Airport Security Alert – ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ
ಪಶ್ಚಿಮ ಬಂಗಾಳದ ಕೋಲ್ಕತ್ತಾ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶನಿವಾರ ಬೆಳಿಗ್ಗೆ ಬಾಂಬ್ ಬೇದರಿಕೆ ಪತ್ರವೊಂದು ಪತ್ತೆಯಾಗಿದೆ. ಈ ವೇಳೆ ಪ್ರಯಾಣಿಕರಲ್ಲಿ ಭಾರಿ ಆತಂಕ ಮೂಡಿಸಿದೆ. ಶಿಲ್ಲಾಂಗ್ಗೆ ಹೊರಡಲು ಸಿದ್ಧವಾಗಿದ್ದ ಇಂಡಿಗೋ ವಿಮಾನದ (Indigo flight )ಶೌಚಾಲಯದಲ್ಲಿ ಬಾಂಬ್ ಬೆದರಿಕೆ ಇರುವ ಪತ್ರವೊಂದು ಪತ್ತೆಯಾಗಿದೆ. ಕೋಲ್ಕತ್ತಾದ ನೇತಾಜಿ ಸುಭಾಷ್ ಚಂದ್ರ ಬೋಸ್ ವಿಮಾನ ನಿಲ್ದಾಣದಿಂದ ಮೇಘಾಲಯದ ಶಿಲ್ಲಾಂಗ್ಗೆ ತೆರಳಬೇಕಿದ್ದ ಇಂಡಿಗೋ ವಿಮಾನ (6E-7304) ಬೆಳಿಗ್ಗೆ 9:15ಕ್ಕೆ ಹೊರಡಲು ಸಿದ್ಧವಾಗಿತ್ತು.
Read this – Highlights news of the day-ದಿನದ ಪ್ರಮುಖ ಸುದ್ದಿಗಳು
ಪ್ರಯಾಣಿಕರು ವಿಮಾನಕ್ಕೆ ಹತ್ತುತ್ತಿದ್ದ ಸಂದರ್ಭದಲ್ಲಿ, ವಿಮಾನದ ಸಿಬ್ಬಂದಿ ಶೌಚಾಲಯದಲ್ಲಿ ಒಂದು ಕಾಗದದ ಚೂರನ್ನು ನೋಡಿದ್ದಾರೆ. ಅದರಲ್ಲಿ ವಿಮಾನದೊಳಗೆ ಬಾಂಬ್ ಇದೆ ಎಂದು ಬರೆಯಲಾಗಿತ್ತು. ತಕ್ಷಣವೇ ವಿಮಾನದಲ್ಲಿದ್ದ ಎಲ್ಲಾ ಪ್ರಯಾಣಿಕರನ್ನು ಕೆಳಗಿಳಿಸಲಾಯಿತು. ವಿಮಾನವನ್ನು ತಪಾಸಣೆಗಾಗಿ ‘ಐಸೋಲೇಷನ್ ಬೇ’ಗೆ (Isolation Bay) ಸ್ಥಳಾಂತರಿಸಲಾಯಿತು. ತಪಾಸಣೆ ಪ್ರಕ್ರಿಯೆ ನಡೆಯುತ್ತಿದೆ ಮತ್ತು ಭದ್ರತೆಯನ್ನು ತೀವ್ರಗೊಳಿಸಲಾಗಿದೆ, ಎಂದು ವಿಮಾನ ನಿಲ್ದಾಣದ ನಿರ್ದೇಶಕ ವಿಕ್ರಮ್ ಸಿಂಗ್ ತಿಳಿಸಿದ್ದಾರೆ.
ಹೈದರಾಬಾದ್ ವಿಮಾನ ನಿಲ್ದಾಣದಲ್ಲೂ ಬಾಂಬ್ ಬೆದರಿಕೆ:
ತೆಲಂಗಾಣದ ಹೈದರಾಬಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೂ ಇಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿತ್ತು. ಬಹ್ರೇನ್ನಿಂದ ಬಂದ ಗಲ್ಫ್ ಏರ್ ವಿಮಾನವು ಹೈದರಾಬಾದ್ನಲ್ಲಿ ಇಳಿಯುವ ಸಮಯದಲ್ಲಿ ಟರ್ಮಿನಲ್ಗಳಲ್ಲಿ ಬಾಂಬ್ ಸ್ಫೋಟಗೊಳ್ಳಲಿದೆ ಎಂದು ಇಮೇಲ್ನಲ್ಲಿ ಎಚ್ಚರಿಸಲಾಗಿತ್ತು. ಭದ್ರತಾ ಸಿಬ್ಬಂದಿ ಇಡೀ ವಿಮಾನ ನಿಲ್ದಾಣವನ್ನು ಪರಿಶೀಲನೆ ನಡೆಸಿದ್ದಾರೆ. ನಂತರ ಯಾವುದೇ ಸ್ಫೋಟಕ ವಸ್ತುಗಳು ಪತ್ತೆಯಾಗಲಿಲ್ಲ ಎಂದು ಖಚಿತಪಡಿಸಿದೆ. ಇದು ಹುಸಿ ಬಾಂಬ್ ಬೆದರಿಕೆ (Hoax) ಎಂದು ತಿಳಿದುಬಂದಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ಇಮೇಲ್ ಕಳುಹಿಸಿದ ವ್ಯಕ್ತಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.
Follow Us
Follow KannadaFolks channel on WhatsApp
Visit the Kannadafolks.in follow the latest updates
Subscribe and Receive exclusive content and updates on your favourite topics
Subscribe to KannadaFloks YouTube Channel and watch Videos
Support Us 

