HomeNewsBagalkot Congress Ticket Trouble-ಬಾಗಲಕೋಟೆ ಕಾಂಗ್ರೆಸ್ ತಲೆನೋವು |Kannada Folks

Bagalkot Congress Ticket Trouble-ಬಾಗಲಕೋಟೆ ಕಾಂಗ್ರೆಸ್ ತಲೆನೋವು |Kannada Folks

Congress struggles over tickets in Bagalkot bypoll

Bagalkot Congress Ticket Trouble-ಬಾಗಲಕೋಟೆ ಕಾಂಗ್ರೆಸ್ ತಲೆನೋವು

ಮಾಜಿ ಸಚಿವ, ಶಾಸಕ ದಿವಂಗತ ಎಚ್​ವೈ ಮೇಟಿ ಕ್ಷೇತ್ರ ಬಾಗಲಕೋಟೆಯಲ್ಲಿ ಅವರ ಕುಟುಂಬದ ಒಳಜಗಳ ಈಗ ಕಾಂಗ್ರೆಸ್​ಗೆ ಕಗ್ಗಂಟಾಗಿ ಪರಿಣಮಿಸಿದೆ. ಟಿಕೆಟ್ ಗೊಂದಲ ಬಗೆಹರಿಸಲು ಖುದ್ದು ಸಿಎಂ ಸಿದ್ದರಾಮಯ್ಯ ಅವರೇ ಬೆಂಗಳೂರಿನಲ್ಲಿ ಸಭೆ ನಡೆಸಿದ್ದರೂ ಒಮ್ಮತಕ್ಕೆ ಬರಲಾಗಿಲ್ಲ. ಇದು ಕುತೂಹಲವನ್ನು ಹೆಚ್ಚಿಸಿದ್ದು, ಕಾಂಗ್ರೆಸ್ ಮುಂದಿನ ನಡೆ ಏನಿರಲಿದೆ ಎಂಬ ಪ್ರಶ್ನೆ ಮೂಡಿದೆ.Bagalkot Bypoll: ಬಾಗಲಕೋಟೆ ಉಪಚುನಾವಣೆ: ವಿವಿಧ ರಾಜಕೀಯ ಪಕ್ಷದ ಪ್ರತಿನಿಧಿಗಳೊಂದಿಗೆ  ಸಭೆ

Read this : Premium +₹2, regular same-ಪ್ರೀಮಿಯಂ ₹2 ಏರಿಕೆ, ಸಾಮಾನ್ಯ ಸ್ಥಿರ |Kannada Folks

ಬಾಗಲಕೋಟೆ, ಮಾರ್ಚ್ 20: ಬಾಗಲಕೋಟೆ (Bagalkot) ಉಪಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ (Congress) ಪಕ್ಷದಲ್ಲಿ ಟಿಕೆಟ್ ಬಿಕ್ಕಟ್ಟು ತೀವ್ರಗೊಂಡಿದೆ. ಮಾಜಿ ಸಚಿವ, ಶಾಸಕ ದಿ. ಎಚ್​ವೈ ಮೇಟಿ (HY Meti) ಅವರ ಕ್ಷೇತ್ರದಲ್ಲಿ ಅಭ್ಯರ್ಥಿ ಆಯ್ಕೆ ವಿಚಾರ ಇನ್ನೂ ಗೊಂದಲದಲ್ಲೇ ಉಳಿದಿದೆ. ಈ ಬಿಕ್ಕಟ್ಟನ್ನು ಬಗೆಹರಿಸಲು ಖುದ್ದು ಮುಖ್ಯಮಂತ್ರಿ ಸಿದ್ದರಾಮಯ್ಯನವರೇ (Siddaramaiah) ಮುಂದಾಗಿ ಬೆಂಗಳೂರಿನಲ್ಲಿ ಸಭೆ ನಡೆಸಿದ್ದಾರೆ. ಮೇಟಿ ಕುಟುಂಬದ ಸದಸ್ಯರೊಂದಿಗೆ ಚರ್ಚಿಸಿ ಒಮ್ಮತ ಸಾಧಿಸಲು ಸೂಚನೆ ನೀಡಿದರೂ, ಅಂತಿಮ ನಿರ್ಧಾರಕ್ಕೆ ಬರಲಾಗಿಲ್ಲ.

