HomeNewsMallikarjun Kharge Controversy-ಮಲ್ಲಿಕಾರ್ಜುನ ಖರ್ಗೆ ವಿವಾದಗಳು

Mallikarjun Kharge Controversy-ಮಲ್ಲಿಕಾರ್ಜುನ ಖರ್ಗೆ ವಿವಾದಗಳು

Remarks Stir Debate

Mallikarjun Kharge Controversy-ಮಲ್ಲಿಕಾರ್ಜುನ ಖರ್ಗೆ ವಿವಾದಗಳು

ರಾಜಕಾರಣ ಎಂದಮೇಲೆ ಒಬ್ಬರು ಮತ್ತೊಬ್ಬರ ಮೇಲೆ ಕೆಸರು ಎರೆಚೋದು ಮಾಮೂಲು. ಆದರೆ ಟೀಕೆಗಳು ತೀವ್ರ ಕೆಳಮಟ್ಟಕ್ಕೆ ಇಳಿದಾಗ, ಅದರಲ್ಲೂ ಹಿರಿಯ ಅನುಭವಿ ರಾಜಕಾರಣಿಗಳೇ ಅಂತಹ ಹೇಳಿಕೆಗಳನ್ನು ನೀಡಿದಾಗ ಅವು ಭಾರಿ ಚರ್ಚೆಗೆ ಗ್ರಾಸವಾಗುತ್ತವೆ. ಇತ್ತೀಚೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೂಡ ನೀಡಿರುವ ಕೆಲ ಹೇಳಿಕೆಗಳು ತೀವ್ರ ಟೀಕೆಗೆ ಗುರಿಯಾಗಿವೆ. ಮಾತಿನ ಭರದಲ್ಲಿ ಅವರಾಡಿದ್ದ ಮಾತುಗಳು ಸಾಲು ಸಾಲು ಕಾಂಟ್ರವರ್ಸಿಗಳಿಗೆ ಕಾರಣವಾಗಿವೆ. ಆ ಕುರಿತ ಕಂಪ್ಲೀಟ್​​ ಮಾಹಿತಿ ಇಲ್ಲಿದೆ.ಪೇಸ್‌ಮೇಕರ್‌ ಅಳವಡಿಕೆ ಯಶಸ್ವಿ: ಮಲ್ಲಿಕಾರ್ಜುನ ಖರ್ಗೆ ಆರೋಗ್ಯ ಸ್ಥಿರ, ಆಸ್ಪತ್ರೆಯಿಂದ  ಡಿಸ್‌ಚಾರ್ಜ್

Read this : Warner Charged-ಡೇವಿಡ್ ವಾರ್ನರ್ ಬಂಧನ

ಬೆಂಗಳೂರು, ಏಪ್ರಿಲ್​​ 08: ಮಲ್ಲಿಕಾರ್ಜುನ ಖರ್ಗೆ ಕಾಂಗ್ರೆಸ್​​ನ ಹಿರಿಯ ರಾಜಕಾರಣಿ. ಎಐಸಿಸಿಯ ಅಧ್ಯಕ್ಷರೂ ಆಗಿರುವ ಇದೇ ಖರ್ಗೆ ಅದ್ಯಾಕೋ ಗೊತ್ತಿಲ್ಲ ಬೇಕು ಬೇಕಂತಲೇ ವಿವಾದಗಳನ್ನು ಮೈಮೇಲೆ ಎಳೆದುಕೊಳ್ಳುತ್ತಿರುವಂತೆ ಕಾಣುತ್ತಿದೆ. ಮೊನ್ನೆ ಭಾನುವಾರ ಅಸ್ಸಾಂನ ನಿಲಾಂಬಜಾರ್‌ನಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ್ದ ಇವರು, ಕುರಾನ್‌ನಲ್ಲಿ ನಮಾಜ್ ಮಾಡುವಾಗಲೂ ವಿಷಕಾರಿ ಹಾವನ್ನು ಕಂಡರೆ ಅದನ್ನು ಕೊಲ್ಲಬೇಕು ಎಂದು ಹೇಳಲಾಗಿದೆ. ಆರ್‌ಎಸ್‌ಎಸ್ ಅಥವಾ ಬಿಜೆಪಿ ಕೂಡ ಅದೇ ರೀತಿಯ ಹಾವು, ಅವನ್ನು ಕೊಲ್ಲದಿದ್ದರೆ ನೀವು ಬದುಕಲು ಸಾಧ್ಯವಿಲ್ಲ ಎಂದಿದ್ದು, ಇದೀಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಖರ್ಗೆ ಮೇಲೆ ಬಿಜೆಪಿಗರು ಮುಗಿ ಬಿದ್ದಿದ್ದು, ಎಲ್ಲೆಡೆ ಆಕ್ರೋಶಕ್ಕೆ ವ್ಯಕ್ತವಾಗ್ತಿವೆ.

