Droupadi Murmu – ‘ನನ್ನ ಸರ್ಕಾರ ನಿಜವಾದ ಸಾಮಾಜಿಕ ನ್ಯಾಯಕ್ಕೆ ಬದ್ಧ’: ರಾಷ್ಟ್ರಪತಿ ಭಾಷಣ
ನನ್ನ ಸರ್ಕಾರ “ನಿಜವಾದ ಸಾಮಾಜಿಕ ನ್ಯಾಯಕ್ಕೆ ಬದ್ಧವಾಗಿದೆ” ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಬುಧವಾರ ಹೇಳಿದ್ದಾರೆ.

Read this – India emerges big winner ವ್ಯಾಪಾರ ಒಪ್ಪಂದದಲ್ಲಿ ಭಾರತ ಬಿಗ್ ವಿನ್ನರ್: ಅಮೆರಿಕ ಒಪ್ಪಿಕೊಳ್ತಾ?
ಇಂದು ಲೋಕಸಭೆ ಮತ್ತು ರಾಜ್ಯಸಭೆಯ ಜಂಟಿ ಅಧಿವೇಶನವನ್ನುದ್ದೇಶಿಸಿ ಮಾತನಾಡಿದ ಮುರ್ಮು, ಪ್ರಸ್ತುತ ಸರ್ಕಾರವು ದೇಶದ ಅಭಿವೃದ್ಧಿಯನ್ನು ತ್ವರಿತಗೊಳಿಸಿದೆ. ಮಹಿಳೆಯರು ಮತ್ತು ಸಾಮಾಜಿಕವಾಗಿ, ಆರ್ಥಿಕವಾಗಿ ಹಿಂದುಳಿದ ಸಮುದಾಯಗಳನ್ನು ಒಳಗೊಂಡಂತೆ ಸಾಮಾಜಿಕ ಕಲ್ಯಾಣ ನೀತಿಗಳನ್ನು ಜಾರಿಗೆ ತರುವುದರಿಂದ ಹಿಡಿದು ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ತ್ವರಿತ ಪ್ರಗತಿ ಸಾಧಿಸುತ್ತಿದೆ ಎಂದು ಸರ್ಕಾರದ ಹಲವು ಸಾಧನೆಗಳನ್ನು ಪಟ್ಟಿ ಮಾಡಿದರು.
ದೇಶದ ಸುಮಾರು 95 ಕೋಟಿ ನಾಗರಿಕರಿಗೆ ಸಾಮಾಜಿಕ ಭದ್ರತಾ ಸೌಲಭ್ಯಗಳು ಈಗ ಲಭ್ಯವಾಗಿವೆ ಮತ್ತು ಕಳೆದ 10 ವರ್ಷಗಳಲ್ಲಿ 25 ಕೋಟಿ ಭಾರತೀಯರು ಬಡತನದಿಂದ ಮುಕ್ತರಾಗಿದ್ದಾರೆ ಎಂದು ರಾಷ್ಟ್ರಪತಿ ತಿಳಿಸಿದರು.
Follow Us
Follow KannadaFolks channel on WhatsApp
Visit the Kannadafolks.in follow the latest updates
Subscribe and Receive exclusive content and updates on your favourite topics
Subscribe to KannadaFloks YouTube Channel and watch Videos
Support Us