HomeNewsಶಾಮನೂರು ಶಿವಶಂಕರಪ್ಪ ನಿಧನ: ದಾವಣಗೆರೆಯಲ್ಲಿ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ; ಅಂತ್ಯಕ್ರಿಯೆ ಎಲ್ಲಿ?

ಶಾಮನೂರು ಶಿವಶಂಕರಪ್ಪ ನಿಧನ: ದಾವಣಗೆರೆಯಲ್ಲಿ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ; ಅಂತ್ಯಕ್ರಿಯೆ ಎಲ್ಲಿ?

Shamanur Shivashankarappa

Senior Congress Mla Shamanur Shivashankarappa Passes Away

ವಿಧಾನಸಭೆಯ ಹಿರಿಯ ಶಾಸಕ, ಮಾಜಿ ಸಚಿವ ಶಾಮನೂರು ಶಿವಶಂಕಪ್ಪ ಅವರು 95ನೇ ವಯಸ್ಸಿನಲ್ಲಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಭಾನುವಾರ ಸಂಜೆ ಕೊನೆಯುಸಿರೆಳೆದರು. ದಾವಣಗೆರೆಯಲ್ಲಿ ಮಧ್ಯಾಹ್ನ ಮೂರರವರೆಗೂ ಸಾರ್ವಜನಿಕ ವೀಕ್ಷಣೆಗೆ ಅವಕಾಶವಿದ್ದು, ಆನಂತರ ಲಿಂಗಾಯತ ಸಂಪ್ರದಾಯದಂತೆ ಕಲ್ಲೇಶ್ವರ ಮಿಲ್‌ನಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎನ್ನಲಾಗಿದೆ.

shamanuru shivashankarappa
ಕಾಂಗ್ರೆಸ್‌ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ನಿಧನ.

ಬೆಂಗಳೂರು: ಕರ್ನಾಟಕ ವಿಧಾನಸಭೆ ಹಿರಿಯ ಶಾಸಕ, ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ನಿಧನರಾಗಿದ್ದಾರೆ. 95 ವರ್ಷದ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಶಿವಶಂಕರಪ್ಪ ಅವರ ಪಾರ್ಥಿವ ಶರೀರವನ್ನು ಬೆಂಗಳೂರಿನಿಂದ ದಾವಣಗೆರೆಗೆ ತರಲಾಗಿದ್ದು, ಅಂತಿಮ ವಿಧಿವಿಧಾನಗಳು ಮತ್ತು ಸಾರ್ವಜನಿಕ ದರ್ಶನಕ್ಕೆ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ.
ಕಳೆದ ಕೆಲ ವರ್ಷಗಳಿಂದ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಶಿವಶಂಕಪ್ಪ ಅವರು ಸ್ಪರ್ಶ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾದ ಹಿನ್ನೆಲೆ ಭಾನುವಾರ ಸಂಜೆ ಮೃತಪಟ್ಟಿದ್ದಾರೆ.
ಮೊದಲಿಗೆ ಶಾಮನೂರು ಶಿವಶಂಕರಪ್ಪ ಪಾರ್ಥೀವ ಶರೀರ ಅವರ ಹಿರಿಯ ಪುತ್ರ ಎಸ್.ಎಸ್. ಬಕ್ಕೇಶ್ ಅವರ ನಿವಾಸಕ್ಕೆ ಕೊಂಡೊಯ್ಯಲಾಯಿತು. ಅಲ್ಲಿ ಪಾರ್ಥಿವ ಶರೀರಕ್ಕೆ ವಿಶೇಷ ಪೂಜೆ ಸಲ್ಲಿಸಿ, ಧಾರ್ಮಿಕ ವಿಧಿವಿಧಾನಗಳು ಅವರಗೊಳ್ಳದ ಓಂಕಾರೇಶ್ವರ ಶಿವಾಚಾರ್ಯ ಸ್ವಾಮೀಜಿ ಮತ್ತು ಕಣವಕೊಪ್ಪ ಸ್ವಾಮೀಜಿ ಅವರ ನೇತೃತ್ವದಲ್ಲಿ ನೆರವೇರಿತು.
ಬಳಿಕ, ಮೃತದೇಹವನ್ನು ದ್ವಿತೀಯ ಪುತ್ರ ಎಸ್.ಎಸ್. ಗಣೇಶ್ ಅವರ ನಿವಾಸಕ್ಕೆ ಕೊಂಡೊಯ್ದು ಪೂಜೆ ಸಲ್ಲಿಸಿ, ಕೊನೆಗೆ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಅವರ ನಿವಾಸದಲ್ಲಿ ಪೂಜೆ ಸಲ್ಲಿಸಲಾಗುತ್ತದೆ. ಅಂತಿಮವಾಗಿ ಸಾರ್ವಜನಿಕ ದರ್ಶನಕ್ಕೆ ತೆಗೆದುಕೊಂಡು ಹೋಗಲಾಗುತ್ತದೆ

