HomeNewsCultureವಿಶ್ವವಿಖ್ಯಾತ ಮೈಸೂರು ದಸರಾ ಶುರು- World famous Mysore Dasara

ವಿಶ್ವವಿಖ್ಯಾತ ಮೈಸೂರು ದಸರಾ ಶುರು- World famous Mysore Dasara

ವಿಶ್ವವಿಖ್ಯಾತ ಮೈಸೂರು ದಸರಾ ಶುರು- World famous Mysore Dasara

ವಿಶ್ವವಿಖ್ಯಾತ ಮೈಸೂರು ದಸರಾ ಶುರು- World-famous Mysore Dasara

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ವಿಶ್ವವಿಖ್ಯಾತ ದಸರಾ ಉದ್ಘಾಟನೆಗೆ ಕ್ಷಣಗಣನೆ ಆರಂಭವಾಗಿದೆ. ನಾಡ ದೇವತೆ ಚಾಮುಂಡೇಶ್ವರಿ ದೇವಿಯ ಸನ್ನಿಧಿಯಲ್ಲಿ ಇಂದು 2025ರ ದಸರಾ ಮಹೋತ್ಸವಕ್ಕೆ ಚಾಲನೆ ದೊರಕುತ್ತಿದೆ. ಅರಮನೆಯಲ್ಲಿ ಯದುವೀರ್ ಒಡೆಯರ್ ಖಾಸಗಿ ದರ್ಬಾರ್ ನಡೆಯಲಿದೆ. ಇಂದಿನಿಂದ 11 ದಿನಗಳ ಕಾಲ ದಸರಾ ಮಹೋತ್ಸವ ನೆರವೇರಲಿದೆ.ಆಷಾಢ ಶುಕ್ರವಾರಕ್ಕೆ ಸಜ್ಜಾದ ಚಾಮುಂಡಿ ಬೆಟ್ಟ - Eesanje News

Read this-Mysore Dasara: The dark legend behind India’s grandest Dussehra celebrations: kannada ಮೈಸೂರು ದಸರಾ: ಭಾರತದ ಅದ್ಧೂರಿ ದಸರಾ ಆಚರಣೆಯ ಹಿಂದಿನ ಕರಾಳ ದಂತಕಥೆ:

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಇಂದು ವೃಶ್ಚಿಕ ಲಗ್ನದಲ್ಲಿ ನಾಡ ದೇವಿ ಚಾಮುಂಡೇಶ್ವರಿ ಸನ್ನಿಧಿಯಲ್ಲಿ ವಿಧ್ಯುಕ್ತವಾಗಿ ಚಾಲನೆ ದೊರೆಯಲಿದೆ. ಈ ಬಾರಿಯ ದಸರಾ ಉತ್ಸವವು ಸಾಂಪ್ರದಾಯಿಕ ವೈಭವದ ಜೊತೆಗೆ ಆಧುನಿಕ ಸೌಲಭ್ಯಗಳನ್ನೂ ಒಳಗೊಂಡಿದ್ದು, ಚಾಮುಂಡೇಶ್ವರಿ ದೇವಾಲಯದ ಆವರಣದಲ್ಲಿ ಭರದ ಸಿದ್ಧತೆಗಳು ನಡೆದಿವೆ. ಈ ಕಾರ್ಯಕ್ರಮದಲ್ಲಿ ಸಾಹಿತಿ ಭಾನು ಮುಷ್ತಾಕ್ ಅವರು ಚಾಮುಂಡೇಶ್ವರಿ ದೇವಿಗೆ ಪುಷ್ಪಾರ್ಚನೆ ಮಾಡುವ ಮೂಲಕ ದಸರಾ ಮಹೋತ್ಸವಕ್ಕೆ ಚಾಲನೆ ನೀಡಲಿದ್ದಾರೆ.

ಚಾಮುಂಡೇಶ್ವರಿ ದೇವಾಲಯದಲ್ಲಿ ದಸರಾ ಉತ್ಸವದ ಸಿದ್ಧತೆಗಳು ಭರದಿಂದ ಸಾಗುತ್ತಿದ್ದು, ಚಾಮುಂಡೇಶ್ವರಿ ಉತ್ಸವ ಮೂರ್ತಿಯನ್ನು ಶುಚಿಗೊಳಿಸಿ, ಹಸಿರು ಸೀರೆಯಿಂದ ಅಲಂಕರಿಸಲಾಗಿದೆ. ಬೆಳಿಗ್ಗೆ 10:10 ರಿಂದ 10:40 ರ ಒಳಗಿನ ಶುಭ ವೃಶ್ಚಿಕ ಲಗ್ನದಲ್ಲಿ ವಿವಿಧ ಅಭಿಷೇಕ ಮತ್ತು ಪೂಜಾಕೈಂಕರ್ಯಗಳು ನಡೆಯಲಿವೆ. ಬಳಿಕ, ಬೆಳ್ಳಿ ರಥದಲ್ಲಿ ಉತ್ಸವ ಮೂರ್ತಿಯನ್ನು ವೇದಿಕೆಗೆ ತರಲಾಗುತ್ತದೆ. ಸಾಹಿತಿ ಭಾನು ಮುಷ್ತಾಕ್ ಅವರು ಮಹಿಷಾಸುರ ಮರ್ಧಿನಿ ಉತ್ಸವಮೂರ್ತಿಗೆ ಪುಷ್ಪಾರ್ಚನೆ ನೆರವೇರಿಸಲಿದ್ದಾರೆ. ಆ ಉತ್ಸವಮೂರ್ತಿ ಅತ್ಯಂತ ವಿಶೇಷದ್ದಾಗಿದೆ.ಇಂದಿನಿಂದ 415ನೇ ವರ್ಷದ ಮೈಸೂರು ದಸರಾ ವೈಭವ | Udayavani - Latest Kannada News, Udayavani Newspaper

