Homeಕನ್ನಡ ಫೊಕ್ಸ್Karnataka Weather - ಡಿಟ್ವಾ ಸೈಕ್ಲೋನ್ ಪರಿಣಾಮ

Karnataka Weather – ಡಿಟ್ವಾ ಸೈಕ್ಲೋನ್ ಪರಿಣಾಮ

Karnataka Weather - ಡಿಟ್ವಾ ಸೈಕ್ಲೋನ್ ಪರಿಣಾಮ

Karnataka Weather – ಡಿಟ್ವಾ ಸೈಕ್ಲೋನ್ ಪರಿಣಾಮ

ನೈಋತ್ಯ ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ‘ಡಿಟ್ವಾ ಚಂಡಮಾರುತದ ಪರಿಣಾಮವಾಗಿ ಕರ್ನಾಟಕದ ದಕ್ಷಿಣ ಒಳನಾಡು ಹಾಗೂ ಕರಾವಳಿ ಭಾಗದಲ್ಲಿ ಮಳೆಯಾಗಲಿದೆ ಎಂದು ಬೆಂಗಳೂರು ಹವಾಮಾನ ಕೇಂದ್ರ ವರದಿ ನೀಡಿದೆ.

‘ಡಿಟ್ವಾ’ ಚಂಡಮಾರುತವು ನೈಋತ್ಯ ಬಂಗಾಳ ಕೊಲ್ಲಿ ಮತ್ತು ತಮಿಳುನಾಡು-ಪುದುಚೇರಿ ಕರಾವಳಿಯಲ್ಲಿದ್ದು, ಕಳೆದ 6 ಗಂಟೆಗಳಲ್ಲಿ ಗಂಟೆಗೆ 12 ಕಿ.ಮೀ ವೇಗದಲ್ಲಿ ಉತ್ತರದ ಕಡೆಗೆ ಚಲಿಸಿದೆ. ಇಂದು (ನ.30) ಬೆಳಿಗ್ಗೆ 8:30ರ ವರದಿಯಂತೆ ಚೆನ್ನೈನಿಂದ 180 ಕಿ.ಮೀ ದೂರದಲ್ಲಿದೆ. ಮುಂದಿನ 24 ಗಂಟೆಗಳಲ್ಲಿ ಇದು ತಮಿಳುನಾಡು ಕರಾವಳಿಗೆ ಸಮಾನಾಂತರವಾಗಿ ಉತ್ತರಕ್ಕೆ ಚಲಿಸಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಮುಂದಿನ 24 ಗಂಟೆಗಳ ಹವಾಮಾನ ಮುನ್ಸೂಚನೆ

ದಕ್ಷಿಣ ಒಳನಾಡು: ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು (ಗ್ರಾಮಾಂತರ), ಬೆಂಗಳೂರು (ನಗರ), ರಾಮನಗರ ಮತ್ತು ಮಂಡ್ಯ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಗಂಟೆಗೆ 30-40 ಕಿ.ಮೀ ವೇಗದ ಗಾಳಿಯೊಂದಿಗೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಮೈಸೂರು, ಚಾಮರಾಜನಗರ ಮತ್ತು ಕೊಡಗು ಜಿಲ್ಲೆಗಳಲ್ಲಿ ಹಗುರ ಮಳೆಯಾಗಲಿದೆ. ಶಿವಮೊಗ್ಗ, ಹಾಸನ, ಚಿಕ್ಕಮಗಳೂರು ಮತ್ತು ವಿಜಯನಗರದಲ್ಲಿ ಒಣಹವೆ ಇರಲಿದೆ.

ಕರಾವಳಿ: ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಒಂದೆರಡು ಕಡೆ ಹಗುರ ಮಳೆಯಾಗಲಿದ್ದು, ಉತ್ತರ ಕನ್ನಡದಲ್ಲಿ ಒಣಹವೆ ಮುಂದುವರಿಯಲಿದೆ.

ಉತ್ತರ ಒಳನಾಡು:
ಎಲ್ಲಾ ಜಿಲ್ಲೆಗಳಲ್ಲಿ ಒಣಹವೆ ಇರಲಿದ್ದು, ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ.

ಬೆಂಗಳೂರು ಹವಾಮಾನ
ಬೆಂಗಳೂರು ನಗರ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಮೋಡ ಕವಿದ ವಾತಾವರಣವಿರಲಿದ್ದು, ಸಾಧಾರಣ ಮಳೆಯಾಗುವ ಸಂಭವವಿದೆ. ಕೆಲವು ಕಡೆಗಳಲ್ಲಿ ಮುಂಜಾನೆ ಮಂಜು ಕವಿದ ವಾತಾವರಣವಿರುತ್ತದೆ. ಗರಿಷ್ಠ ತಾಪಮಾನ 21°C ಮತ್ತು ಕನಿಷ್ಠ ತಾಪಮಾನ 18°C ಇರಲಿದೆ.

ವಾರದ ಮುನ್ಸೂಚನೆ (ಮುಂದಿನ 7 ದಿನಗಳು):

ಡಿಸೆಂಬರ್ 01: ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಒಣಹವೆ ಇರಲಿದೆ. ದಕ್ಷಿಣ ಒಳನಾಡಿನ ಬೆಂಗಳೂರು, ಕೋಲಾರ, ತುಮಕೂರು ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಹಗುರ ಮಳೆಯಾಗಲಿದೆ.ಡಿಸೆಂಬರ್ 02 & 03: ಉತ್ತರ ಒಳನಾಡಿನ ರಾಯಚೂರು, ಕೊಪ್ಪಳ, ಗದಗ ಜಿಲ್ಲೆಗಳಲ್ಲಿ ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ.

ಡಿಸೆಂಬರ್ 04 ರಿಂದ 06: ಕರಾವಳಿಯ ಉಡುಪಿ, ದಕ್ಷಿಣ ಕನ್ನಡ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಅಲ್ಲಲ್ಲಿ ಹಗುರ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.

ತಾಪಮಾನ ಎಚ್ಚರಿಕೆ:

ಮುಂದಿನ ಎರಡು ದಿನಗಳ ಕಾಲ ಉತ್ತರ ಒಳನಾಡಿನಲ್ಲಿ ಕನಿಷ್ಠ ತಾಪಮಾನದಲ್ಲಿ 2 ರಿಂದ 3 ಡಿಗ್ರಿ ಸೆಲ್ಸಿಯಸ್‌ನಷ್ಟು ಇಳಿಕೆಯಾಗಲಿದೆ. ದಕ್ಷಿಣ ಒಳನಾಡು ಮತ್ತು ಕರಾವಳಿಯಲ್ಲಿ ತಾಪಮಾನದಲ್ಲಿ ಹೆಚ್ಚಿನ ಬದಲಾವಣೆ ಇರುವುದಿಲ್ಲ.

Subscribe for Free and Support Us 

ನಿಮ್ಮ ಈ - ಮೇಲ್ ಬಳಸಿ 👇ಇದೀಗ ಉಚಿತವಾಗಿ 🆓 ಚಂದಾದಾರರಾಗಿ..!  ನಿಮಗೆ ನಮ್ಮ ಕಥೆಗಳು, ಹಾಡುಗಳು ಮತ್ತು ಮಾಹಿತಿ ಇಷ್ಟವಾದರೆ ನಿಮ್ಮ ಸಮೂಹಕ್ಕೆ ಶೇರ್ ಮಾಡುವುದನ್ನ ಮರೆಯದಿರಿ 
RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

×