T20 WC 2026 India XI vs WI-IND vs WI: 15ರಲ್ಲಿ ಆಯ್ಕೆ ಯಾರು?

T20 World Cup 2026: ಟಿ20 ವಿಶ್ವಕಪ್ ಸೂಪರ್-8 ಸುತ್ತಿನ ಕೊನೆಯ ಲೀಗ್ ಪಂದ್ಯದಲ್ಲಿ ಭಾರತ ಮತ್ತು ವೆಸ್ಟ್ ಇಂಡೀಸ್ ತಂಡಗಳು ಮುಖಾಮುಖಿಯಾಗಲಿದೆ. ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಾಳೆ (ಮಾ.1) ನಡೆಯಲಿರುವ ಈ ಪಂದ್ಯದಲ್ಲಿ ಕಣಕ್ಕಿಳಿಯುವವರು ಯಾರು ಎಂಬುದೇ ಪ್ರಶ್ನೆ. ಏಕೆಂದರೆ ಈ ಮ್ಯಾಚ್ನಲ್ಲಿ ಗೆದ್ದರೆ ಮಾತ್ರ ಟೀಮ್ ಇಂಡಿಯಾ ಸೆಮಿಫೈನಲ್ಗೇರಲಿದೆ. ಹೀಗಾಗಿ ಭಾರತ ಬಲಿಷ್ಠ ಪಡೆಯನ್ನೇ ಕಣಕ್ಕಿಳಿಸಬೇಕು.
ಅದರಂತೆ ಈ ಮ್ಯಾಚ್ನಲ್ಲೂ ಆರಂಭಿಕರಾಗಿ ಸಂಜು ಸ್ಯಾಮ್ಸನ್ ಹಾಗೂ ಅಭಿಷೇಕ್ ಶರ್ಮಾ ಕಣಕ್ಕಿಳಿಯಲಿದ್ದಾರೆ. ಇನ್ನು ಮೂರನೇ ಕ್ರಮಾಂಕದಲ್ಲಿ ಇಶಾನ್ ಕಿಶನ್ ಕಾಣಿಸಿಕೊಳ್ಳುವುದು ಖಚಿತ. ನಾಲ್ಕನೇ ಕ್ರಮಾಂಕದಲ್ಲಿ ಸೂರ್ಯಕುಮಾರ್ ಯಾದವ್ ಆಡಿದರೆ, ಐದನೇ ಕ್ರಮಾಂಕದಲ್ಲಿ ಹಾರ್ದಿಕ್ ಪಾಂಡ್ಯ ಬ್ಯಾಟ್ ಬೀಸಲಿದ್ದಾರೆ.
ಇದಾದ ಬಳಿಕ ತಿಲಕ್ ವರ್ಮಾ ಹಾಗೂ ಶಿವಂ ದುಬೆ ಕಣಕ್ಕಿಳಿಯಲಿದ್ದಾರೆ. ಇನ್ನು ಸ್ಪಿನ್ ಆಲ್ರೌಂಡರ್ ಆಗಿ ಅಕ್ಷರ್ ಪಟೇಲ್ ಆಡುವ ಬಳಗದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇನ್ನು ಬೌಲರ್ಗಳಾಗಿ ಅರ್ಷದೀಪ್ ಸಿಂಗ್, ಜಸ್ಪ್ರೀತ್ ಬುಮ್ರಾ ಹಾಗೂ ವರುಣ್ ಚಕ್ರವರ್ತಿ ಕಣಕ್ಕಿಳಿಯಲಿದ್ದಾರೆ. ಅದರಂತೆ ಟೀಮ್ ಇಂಡಿಯಾದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿರಲಿದೆ…
- ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್)
- ಅಭಿಷೇಕ್ ಶರ್ಮಾ
- ಇಶಾನ್ ಕಿಶನ್
- ಸೂರ್ಯಕುಮಾರ್ ಯಾದವ್
- ಹಾರ್ದಿಕ್ ಪಾಂಡ್ಯ
- ತಿಲಕ್ ವರ್ಮಾ
- ಶಿವಂ ದುಬೆ
- ಅಕ್ಷರ್ ಪಟೇಲ್
- ಜಸ್ಪ್ರೀತ್ ಬುಮ್ರಾ
- ಅರ್ಷದೀಪ್ ಸಿಂಗ್
- ವರುಣ್ ಚಕ್ರವರ್ತಿ
ವೆಸ್ಟ್ ಇಂಡೀಸ್ ವಿರುದ್ಧ ಈ ಹನ್ನೊಂದು ಆಟಗಾರರು ಕಣಕ್ಕಿಳಿದರೆ ರಿಂಕು ಸಿಂಗ್, ಮೊಹಮ್ಮದ್ ಸಿರಾಜ್ ಹಾಗೂ ಕುಲ್ದೀಪ್ ಯಾದವ್ ಹೊರಗುಳಿಯಲಿದ್ದಾರೆ.
ಭಾರತ ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಅಕ್ಷರ್ ಪಟೇಲ್ (ಉಪನಾಯಕ), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಜಸ್ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ, ಮೊಹಮ್ಮದ್ ಸಿರಾಜ್, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಇಶಾನ್ ಕಿಶನ್ (ವಿಕೆಟ್ ಕೀಪರ್), ರಿಂಕು ಸಿಂಗ್.
Follow Us
Follow KannadaFolks channel on WhatsApp
Visit the Kannadafolks.in follow the latest updates
Subscribe and Receive exclusive content and updates on your favourite topics
Subscribe to KannadaFloks YouTube Channel and watch Videos
Support Us 