Read this-Dasara festival story  Pooja of Nine Goddess

ದೇವಾಲಯದ ಆವರಣದಲ್ಲಿ ಬೃಹತ್ ವೇದಿಕೆಯನ್ನು ನಿರ್ಮಿಸಲಾಗಿದ್ದು, 1,000 ಆಸನಗಳ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಮಳೆಯ ಸಾಧ್ಯತೆಯನ್ನು ಗಮನದಲ್ಲಿಟ್ಟುಕೊಂಡು ಜರ್ಮನ್ ಟೆಂಟ್ ವ್ಯವಸ್ಥೆ ಮಾಡಲಾಗಿದೆ. ವಿವಿಐಪಿ, ವಿಐಪಿ, ಮತ್ತು ಪಾಸ್ ಹೊಂದಿದವರಿಗೆ ಪ್ರತ್ಯೇಕ ಆಸನ ವ್ಯವಸ್ಥೆಯನ್ನು ಒದಗಿಸಲಾಗಿದೆ. ಬೆಟ್ಟದ ಸುತ್ತಲೂ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.

ಮೈಸೂರು ಅರಮನೆಯಲ್ಲಿ ಖಾಸಗಿ ದರ್ಬಾರ್

ಚಾಮುಂಡಿ ಬೆಟ್ಟದಲ್ಲಿ ದಸರಾ ಉದ್ಘಾಟನೆಯಾದರೆ, ಇತ್ತ ಅರಮನೆಯಲ್ಲಿ ಯದುವೀರ್ ಒಡೆಯರ್ 11ನೇ ಖಾಸಗಿ ದರ್ಬಾರ್ ನಡೆಸಲಿದ್ದಾರೆ. ಬೆಳಿಗ್ಗೆ ಸಿಂಹಾಸನಕ್ಕೆ ಸಿಂಹದ ಮುಖವನ್ನು ಜೋಡಣೆ ಮಾಡಲಾಗಿದೆ. ಚಾಮುಂಡಿ ತೊಟ್ಟಿಯ ವಾಣಿವಿಲಾಸ ದೇವರ ಮನೆಯಲ್ಲಿ ಯದುವೀರ್​ಗೆ ತ್ರಿಶಿಕಾ ಕುಮಾರಿ ಕಂಕಣ ಕಟ್ಟಲಿದ್ದಾರೆ. ಕೊಡಿ ಸೋಮೇಶ್ವರ ದೇವಸ್ಥಾನದ ಬಳಿ ಪಟ್ಟದ ಆನೆ, ಕುದುರೆ, ಹಸು ಸೇರಿ ಮಹಿಳೆಯರು ಕಳಶ ಹೊತ್ತು ಬರಲಿದ್ದಾರೆ. 12.42ರಿಂದ 12.58ರ ಒಳಗೆ ರತ್ನ ಖಚಿತ ಸಿಂಹಾಸನ ಅಲಂಕರಿಸಿ ಯದುವೀರ್ ದರ್ಬಾರ್ ನಡೆಸಲಿದ್ದಾರೆ.

Read this-ನವರಾತ್ರಿಯ ನಾಲ್ಕನೇ ದಿನವನ್ನು ಹೇಗೆ ಆಚರಿಸುತ್ತಾರೆ?- Navratri Celebration

ಒಟ್ಟಾರೆ, ವಿಶ್ವ ವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ ಸಿಗಲು ಕೆಲವೇ ಕ್ಷಣಗಳಷ್ಟೇ ಬಾಕಿ ಉಳಿದಿವೆ. ಇನ್ನು 11 ದಿನಗಳ‌ ಕಾಲ ಸಾಂಸ್ಕೃತಿಕ ನಗರಿಯಲ್ಲಿ ದಸರಾ ವೈಭವ ರಾಜ್ಯವಲ್ಲದೇ ದೇಶ-ವಿದೇಶದ ಜನರನ್ನು ಸೆಳೆಯಲಿದೆ.

Subscribe for Free and Support Us 

ನಿಮ್ಮ ಈ - ಮೇಲ್ ಬಳಸಿ 👇ಇದೀಗ ಉಚಿತವಾಗಿ 🆓 ಚಂದಾದಾರರಾಗಿ..!  ನಿಮಗೆ ನಮ್ಮ ಕಥೆಗಳು, ಹಾಡುಗಳು ಮತ್ತು ಮಾಹಿತಿ ಇಷ್ಟವಾದರೆ ನಿಮ್ಮ ಸಮೂಹಕ್ಕೆ ಶೇರ್ ಮಾಡುವುದನ್ನ ಮರೆಯದಿರಿ 
RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

×