ಅಷ್ಟಕ್ಕೂ ಮಲ್ಲಿಕಾರ್ಜುನ ಖರ್ಗೆ ಈ ರೀತಿಯ ವಿವಾದಾತ್ಮಕ ಹೇಳಿಕೆಗಳನ್ನು ನೀಡಿರೋದು ಇದೇ ಮೊದಲೇನೂ ಅಲ್ಲ. ಈ ಹಿಂದೆಯೂ ಇವರು ನೀಡಿದ್ದ ಕೆಲ ಹೇಳಿಕೆಗಳು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿತ್ತು.

‘ಗುಜರಾತಿಗರು ಅನಕ್ಷರಸ್ಥರು’

ವಿಧಾನಸಭೆ ಚುನಾವಣೆ ನಿಮಿತ್ತಕೇರಳದ ಇಡುಕ್ಕಿಯಲ್ಲಿ ರ‍್ಯಾಲಿಯನ್ನುದ್ದೇಶಿಸಿ ಮೊನ್ನೆ ಮೊನ್ನೆಯಷ್ಟೇ ಮಾತನಾಡಿದ್ದ ಮಲ್ಲಿಕಾರ್ಜುನ ಖರ್ಗೆ, ಗುಜರಾತ್ ಜನರು ಅನಕ್ಷರಸ್ಥರು. ಹೀಗಾಗಿ ನರೇಂದ್ರ ಮೋದಿ ಅಲ್ಲಿನ ಜನರನ್ನು ಸುಲಭವಾಗಿ ದಾರಿ ತಪ್ಪಿಸಬಹುದು, ಆದರೆ ಕೇರಳದ ಜನರು ಹೆಚ್ಚು ಸಂವೇದನಾಶೀಲ ಮತ್ತು ವಿದ್ಯಾವಂತರು. ಹೀಗಾಗಿ ಅವರನ್ನು ಯಾರೂ ಮೋಸಗೊಳಿಸಲು ಸಾಧ್ಯವಿಲ್ಲ ಎಂದಿದ್ದರು. ಯಾವಾಗ ತಮ್ಮ ಹೇಳಿಕೆ ತೀವ್ರ ವಿವಾದವಾಗಿ ಟೀಕೆಗೆ ಗುರಿಯಾಯ್ತೋ ಎಚ್ಚೆತ್ತ ಖರ್ಗೆ ತಮ್ಮ ಮಾತಿಗೆ ವಿಷಾದವನ್ನೂ ವ್ಯಕ್ತಪಡಿಸಿದ್ದರು. ಇತ್ತೀಚೆಗೆ ಕೇರಳದಲ್ಲಿ ನಡೆದ ಚುನಾವಣಾ ಭಾಷಣದಲ್ಲಿ ನನ್ನ ಕೆಲವು ಹೇಳಿಕೆಗಳನ್ನು ಉದ್ದೇಶಪೂರ್ವಕವಾಗಿ ತಪ್ಪಾಗಿ ಅರ್ಥೈಸಲಾಗುತ್ತಿದೆ. ಆದಾಗ್ಯೂ, ನಾನು ಹೃತ್ಪೂರ್ವಕ ವಿಷಾದವನ್ನು ವ್ಯಕ್ತಪಡಿಸುತ್ತೇನೆ. ಗುಜರಾತ್ ಜನರ ಭಾವನೆಗಳಿಗೆ ಧಕ್ಕೆಯುಂಟುಮಾಡುವುದು ನನ್ನ ಉದ್ದೇಶವೇ ಅಲ್ಲ. ಅವರ ಮೇಲೆ ನನಗೆ ಸದಾ ಅತ್ಯಂತ ಗೌರವವಿದೆ ಮತ್ತು ಅದು ಮುಂದುವರೆಯುತ್ತದೆ ಎಂದು ಹೇಳುವ ಮೂಲಕ ವಿವಾದ ಸುಖಾಂತ್ಯಗೊಳಿಸಲು ಯತ್ನಿಸಿದ್ದರು.

