Baldota Factory Expansion-ಬಲ್ಡೋಟಾ ಕಾರ್ಖಾನೆ ವಿರುದ್ಧ ಸಿಡಿದ ರೈತರು

Read this : US Supreme Court strikes down Donald Trump ಟ್ರಂಪ್ಗೆ ಶಾಕ್ ಕೊಟ್ಟ ಅಮೆರಿಕದ ಸುಪ್ರೀಂ ಕೋರ್ಟ್|Kannada Folks
ಕೊಪ್ಪಳ, ಫೆಬ್ರವರಿ 24: ಜಿಲ್ಲೆಯಲ್ಲಿ ಬಲ್ಡೋಟಾ ಕಾರ್ಖಾನೆಯ ವಿಸ್ತರಣೆಯನ್ನು ವಿರೋಧಿಸಿ ರೈತರು ಮತ್ತು ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗಿದೆ. ಕಾರ್ಖಾನೆಯಿಂದ ಹೊರಬರುವ ಹೊಗೆ ಮತ್ತು ಧೂಳಿನಿಂದಾಗಿ ತಮ್ಮ ಬೆಳೆಗಳು ಹಾಳಾಗುತ್ತಿವೆ ಎಂದು ರೈತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಗವಿಮಠದ ಆವರಣದಿಂದ ಆರಂಭಗೊಂಡ ಮೆರವಣಿಗೆ ನಗರದ ಪ್ರಮುಖ ರಸ್ತೆಗಳಲ್ಲಿ ಸಾಗಿದೆ.
ಹಾಲಿವರ್ತಿ ಪ್ರದೇಶದ ರೈತರು ತಮ್ಮ ಜಮೀನುಗಳಲ್ಲಿ ಬೆಳೆದ ಕಡಲೆ, ಮೆಕ್ಕೆಜೋಳ, ಜೋಳ ಸೇರಿದಂತೆ ಹಲವು ಬೆಳೆಗಳಿಗೆ ಕಾರ್ಖಾನೆಯ ಹೊಗೆಯಿಂದಾಗುವ ಹಾನಿಯನ್ನು ಪ್ರದರ್ಶಿಸಲು, ಹಾಳಾದ ಬೆಳೆಗಳನ್ನು ಎತ್ತಿನ ಬಂಡಿಗಳಲ್ಲಿ ಹೊತ್ತು ತಂದಿದ್ದಾರೆ. ಕಳೆದ ಒಂದು ವರ್ಷದಿಂದ ಈ ಸಮಸ್ಯೆ ಎದುರಿಸುತ್ತಿದ್ದರೂ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ರೈತರು ದೂರಿದ್ದಾರೆ.
ರೈತರಿಂದ ಸರ್ಕಾರದ ಶವಯಾತ್ರೆ
ಟ್ರ್ಯಾಕ್ಟರ್ಗಳಲ್ಲಿ ಆಗಮಿಸಿ ಪ್ರತಿಭಟನೆಯಲ್ಲಿ ರೈತರು ಭಾಗಿಯಾಗಿದ್ದು, ಕೊಪ್ಪಳದ ಬಸವೇಶ್ವರ ವೃತ್ತದಲ್ಲಿ ರೈತರಿಂದ ಸರ್ಕಾರದ ಶವಯಾತ್ರೆ ನಡೆಸಲಾಗಿದೆ. ಮೆರವಣಿಗೆಯಲ್ಲಿ ವಿದ್ಯಾರ್ಥಿಗಳು, ಮಹಿಳೆಯರು, ವೃದ್ಧರು ಕೂಡ ಭಾಗಿಯಾಗಿದ್ದು, ಸರ್ಕಾರದ ವಿರುದ್ಧ ಘೋಷಣೆಗಳು ಮೊಳಗಿವೆ.
ಜನಪ್ರತಿನಿಧಿಗಳಿಗೆ ತರಾಟೆ
ಪ್ರತಿಭಟನಾ ರ‍್ಯಾಲಿಯಲ್ಲಿ ಭಾಗಿಯಾದ ಕೊಪ್ಪಳ ಕ್ಷೇತ್ರದ ಕಾಂಗ್ರೆಸ್ ಸಂಸದ ರಾಜಶೇಖರ ಹಿಟ್ನಾಳ ಮತ್ತು ಕಾಂಗ್ರೆಸ್ ಶಾಸಕ ರಾಘವೇಂದ್ರ ಹಿಟ್ನಾಳ್ರನ್ನು ರೈತರು ತರಾಟೆಗೆ ಪಡೆದ ಪ್ರಸಂಗವೂ ನಡೆದಿದೆ. ಕಾರ್ಖಾನೆ ವಿಸ್ತರಣೆ ಮಾಡುವಾಗ ಸುಮ್ಮನಿದ್ದು ಇಲ್ಲಿಗ್ಯಾಕೆ ಬಂದ್ರಿ ಎಂದು ಕೊಪ್ಪಳದ ಗಡಿಯಾರ ಕಂಬದ ಬಳಿ ಜನಪ್ರತಿನಿಧಿಗಳನ್ನು ಪ್ರತಿಭಟನಾಕಾರರು ಪ್ರಶ್ನಿಸಿದ್ದಾರೆ.
Follow Us
Follow KannadaFolks channel on WhatsApp
Visit the Kannadafolks.in follow the latest updates
Subscribe and Receive exclusive content and updates on your favourite topics
Subscribe to KannadaFloks YouTube Channel and watch Videos
Support Us 