ಮಧ್ಯಾಹ್ನ 3 ಗಂಟೆಯವರೆಗೆ ಅಂತಿಮ ದರ್ಶನ

ಕುಟುಂಬದ ವಿಧಿವಿಧಾನಗಳು ಮುಗಿದ ಬಳಿಕ, ಮಧ್ಯಾಹ್ನ 12 ಗಂಟೆಗೆ ಶಾಮನೂರು ಶಿವಶಂಕರಪ್ಪ ಅವರ ಪಾರ್ಥಿವ ಶರೀರವನ್ನು ನಗರದ ಪಿ.ಜೆ. ಬಡಾವಣೆಯಲ್ಲಿರುವ ಹೈಸ್ಕೂಲ್ ಮೈದಾನಕ್ಕೆ ಸ್ಥಳಾಂತರಿಸಲಾಗುತ್ತದೆ. ಮಧ್ಯಾಹ್ನ 12 ಗಂಟೆಯಿಂದ 3 ಗಂಟೆಯವರೆಗೆ ಸಾರ್ವಜನಿಕರಿಗೆ ಅಂತಿಮ ದರ್ಶನ ಪಡೆಯಲು ಇಲ್ಲಿ ಸೂಕ್ತ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಪತ್ನಿ ಸಮಾಧಿ ಪಕ್ಕದಲ್ಲೇ ಅಂತ್ಯಕ್ರಿಯ

ಶಾಮನೂರು ಶಿವಶಂಕರಪ್ಪನವರ ಅಂತಿಮ ದರ್ಶನದ ಬಳಿಕ ದಾವಣಗೆರೆಯ ಪ್ರಮುಖ ರಸ್ತೆಗಳಲ್ಲಿ ಪಾರ್ಥಿವ ಶರೀರದ ಮೆರವಣಿಗೆ ನಡೆಯಲಿದ್ದು, ಸಂಜೆ 5 ಗಂಟೆಯ ಸುಮಾರಿಗೆ ಲಿಂಗಾಯತ ಸಂಪ್ರದಾಯದಂತೆ ಅಂತ್ಯಕ್ರಿಯೆ ನಡೆಯಲಿದೆ. ಶಾಮನೂರು ಅವರ ಧರ್ಮಪತ್ನಿ ಪಾರ್ವತಮ್ಮ ಸಮಾಧಿ ಕಲ್ಲೇಶ್ವರ ಮಿಲ್‌ನಲ್ಲಿದೆ ಅಲ್ಲಿಯೇ ಶಾಮನೂರು ಶಿವಶಂಕರಪ್ಪನವರ ಅಂತ್ಯಕ್ರಿಯೆ ನಡೆಯಲಿದೆ.

Subscribe for Free and Support Us 

ನಿಮ್ಮ ಈ - ಮೇಲ್ ಬಳಸಿ 👇ಇದೀಗ ಉಚಿತವಾಗಿ 🆓 ಚಂದಾದಾರರಾಗಿ..!  ನಿಮಗೆ ನಮ್ಮ ಕಥೆಗಳು, ಹಾಡುಗಳು ಮತ್ತು ಮಾಹಿತಿ ಇಷ್ಟವಾದರೆ ನಿಮ್ಮ ಸಮೂಹಕ್ಕೆ ಶೇರ್ ಮಾಡುವುದನ್ನ ಮರೆಯದಿರಿ 
kannadafolks
kannadafolkshttps://kannadafolks.in/
ಜನಪದ ಜಾತಿ, ಮತ, ಧರ್ಮ ಮೀರಿದ್ದು. ಅದು ಮಾತು, ಹಾಡು ಮೂಲಕ ಒಬ್ಬರಿಂದ ಮತ್ತೊಬ್ಬರಿಗೆ ಪಸರಿಸಿದ ಸಂಸ್ಕೃತಿ. ನಾವಿಂದು ಆಕಾಶದಿಂದ, ಸಾಗರದ ತಳದವರೆಗೆ ಹೋಗಿ ಅನ್ವೇಷನೆ ಯಾಗಿದೆ.
RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

×