‘ಮೋದಿ ವಿಷ ಸರ್ಪ ಇದ್ದಂತೆ’

2023ರ ಕರ್ನಾಟಕ ವಿಧಾನಸಭೆ ಚುನಾವಣೆ ವೇಳೆಯೂ ಖರ್ಗೆ ಭಾರಿ ವಿವಾದಾತ್ಮಕ ಹೇಳಿಕೆಯೊಂದನ್ನು ನೀಡಿದ್ದರು. ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ನರೇಗಲ್‌ ಪಟ್ಟಣದಲ್ಲಿ ಆಯೋಜಿಸಿದ್ದ ಕಾಂಗ್ರೆಸ್‌ ಪ್ರಚಾರ ಸಭೆಯಲ್ಲಿ ಮಾತನಾಡಿದ್ದ ಅವರು, ಪ್ರಧಾನಿ ನರೇಂದ್ರ ಮೋದಿ ವಿಷ ಸರ್ಪ ಇದ್ದಂತೆ, ವಿಷದ ಹಾವನ್ನು ನೆಕ್ಕಿದ್ರೆ ಸತ್ತು ಹೋಗ್ತಾರೆ. ದೇಶಕ್ಕೆ ಬಿಜೆಪಿಯವರ ಕೊಡುಗೆ ಏನು ಅಂತಾ ಹೇಳಲಿ, ನಿಮ್ಮ ಮನೆಯಲ್ಲಿ ದೇಶಕ್ಕಾಗಿ ಒಂದೂ ನಾಯಿ ಕೂಡ ಸತ್ತಿಲ್ಲ ಎಂದಿದ್ದರು. ಇದಕ್ಕೆ ಕೌಂಟರ್​​ ನೀಡಿದ್ದ ಮೋದಿ, ನಾನು ಶಿವನ ಕೊರಳಿನ ಸರ್ಪವಾಗಲು ಇಷ್ಟಪಡುತ್ತೇನೆ ಎಂದಿದ್ದು ಕೂಡ ಭಾರಿ ಸುದ್ದಿಯಾಗಿತ್ತು.

Follow Us 

Follow KannadaFolks channel on WhatsApp

Visit the Kannadafolks.in follow the latest updates

Subscribe and Receive exclusive content and updates on your favourite topics

Subscribe to KannadaFloks YouTube Channel and watch Videos

Subscribe for Free and Support Us 

ನಿಮ್ಮ ಈ - ಮೇಲ್ ಬಳಸಿ 👇ಇದೀಗ ಉಚಿತವಾಗಿ 🆓 ಚಂದಾದಾರರಾಗಿ..!  ನಿಮಗೆ ನಮ್ಮ ಕಥೆಗಳು, ಹಾಡುಗಳು ಮತ್ತು ಮಾಹಿತಿ ಇಷ್ಟವಾದರೆ ನಿಮ್ಮ ಸಮೂಹಕ್ಕೆ ಶೇರ್ ಮಾಡುವುದನ್ನ ಮರೆಯದಿರಿ 
RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments