HomeNewsShaheen Stands by Babar-ಬಾಬರ್ ಕೈಬಿಟ್ಟಿಲ್ಲ, ಅವಕಾಶ ನೀಡಿದೆ |Kannada Folks

Shaheen Stands by Babar-ಬಾಬರ್ ಕೈಬಿಟ್ಟಿಲ್ಲ, ಅವಕಾಶ ನೀಡಿದೆ |Kannada Folks

Support and Opportunity Go Hand in Hand

Shaheen Stands by Babar-ಬಾಬರ್ ಕೈಬಿಟ್ಟಿಲ್ಲ, ಅವಕಾಶ ನೀಡಿದೆ

Pakistan vs Bangladesh: ಪಾಕಿಸ್ತಾನ್ ಮತ್ತು ಬಾಂಗ್ಲಾದೇಶ್ ನಡುವಣ ಏಕದಿನ ಸರಣಿಯು ಮಾರ್ಚ್ 11 ರಿಂದ ಶುರುವಾಗಲಿದೆ. ಬಾಂಗ್ಲಾದಲ್ಲಿ ನಡೆಯಲಿರುವ ಈ ಟೂರ್ನಿಯಲ್ಲಿ ಒಟ್ಟು 3 ಏಕದಿನ ಪಂದ್ಯಗಳನ್ನಾಡಲಾಗುತ್ತದೆ. ಆದರೆ ಈ ಸರಣಿಗೆ ಆಯ್ಕೆ ಮಾಡಲಾದ ತಂಡದಲ್ಲಿ ಸ್ಟಾರ್ ಬ್ಯಾಟರ್ ಬಾಬರ್ ಆಝಂಗೆ ಸ್ಥಾನ ನೀಡಲಾಗಿಲ್ಲ.ಬಾಬರ್​ನ ಕೈಬಿಟ್ಟಿಲ್ಲ... ಬೇರೆಯವರಿಗೆ ಚಾನ್ಸ್ ನೀಡಲು ಹೊರಗಿಟ್ಟಿದ್ದೀವಿ ಅಷ್ಟೇ..! -  Kannada News | No one is dropped Babar Azam: Shaheen Afridi | TV9 Kannada

Read this : Jasprit Bumrah Takes T20 Break -ಜಸ್ಪ್ರೀತ್ ಬುಮ್ರಾ 18 ತಿಂಗಳಿಗೋಸ್ಕರ ಹೊರ

ಟಿ20 ವಿಶ್ವಕಪ್​ನಲ್ಲಿ ಅತ್ಯಂತ ಹೀನಾಯ ಪ್ರದರ್ಶನ ನೀಡಿದ್ದ ಪಾಕಿಸ್ತಾನ್ ತಂಡವು ಇದೀಗ ಬಾಂಗ್ಲಾದೇಶ್ ವಿರುದ್ಧದ ಏಕದಿನ ಸರಣಿಗಾಗಿ ಸಜ್ಜಾಗಿದೆ. ಮೂರು ಪಂದ್ಯಗಳ ಈ ಏಕದಿನ ಸರಣಿಗೆ ಆಯ್ಕೆ ಮಾಡಲಾದ ತಂಡದಲ್ಲಿ ಬಾಬರ್ ಆಝಂಗೆ ಸ್ಥಾನ ನೀಡಲಾಗಿಲ್ಲ ಎಂಬುದು ವಿಶೇಷ.  ಟಿ20 ವಿಶ್ವಕಪ್​ನಲ್ಲಿನ ಕಳಪೆ ಪ್ರದರ್ಶನದ ಹಿನ್ನಲೆಯಲ್ಲಿ ಬಾಬರ್​ನನ್ನು ಕೈ ಬಿಡಲಾಗಿದೆ ಎನ್ನಲಾಗಿತ್ತು. ಆದರೆ ಈ ವರದಿಯನ್ನು ಪಾಕ್ ತಂಡದ ನೂತನ ನಾಯಕ ಶಾಹೀನ್ ಶಾ ಅಫ್ರಿದಿ ಅಲ್ಲೆಗೆಳೆದಿದ್ದಾರೆ.

ಪಾಕಿಸ್ತಾನ್ ಏಕದಿನ ತಂಡದಿಂದ ಬಾಬರ್ ಆಝಂ ಅವರನ್ನು ಕೈ ಬಿಟ್ಟಿಲ್ಲ. ಬದಲಾಗಿ 2027ರ ಏಕದಿನ ವಿಶ್ವಕಪ್​ಗೂ ಮುನ್ನ ಯುವ ಆಟಗಾರರಿಗೆ ಅವಕಾಶ ನೀಡಲು ಅವರನ್ನು ಹೊರಗಿಡಲಾಗಿದೆ ಎಂದು ಶಾಹೀನ್ ಶಾ ಅಫ್ರಿದಿ ಹೇಳಿದ್ದಾರೆ.

ಅಂದರೆ ಬಾಬರ್ ಆಝಂ ಯಾವಾಗ ಬೇಕಿದ್ದರೂ ತಂಡಕ್ಕೆ ಮರಳಬಹುದು. ಸದ್ಯ ಅವರಿಗೆ ವಿಶ್ರಾಂತಿ ನೀಡಲಾಗಿದೆ ಅಷ್ಟೇ ಎಂದು ಶಾಹೀನ್ ಶಾ ಅಫ್ರಿದಿ ಸ್ಪಷ್ಟನೆ ನೀಡಿದ್ದಾರೆ.