ಮೇಟಿ ಕುಟುಂಬದ ಮಕ್ಕಳಾದ ಮಲ್ಲಿಕಾರ್ಜುನ ಮೇಟಿ ಮತ್ತು ಉಮೇಶ್ ಮೇಟಿ ನಡುವೆ ತೀವ್ರ ಪೈಪೋಟಿ ಇದೆ. ಇವರಿಬ್ಬರಲ್ಲಿ ಯಾರಿಗೆ ಟಿಕೆಟ್ ನೀಡಿದರೂ ಒಗ್ಗಟ್ಟಿನಿಂದ ಕೆಲಸ ಮಾಡುವುದಾಗಿ ಸಹೋದರರು ಹೇಳಿಕೊಂಡಿದ್ದಾರೆ. ಆದರೆ ಕೊನೆಯ ಪುತ್ರಿ ಮಹಾದೇವಿ ಮೇಟಿ ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದು, ಮಲ್ಲಿಕಾರ್ಜುನ ಮೇಟಿಗೆ ಟಿಕೆಟ್ ನೀಡಿದರೆ ಬಂಡಾಯಕ್ಕೆ ಇಳಿಯುವ ಸೂಚನೆ ನೀಡಿದ್ದಾರೆ.

ಮಹಾದೇವಿ ಮೇಟಿ ತಾವು ನಾಮಪತ್ರ ಸಲ್ಲಿಸುವುದಾಗಿ ಹೇಳಿದ್ದು, ಇಂದೇ ನಾಮಪತ್ರ ಸಲ್ಲಿಸುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ಅವರ ಇಚ್ಛೆಯಂತೆ ಉಮೇಶ್ ಮೇಟಿಗೆ ಟಿಕೆಟ್ ನೀಡಿದರೆ ಮಾತ್ರ ಒಮ್ಮತ ಸಾಧ್ಯ ಎಂಬ ಮಾತು ಕೇಳಿಬರುತ್ತಿದೆ.

ಇನ್ನೊಂದೆಡೆ, ಯಾರಿಗೆ ಟಿಕೆಟ್ ನೀಡಿದರೂ ಪಕ್ಷದ ಗೆಲುವಿಗಾಗಿ ಶ್ರಮಿಸುವುದಾಗಿ ಮತ್ತೊಬ್ಬ ಪುತ್ರಿ ಬಾಯಕ್ಕ ಮೇಟಿ ಹೇಳಿದ್ದಾರೆ. ಆದರೂ ಕುಟುಂಬದ ಒಳಜಗಳ ಕಾಂಗ್ರೆಸ್‌ಗೆ ತಲೆನೋವಾಗಿ ಪರಿಣಮಿಸಿದ್ದು, ಇದು ಬಿಜೆಪಿ ಪಾಲಿಗೆ ಲಾಭವಾಗುವ ಸಾಧ್ಯತೆಯೂ ಇದೆ.

ಒಟ್ಟಿನಲ್ಲಿ, ಮಲ್ಲಿಕಾರ್ಜುನ ಮೇಟಿಗೆ ಟಿಕೆಟ್ ನೀಡಿದರೆ ಬಂಡಾಯದ ಬಿಸಿ ಎದುರಾಗುವ ಸಾಧ್ಯತೆ ಇದ್ದು, ಉಮೇಶ್ ಮೇಟಿಗೆ ಟಿಕೆಟ್ ನೀಡಿದರೆ ಒಗ್ಗಟ್ಟು ಸಾಧಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಅಂತಿಮವಾಗಿ ಕಾಂಗ್ರೆಸ್ ನಾಯಕತ್ವ ಯಾವ ನಿರ್ಧಾರ ಕೈಗೊಳ್ಳುತ್ತದೆ ಎಂಬುದು ಕುತೂಹಲ ಮೂಡಿಸಿದೆ.

Follow Us 

Follow KannadaFolks channel on WhatsApp

Visit the Kannadafolks.in follow the latest updates

Subscribe and Receive exclusive content and updates on your favourite topics

Subscribe to KannadaFloks YouTube Channel and watch Videos

Subscribe for Free and Support Us 

ನಿಮ್ಮ ಈ - ಮೇಲ್ ಬಳಸಿ 👇ಇದೀಗ ಉಚಿತವಾಗಿ 🆓 ಚಂದಾದಾರರಾಗಿ..!  ನಿಮಗೆ ನಮ್ಮ ಕಥೆಗಳು, ಹಾಡುಗಳು ಮತ್ತು ಮಾಹಿತಿ ಇಷ್ಟವಾದರೆ ನಿಮ್ಮ ಸಮೂಹಕ್ಕೆ ಶೇರ್ ಮಾಡುವುದನ್ನ ಮರೆಯದಿರಿ 
RELATED ARTICLES

Leave a Reply

- Advertisment -

Most Popular

Recent Comments