HomeNewsಕರ್ನಾಟಕದ ಉರ್ದು ಪ್ರಾಥಮಿಕ ಹಾಗು ಪ್ರೌಢ ಶಾಲೆ ಅವಧಿ ಬದಲಾವಣೆ, ಕಾರಣವೇನು?

ಕರ್ನಾಟಕದ ಉರ್ದು ಪ್ರಾಥಮಿಕ ಹಾಗು ಪ್ರೌಢ ಶಾಲೆ ಅವಧಿ ಬದಲಾವಣೆ, ಕಾರಣವೇನು?

2025-26ನೆ ಶೈಕ್ಷಣಿಕ ಸಾಲಿನಲ್ಲಿ ಕರ್ನಾಟಕದ ಎಲ್ಲ ಸರಕಾರಿ, ಅನುದಾನಿತ ಮತ್ತು ಅನುದಾನ ರಹಿತ ಉರ್ದು ಮಾಧ್ಯಮದ ಕಿರಿಯ, ಹಿರಿಯ ಹಾಗೂ ಪ್ರೌಢಶಾಲೆಗಳ ಅವಧಿ (ಶಾಲಾ ವೇಳಾಪಟ್ಟಿ) ಬದಲಾವಣೆ ಮಾಡಲಾಗಿದೆ. ಈ ಬಗ್ಗೆ ಉರ್ದು ಮತ್ತು ಇತರೆ ಅಲ್ಪಸಂಖ್ಯಾತ ಭಾಷಾ ಶಾಲೆಗಳ ನಿರ್ದೇಶನಾಲಯ ಅಧಿಕೃತ ಸುತ್ತೋಲೆ ಹೊರಡಿಸಿದೆ. ಹಾಗಾದ್ರೆ, ಹೊಸ ವೇಳಾಪಟ್ಟಿ ಹೇಗಿದೆ ಎನ್ನುವುದು ಈ ಕೆಳಗಿನಂತಿದೆ ನೋಡಿ.

ಮುಸ್ಲಿಮರ ಪವಿತ್ರ ಹಬ್ಬ ರಂಜಾನ್ ಹಬ್ಬ   ಹಿನ್ನೆಲೆಯಲ್ಲಿ ಕರ್ನಾಟಕದ ಉರ್ದು ಮಾಧ್ಯಮ ಕಿರಿಯ ಪ್ರಾಥಮಿಕ ಮತ್ತು ಮಾಧ್ಯಮಿಕ ಶಾಲೆಗಳ ಶಾಲಾ ಸಮಯವನ್ನು ಪರಿಷ್ಕರಿಸಲಾಗಿದೆ. ರಂಜಾನ್ ತಿಂಗಳಲ್ಲಿ ಉರ್ದು ಮಾಧ್ಯಮ ಕಿರಿಯ ಪ್ರಾಥಮಿಕ ಮತ್ತು ಮಾಧ್ಯಮಿಕ ಶಾಲೆಗಳ ಶಾಲಾ ಸಮಯವನ್ನು ಬದಲಾವಣೆ ಮಾಡಲಾಗಿದ್ದು, ಬೆಳಿಗ್ಗೆ 8 ರಿಂದ ಮಧ್ಯಾಹ್ನ 12.45 ರವರೆಗೆ ಮಾತ್ರ ತರಗತಿ ನಡೆಸಲು ಆದೇಶಿಸಲಾಗಿದೆ. ಈ ಕುರಿತು ಉರ್ದು ಮತ್ತು ಇತರೆ ಅಲ್ಪಸಂಖ್ಯಾತ ಭಾಷಾ ಶಾಲೆಗಳ ನಿರ್ದೇಶನಾಲಯ ಅಧಿಕೃತವಾಗಿ ಸುತ್ತೋಲೆ ಹೊರಡಿಸಿದೆ.

READ THIS https://kannadafolks.in › ಕರ್ನಾಟಕದ-ಉರ್ದು-ಪ್ರಾಥಮಿಕ

 

ಬೆಳಿಗ್ಗೆ 8ರಿಂದ ಮಧ್ಯಾಹ್ನ 12.45ರವರೆಗೆ ತರಗತಿ

ಸಾರ್ವಜನಿಕ ಶಿಕ್ಷಣ ಇಲಾಖೆ ಹೊರಡಿಸಿರುವ ಸುತ್ತೋಲೆಯ ಪ್ರಕಾರ, ರಾಜ್ಯದ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಉರ್ದು ಮಾಧ್ಯಮದ ಕಿರಿಯ, ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಈ ಪರಿಷ್ಕೃತ ಸಮಯ ಅನ್ವಯವಾಗಲಿದೆ. ರಂಜಾನ್ ತಿಂಗಳು ಆರಂಭವಾಗುವ ದಿನದಿಂದ 2026ರ ಮಾರ್ಚ್ 20ರವರೆಗೆ ಶಾಲೆಗಳು ಬೆಳಿಗ್ಗೆ 8.00 ಗಂಟೆಯಿಂದ ಮಧ್ಯಾಹ್ನ 12.45ರವರೆಗೆ ಕಾರ್ಯನಿರ್ವಹಿಸಲಿವೆ. ಸಾಮಾನ್ಯ ದಿನಗಳಲ್ಲಿ ಶಾಲೆಗಳು ಬೆಳಿಗ್ಗೆ 10 ಗಂಟೆಯಿಂದ ಸಂಜೆ 4.20ರವರೆಗೆ ನಡೆಯುತ್ತಿದ್ದವು. ಆದರೆ, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಮನವಿಯನ್ನು ಪುರಸ್ಕರಿಸಿ ಮತ್ತು 2002ರಲ್ಲಿದ್ದ ಹಳೆಯ ಆದೇಶವನ್ನು ಪರಿಶೀಲಿಸಿ ಸರ್ಕಾರ ಈ ಹೊಸ ವೇಳಾಪಟ್ಟಿಯನ್ನು ಪ್ರಕಟಿಸಿದೆ

READ THIShttps://kannadafolks.in › ಕರ್ನಾಟಕದ-ಉರ್ದು-ಪ್ರಾಥಮಿಕ

2025-26ನೇ ಶೈಕ್ಷಣಿಕ ಸಾಲಿನಲ್ಲಿ ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಉರ್ದು ಮಾಧ್ಯಮದ ಕಿರಿಯ, ಹಿರಿಯ ಹಾಗೂ ಪ್ರೌಢಶಾಲೆಗಳು ರಂಜಾನ್ ತಿಂಗಳು ಪ್ರಾರಂಭವಾದ ದಿನಾಂದಿಂದ ದಿನಾಂಕ: 20-03-2026ರವರೆಗೆ ಮಾತ್ರ ಶಾಲಾ ಅವಧಿಯ ವೇಳಾಪಟ್ಟಿಯ ಬದಲಾವಣೆ ಮಾಡಲಾಗಿದೆ.

Subscribe for Free and Support Us 

ನಿಮ್ಮ ಈ - ಮೇಲ್ ಬಳಸಿ 👇ಇದೀಗ ಉಚಿತವಾಗಿ 🆓 ಚಂದಾದಾರರಾಗಿ..!  ನಿಮಗೆ ನಮ್ಮ ಕಥೆಗಳು, ಹಾಡುಗಳು ಮತ್ತು ಮಾಹಿತಿ ಇಷ್ಟವಾದರೆ ನಿಮ್ಮ ಸಮೂಹಕ್ಕೆ ಶೇರ್ ಮಾಡುವುದನ್ನ ಮರೆಯದಿರಿ 
RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

×