J&K Upsets Karnataka in Ranji Final-ಜಮ್ಮುಕಾಶ್ಮೀರಕ್ಕೆ ಚೊಚ್ಚಲ ರಣಜಿ ಕಿರೀಟ
Ranji Trophy Final: ಹುಬ್ಬಳ್ಳಿಯ ಕೆಎಸ್‌ಸಿಎ ಮೈದಾನದಲ್ಲಿ ನಡೆದ ರಣಜಿ ಟ್ರೋಫಿ ಫೈನಲ್‌ನಲ್ಲಿ ಜಮ್ಮು ಮತ್ತು ಕಾಶ್ಮೀರ ತಂಡ ಇತಿಹಾಸ ಸೃಷ್ಟಿಸಿದೆ. ಮೊದಲ ಬಾರಿಗೆ ಫೈನಲ್‌ಗೇರಿದ್ದ ಜಮ್ಮು ಮತ್ತು ಕಾಶ್ಮೀರ, ಬಲಿಷ್ಠ ಕರ್ನಾಟಕವನ್ನು ಏಕಪಕ್ಷೀಯವಾಗಿ ಮಣಿಸಿ ಚಾಂಪಿಯನ್ ಪಟ್ಟಕ್ಕೇರಿದೆ. ಈ ಐತಿಹಾಸಿಕ ಗೆಲುವು ಕ್ರಿಕೆಟ್ ಲೋಕದಲ್ಲಿ ಹೊಸ ಅಧ್ಯಾಯ ಬರೆದಿದೆ.

ಹುಬ್ಬಳ್ಳಿಯ ಕೆಎಸ್‌ಸಿಎ ಕ್ರಿಕೆಟ್ ಮೈದಾನದಲ್ಲಿ ನಡೆದ ರಣಜಿ ಟ್ರೋಫಿ ಫೈನಲ್ ಪಂದ್ಯದಲ್ಲಿ ಕರ್ನಾಟಕ ಹಾಗೂ ಜಮ್ಮು ಮತ್ತು ಕಾಶ್ಮೀರ ತಂಡಗಳು ಮುಖಾಮುಖಿಯಾಗಿದ್ದವು. ಇದೇ ಮೊಟ್ಟ ಮೊದಲ ಬಾರಿಗೆ ರಣಜಿ ಟ್ರೋಫಿ ಫೈನಲ್‌ಗೇರಿದ್ದ ಜಮ್ಮು ಕಾಶ್ಮೀರ ತಂಡ ಬಲಿಷ್ಠ ಕರ್ನಾಟಕ ತಂಡವನ್ನು ಏಕಪಕ್ಷೀಯವಾಗಿ ಮಣಿಸಿ ಚಾಂಪಿಯನ್ ಆಗಿ ಹೊರಹೊಮ್ಮಿದೆ. ರಣಜಿ ಟ್ರೋಫಿ ಇತಿಹಾಸದಲ್ಲಿ 15ನೇ ಬಾರಿಗೆ ಫೈನಲ್ ತಲುಪಿದ್ದ ಕರ್ನಾಟಕ ತಂಡ ತವರು ನೆಲದ ಪ್ರಯೋಜನ ಪಡೆದು ಸುಲಭವಾಗಿ ಜಮ್ಮುಕಾಶ್ಮೀರ ತಂಡವನ್ನು ಮಣಿಸುತ್ತದೆ ಎಂದು ಎಲ್ಲರೂ ನಿರೀಕ್ಷಿಸಿದ್ದರು. ಇದಕ್ಕೆ ಪೂರಕವಾಗಿ ಕರ್ನಾಟಕ ತಂಡ ಘಟಾನುಘಟಿಗಳಿಂದಲೇ ತುಂಬಿ ತುಳುಕುತ್ತಿತ್ತು. ತಂಡದಲ್ಲಿ ಅನುಭವಿ ಕೆಎಲ್ ರಾಹುಲ್, ಮಯಾಂಕ್ ಅಗರ್ವಾಲ್, ಕರುಣ್ ನಾಯರ್ ಮತ್ತು ದೇವದತ್ ಪಡಿಕ್ಕಲ್ರಂತಹ ಬ್ಯಾಟ್ಸ್ಮನ್ಗಳಿದ್ದರೆ, ಬೌಲಿಂಗ್ ವಿಭಾಗದಲ್ಲಿ ಪ್ರಸಿದ್ಧ್ ಕೃಷ್ಣ ಹಾಗೂ ಶ್ರೇಯಸ್ ಗೋಪಾಲ್ರಂತಹ ಪ್ರತಿಭಾವಂತ ಬೌಲರ್ಗಳಿದ್ದರು. ಆದಾಗ್ಯೂ ಪಂದ್ಯ ಆರಂಭವಾದ ಮೊದಲ ದಿನದಿಂದಲೂ ಪಂದ್ಯವನ್ನು ತನ್ನ ಹಿಡಿತಕ್ಕೆ ತೆಗೆದುಕೊಂಡಿದ್ದ ಜೆಕೆ ತಂಡ ಕೊನೆಯವರೆಗೂ ಕರ್ನಾಟಕ ತಂಡಕ್ಕೆ ಪಂದ್ಯದ ಮೇಲೆ ಹಿಡಿತ ಸಾಧಿಸಲು ಒಂದೇ ಒಂದು ಅವಕಾಶವನ್ನು ಬಿಟ್ಟುಕೊಡಲಿಲ್ಲ.
Follow Us
Follow KannadaFolks channel on WhatsApp
Visit the Kannadafolks.in follow the latest updates
Subscribe and Receive exclusive content and updates on your favourite topics
Subscribe to KannadaFloks YouTube Channel and watch Videos
Support Us 


