HomeNewsBall Shaped Object Explodes-ಬಾಲ್ ಎಂದುಕೊಂಡು ಬಾಂಬ್ ನೊಂದಿಗೆ ಕ್ರಿಕೆಟ್ |Kannada Folks

Ball Shaped Object Explodes-ಬಾಲ್ ಎಂದುಕೊಂಡು ಬಾಂಬ್ ನೊಂದಿಗೆ ಕ್ರಿಕೆಟ್ |Kannada Folks

A shocking incident in India where a ball-shaped object exploded during a casual cricket game

Ball Shaped Object Explodes-ಬಾಲ್ ಎಂದುಕೊಂಡು ಬಾಂಬ್ ನೊಂದಿಗೆ ಕ್ರಿಕೆಟ್

ಚೆಂಡಿನಾಕಾರದ ಶಂಕಿತ ಬಾಂಬ್ ರೀತಿಯ ವಸ್ತುವಿನೊಂದಿಗೆ ಕ್ರಿಕೆಟ್ ಆಡಲು ಹೋದ ಬಾಲಕನೋರ್ವ ಗಾಯಗೊಂಡ ಘಟನೆ ದಕ್ಷಿಣ ಕನ್ನಡದಲ್ಲಿ ನಡೆದಿದೆ.

2,500+ Cricket Bat And Ball Stock Photos, Pictures & Royalty-Free Images -  iStock | Cricket bat and ball on white

Read this :Massive Statement by Usman Tariq on Sri Lankan-ಲಂಕಾ ಪೊಲೀಸರ ಬಗ್ಗೆ ಬೇಸರ ವ್ಯಕ್ತಪಡಿಸಿದ Pak ಬೌಲರ್

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ‌ ಬಂದಾರು ಗ್ರಾಮದಲ್ಲಿ ಚೆಂಡಿನ ಆಕಾರದ ವಸ್ತುವೊಂದು ಸ್ಫೋಟಗೊಂಡು ಓರ್ವ ಬಾಲಕ ಗಂಭೀರವಾಗಿ ಗಾಯಗೊಂಡಿದ್ದಾನೆ. ಸದ್ಯ ಬಾಲಕ ಪ್ರಾಣಾಪಾಯದಿಂದ ಪಾರಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಘಟನೆಯಲ್ಲಿ ಅಭೀಶ್​ ಎಂಬ ಬಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ರವಾನಿಸಲಾಗಿದೆ. ಸದ್ಯ ಬಾಲಕ ಪವಾಡಸದೃಶವಾಗಿ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಸದ್ಯ ಘಟನೆಯಿಂದ ಜನರಲ್ಲಿ ಆತಂಕ ಶುರುವಾಗಿದೆ.

ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ 9(B), 1(b) ಸ್ಫೋಟಕಗಳ ಕಾಯ್ದೆ, 125 A BNS ಆಕ್ಟ್ ಅಡಿ ಪ್ರಕರಣ ದಾಖಲಾಗಿದೆ. ಮೇಲ್ನೋಟಕ್ಕೆ ಇದು ಕಾಡು ಹಂದಿ ಬೇಟೆ ಆಡಲು ಇಟ್ಟಿದ್ದ ಬಾಂಬ್​ ಎಂದು ಶಂಕಿಸಲಾಗಿದೆ.

ನಡೆದಿದ್ದೇನು?

ಬಾಲಕ ಅಭೀಶ್ ಮನೆ ಅಂಗಳದಲ್ಲಿ ಆಟ ಆಡುತ್ತಿದ್ದ. ಈ ವೇಳೆ ಚೆಂಡಿನಾಕಾರದ ವಸ್ತು ಪತ್ತೆಯಾಗಿದೆ. ಬಾಲ್ ರೀತಿ ಇದ್ದ ಬಾಂಬ್​​ನಿಂದ ಮಕ್ಕಳು ಕ್ರಿಕೆಟ್ ಆಡಿದ್ದಾರೆ. ಓರ್ವ ಬಾಲಕ ಪತ್ತೆಯಾದ ಚೆಂಡಿನಾಕಾರದ ವಸ್ತುವನ್ನು ಬೌಲ್ ಮಾಡಿದ್ದು, ಅಭೀಶ್ ಬ್ಯಾಟ್​ನಿಂದ ಹೊಡೆದಾಗ ಬ್ಲಾಸ್ಟ್ ಆಗಿದೆ. ಈ ವೇಳೆ ಅಭೀಶ್​ಗೆ ಸಣ್ಣಪುಟ್ಟ ಗಾಯಗಳಾಗಿವೆ.

Subscribe for Free and Support Us 

ನಿಮ್ಮ ಈ - ಮೇಲ್ ಬಳಸಿ 👇ಇದೀಗ ಉಚಿತವಾಗಿ 🆓 ಚಂದಾದಾರರಾಗಿ..!  ನಿಮಗೆ ನಮ್ಮ ಕಥೆಗಳು, ಹಾಡುಗಳು ಮತ್ತು ಮಾಹಿತಿ ಇಷ್ಟವಾದರೆ ನಿಮ್ಮ ಸಮೂಹಕ್ಕೆ ಶೇರ್ ಮಾಡುವುದನ್ನ ಮರೆಯದಿರಿ 
RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

×