HomeNewsParamedical student found dead in Dharwad - ಪ್ಯಾರಾಮೆಡಿಕಲ್ ವಿದ್ಯಾರ್ಥಿನಿ ಬರ್ಬರ ಹತ್ಯೆ |Kannada...

Paramedical student found dead in Dharwad – ಪ್ಯಾರಾಮೆಡಿಕಲ್ ವಿದ್ಯಾರ್ಥಿನಿ ಬರ್ಬರ ಹತ್ಯೆ |Kannada Folks

ಪ್ಯಾರಾಮೆಡಿಕಲ್ ಶಿಕ್ಷಣ ಮುಗಿಸಿ ಉದ್ಯೋಗಕ್ಕಾಗಿ ಹುಡುಕಾಟ ನಡೆಸುತ್ತಿದ್ದ 19 ವರ್ಷದ ವಿದ್ಯಾರ್ಥಿನಿಯೋರ್ವಳು ಬರ್ಬರವಾಗಿ ಹತ್ಯೆಗೀಡಾಗಿದ್ದಾಳೆ. ನಿನ್ನೆ ಲ್ಯಾಬ್‌ಗೆ ಹೋಗಿದ್ದ ಝಕಿಯಾ ಮುಲ್ಲಾ ಶವ ಇಂದು ಬೆಳಗ್ಗೆ ನಗರದ ಹೊರವಲಯದಲ್ಲಿ ಪತ್ತೆಯಾಗಿದೆ.

Paramedical student found dead in Dharwad – ಪ್ಯಾರಾಮೆಡಿಕಲ್ ವಿದ್ಯಾರ್ಥಿನಿ ಬರ್ಬರ ಹತ್ಯೆ

ಪ್ಯಾರಾಮೆಡಿಕಲ್ ಶಿಕ್ಷಣ ಮುಗಿಸಿ ಉದ್ಯೋಗಕ್ಕಾಗಿ ಹುಡುಕಾಟ ನಡೆಸುತ್ತಿದ್ದ 19 ವರ್ಷದ ವಿದ್ಯಾರ್ಥಿನಿಯೋರ್ವಳು ಬರ್ಬರವಾಗಿ ಹತ್ಯೆಗೀಡಾಗಿದ್ದಾಳೆ. ನಿನ್ನೆ ಲ್ಯಾಬ್‌ಗೆ ಹೋಗಿದ್ದ ಝಕಿಯಾ ಮುಲ್ಲಾ ಶವ ಇಂದು ಬೆಳಗ್ಗೆ ನಗರದ ಹೊರವಲಯದಲ್ಲಿ ಪತ್ತೆಯಾಗಿದೆ.

ಮೃತ ವಿದ್ಯಾರ್ಥಿನಿ ಧಾರವಾಡದ ಗಾಂಧಿ ಚೌಕ್ ನಿವಾಸಿಯಾಗಿದ್ದ 19 ವರ್ಷದ ಝಕಿಯಾ ಮುಲ್ಲಾ ಎಂದು ತಿಳಿದುಬಂದಿದೆ. ಮಂಗಳವಾರ ಸಂಜೆ ಮನೆಯಿಂದ ಲ್ಯಾಬ್‌ಗೆ ಹೋಗಿ ಬರುವುದಾಗಿ ಹೇಳಿ ತೆರಳಿದ್ದ ವಿದ್ಯಾರ್ಥಿನಿ, ರಾತ್ರಿಯಾದರೂ ಮನೆಗೆ ಹಿಂದಿರುಗಿರಲಿಲ್ಲ. ಇದರಿಂದ ಆತಂಕಗೊಂಡ ಕುಟುಂಬಸ್ಥರು ಹುಡುಕಾಟ ನಡೆಸುತ್ತಿದ್ದರು. ಇಂದು ಮುಂಜಾನೆ ಮನಸೂರು ರಸ್ತೆಯ ಶಾಸಕ ವಿನಯ್ ಕುಲಕರ್ಣಿ ಅವರಿಗೆ ಸೇರಿದ ವಿನಯ್ ಡೈರಿ ಸಮೀಪ ವಿದ್ಯಾರ್ಥಿನಿಯ ಶವ ಪತ್ತೆಯಾಗಿದೆ.ಧಾರವಾಡ: ಪ್ಯಾರಾಮೆಡಿಕಲ್ ವಿದ್ಯಾರ್ಥಿನಿ ಬರ್ಬರ ಹತ್ಯೆ; ಶವ ಬಿಸಾಡಿ ಹೋದ ದುಷ್ಕರ್ಮಿಗಳು!

Read this – Male Mahadeshwara hills; ಮಲೆ ಮಹದೇಶ್ವರ ದೇವಸ್ಥಾನಕ್ಕೆ ತೆರಳುತ್ತಿದ್ದ ವ್ಯಕ್ತಿ ಮೇಲೆ ಚಿರತೆ ದಾಳಿ | Kannada Folks

ಬೇರೆ ಕಡೆ ವಿದ್ಯಾರ್ಥಿನಿಯನ್ನು ಕೊಲೆ ಮಾಡಿ, ನಂತರ ಸಾಕ್ಷ್ಯ ನಾಶಪಡಿಸುವ ಉದ್ದೇಶದಿಂದ ಇಲ್ಲಿಗೆ ತಂದು ಶವವನ್ನು ಬಿಸಾಡಿ ಹೋಗಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಧಾರವಾಡ ಗ್ರಾಮೀಣ ಹಾಗೂ ವಿದ್ಯಾಗಿರಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದು ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಮರಣೋತ್ತರ ಪರೀಕ್ಷೆ ವರದಿ ಕೊಲೆ ಕುರಿತಂತೆ ಹೆಚ್ಚಿನ ಮಾಹಿತಿ ತಿಳಿಯಲಿದೆ. ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaFolks channel on WhatsApp

Visit the Kannadafolks.in follow the latest updates

Subscribe and Receive exclusive content and updates on your favourite topics

Subscribe to KannadaFloks YouTube Channel and watch Videos

Subscribe for Free and Support Us 

ನಿಮ್ಮ ಈ - ಮೇಲ್ ಬಳಸಿ 👇ಇದೀಗ ಉಚಿತವಾಗಿ 🆓 ಚಂದಾದಾರರಾಗಿ..!  ನಿಮಗೆ ನಮ್ಮ ಕಥೆಗಳು, ಹಾಡುಗಳು ಮತ್ತು ಮಾಹಿತಿ ಇಷ್ಟವಾದರೆ ನಿಮ್ಮ ಸಮೂಹಕ್ಕೆ ಶೇರ್ ಮಾಡುವುದನ್ನ ಮರೆಯದಿರಿ 
RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

×