೆ 1,54,790 ರೂ. ಇದ್ದು, ಬೆಳ್ಳಿ ಬೆಲೆ ಪ್ರತಿ ಕಿಲೋಗ್ರಾಂ ಗೆ 2,42,080 ರೂ.ಗೆ ತಲುಪಿದೆ.

ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಕUಡ ಚಿನ್ನ-ಬೆಳ್ಳಿ ದರ ಏರಿಕೆಯಾಗಿದ್ದು, ಇಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆ 10 ಗ್ರಾಂ ಗೆ 1,54,520 ರೂ. ಆಗಿದೆ. ಏತನ್ಮಧ್ಯೆ, 1 ಕಿಲೋಗ್ರಾಂ ಬೆಳ್ಳಿ ಬೆಲೆ 2,41,660 ರೂ. ಆಗಿದೆ. ಚಿನ್ನ ಮತ್ತು ಬೆಳ್ಳಿ ದರಗಳು ಏರಿಕೆಯಲ್ಲಿರುವುದು ಗ್ರಾಹಕರನ್ನು ಚಿಂತೆಗೀಡು ಮಾಡಿದೆ ಎನ್ನಬಹುದು.

Follow Us 

Follow KannadaFolks channel on WhatsApp

Visit the Kannadafolks.in follow the latest updates

Subscribe and Receive exclusive content and updates on your favourite topics

Subscribe to KannadaFloks YouTube Channel and watch Videos

Subscribe for Free and Support Us 

ನಿಮ್ಮ ಈ - ಮೇಲ್ ಬಳಸಿ 👇ಇದೀಗ ಉಚಿತವಾಗಿ 🆓 ಚಂದಾದಾರರಾಗಿ..!  ನಿಮಗೆ ನಮ್ಮ ಕಥೆಗಳು, ಹಾಡುಗಳು ಮತ್ತು ಮಾಹಿತಿ ಇಷ್ಟವಾದರೆ ನಿಮ್ಮ ಸಮೂಹಕ್ಕೆ ಶೇರ್ ಮಾಡುವುದನ್ನ ಮರೆಯದಿರಿ 
RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

×