ಆದರೆ ಅತ್ತ ಪಾಕ್ ತಂಡದ ಕೋಚ್ ಮೈಕ್ ಹೆಸ್ಸನ್ ಅವರು ಬಾಬರ್ ಆಝಂ ಅವರ ಬ್ಯಾಟಿಂಗ್ ಹಾಗೂ ಸ್ಟ್ರೈಕ್ ರೇಟ್​​ನಿಂದ ಸಂತುಷ್ಟರಾಗಿಲ್ಲ. ಹೀಗಾಗಿಯೇ ಟಿ20 ವಿಶ್ವಕಪ್​ನ ಕೊನೆಯ ಪಂದ್ಯಗಳ ವೇಳೆ ಬಾಬರ್​ನನ್ನು ಪ್ಲೇಯಿಂಗ್ ಇಲೆವೆನ್​ನಿಂದ ಹೊರಗಿಡಲಾಗಿತ್ತು. ಇದೀಗ ಬಾಂಗ್ಲಾದೇಶ್ ವಿರುದ್ಧದ ಏಕದಿನ ಸರಣಿಯಿಂದಲೂ ಅವರನ್ನು ಕೈ ಬಿಡಲಾಗಿದೆ.

ಇತ್ತ ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್​ನ ಈ ನಡೆಯ ವಿರುದ್ಧ ಅಭಿಮಾನಿಗಳಿಂದ ಆಕ್ರೋಶ ವ್ಯಕ್ತವಾಗಿದೆ. ಏಕೆಂದರೆ ಬಾಬರ್ ಆಝಂ ಏಕದಿನ ಕ್ರಿಕೆಟ್​ನಲ್ಲಿ ಉತ್ತಮ ಪ್ರದರ್ಶನ ನೀಡುತ್ತಾ ಬಂದಿದ್ದಾರೆ. ಅವರು ಟಿ20 ಕ್ರಿಕೆಟ್​ನಲ್ಲಿ ಮಾತ್ರ ಕಳಪೆ ಪ್ರದರ್ಶನ ನೀಡಿದ್ದಾರೆ. ಹೀಗಾಗಿಯೇ ಟಿ20 ಕ್ರಿಕೆಟ್​ಗೆ ಬಾಬರ್ ಸೂಕ್ತ ಆಟಗಾರನಲ್ಲ ಎಂಬ ಅಭಿಪ್ರಾಯಗಳು ಆಗಾಗ್ಗೆ ಕೇಳಿ ಬರುತ್ತಿರುತ್ತವೆ.

ಆದರೆ ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್ ಟಿ20 ಕ್ರಿಕೆಟ್​ನಲ್ಲಿನ ಪ್ರದರ್ಶನವನ್ನು ಪರಿಗಣನೆಗೆ ತೆಗೆದುಕೊಂಡು ಬಾಬರ್ ಆಝಂ ಅವರನ್ನು ಏಕದಿನ ತಂಡದಿಂದ ಕೈ ಬಿಟ್ಟಿದ್ದಾರೆ. ಹೀಗಾಗಿಯೇ ಇದೀಗ ಪಾಕ್ ತಂಡದ ನೂತನ ನಾಯಕ ಶಾಹೀನ್ ಶಾ ಅಫ್ರಿದಿ ಬಾಬರ್ ಆಝಂ ಅವರನ್ನು ತಂಡದಿಂದ ಕೈ ಬಿಟ್ಟಿಲ್ಲ ಎಂಬ ಹೇಳಿಕೆಯ ಮೂಲಕ ಸಮಜಾಯಿಷಿ ನೀಡಿದ್ದಾರೆ.

ಪಾಕಿಸ್ತಾನ್ ಏಕದಿನ ತಂಡ: ಶಾಹೀನ್ ಶಾ ಅಫ್ರಿದಿ (ನಾಯಕ), ಅಬ್ದುಲ್ ಸಮದ್, ಅಬ್ರಾರ್ ಅಹ್ಮದ್, ಫಹೀಮ್ ಅಶ್ರಫ್, ಫೈಸಲ್ ಅಕ್ರಮ್, ಹಾರಿಸ್ ರೌಫ್, ಹುಸೇನ್ ತಲತ್, ಮಾಝ್ ಸದಾಕತ್, ಮೊಹಮ್ಮದ್ ⁠ ರಿಝ್ವಾನ್ (ವಿಕೆಟ್ ಕೀಪರ್), ಮೊಹಮ್ಮದ್ ವಾಸಿಂ ಜೂನಿಯರ್, ಮುಹಮ್ಮದ್ ಗಾಝಿ ಘೋರಿ (ವಿಕೆಟ್ ಕೀಪರ್), ಸಾದ್ ಮಸೂದ್, ಸಾಹಿಬ್​ಝಾದ ಫರ್ಹಾನ್, ಸಲ್ಮಾನ್ ಅಲಿ ಅಘಾ ಮತ್ತು ಶಾಮಿಲ್ ಹುಸೇನ್

Follow Us 

Follow KannadaFolks channel on WhatsApp

Visit the Kannadafolks.in follow the latest updates

Subscribe and Receive exclusive content and updates on your favourite topics

Subscribe to KannadaFloks YouTube Channel and watch Videos

Subscribe for Free and Support Us 

ನಿಮ್ಮ ಈ - ಮೇಲ್ ಬಳಸಿ 👇ಇದೀಗ ಉಚಿತವಾಗಿ 🆓 ಚಂದಾದಾರರಾಗಿ..!  ನಿಮಗೆ ನಮ್ಮ ಕಥೆಗಳು, ಹಾಡುಗಳು ಮತ್ತು ಮಾಹಿತಿ ಇಷ್ಟವಾದರೆ ನಿಮ್ಮ ಸಮೂಹಕ್ಕೆ ಶೇರ್ ಮಾಡುವುದನ್ನ ಮರೆಯದಿರಿ 
RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments