ಆಲೂ ಪೋಹಾ ಬೋಂಡಾ – Aloo Poha Bonda Recipe in Kannada
ಬೇಕಾಗುವ ಪದಾರ್ಥಗಳು…
- ಬೇಯಿಸಿದ ಆಲೂಗಡ್ಡೆ-ಮಧ್ಯಮ ಗಾತ್ರ 1
- ಕಡಲೆಹಿಟ್ಟು-ಸ್ವಲ್ಲ
- ಅಕ್ಕಿಹಿಟ್ಟು- 1 ಚಮಚ
- ಪೇಪರ್ ಅವಲಕ್ಕಿ- 1/2 ಬಟ್ಟಲು
- ಅಚ್ಚ ಖಾರದ ಪುಡಿ- ಅರ್ಧ ಚಮಚ
- ಅರಿಶಿನದ ಪುಡಿ- ಅರ್ಧ ಚಮಚ
- ಬಿಳಿ ಎಳ್ಳು 1 ಚಮಚ
- ಉಪ್ಪು- ರುಚಿಗೆ ತಕ್ಕಷ್ಟು
- ಎಣ್ಣೆ- ಅಗತ್ಯವಿರುವಷ್ಟು
ಮಾಡುವ ವಿಧಾನ…
- ಬೇಯಿಸಿದ ಆಲೂಗಡ್ಡೆಯನ್ನು ಗಂಟಿಲ್ಲದೆ ಪುಡಿಮಾಡಿಕೊಳ್ಳಿ. ಪೇಪರ್ ಅವಲಕ್ಕಿಯನ್ನು ನೀರಿನಲ್ಲಿ ತೊಳೆದು,ಬಸಿದು ಆಲೂ ಪುಡಿಯೊಂದಿಗೆ ಸೇರಿಸಿ, ಎಳ್ಳು, ಉಪ್ಪು ಹಾಕಿ ಮಿಶ್ರಣ ಮಾಡಿ, ಸಣ್ಣ ಉಂಡೆಗಳನ್ನಾಗಿ ಮಾಡಿಕೊಳ್ಳಿ.
- ಇದೀಗ ಒಂದು ಪಾತ್ರೆಗೆ ಕಡಲೆಹಿಟ್ಟು, ಅಕ್ಕಿ ಹಿಟ್ಟು, ಅಚ್ಚ ಖಾರದ ಪುಡಿ ಹಾಗೂ ಅರಿಶಿನ, ಉಪ್ಪು ಹಾಗೂ ಸ್ವಲ್ಪ ನೀರು ಗಟ್ಟಿಯಾಗಿ ಮಿಶ್ರಣ ಮಾಡಿಕೊಳ್ಳಿ. ಒಲೆಯ ಮೇಲೆ ಎಣ್ಣೆ ಇಟ್ಟು ಬಿಸಿ ಮಾಡಿ.
- ಗಟ್ಟಿಯಾಗಿ ಕಲೆಸಿದ ಹಿಟ್ಟಿಗೆ ಉಂಡೆಗಳನ್ನು ಅದ್ದಿ, ಕಾದ ಎಣ್ಣೆಗೆ ಹಾಕಿ ಚಿನ್ನದ ಬಣ್ಣ ಬರುವವರೆಗೆ ಕರಿದರೆ ರುಚಿಕರವಾದ ಆಲೂ ಪೋಹಾ ಬೋಂಡಾ ಸವಿಯಲು ಸಿದ್ಧ.
Papillon the tale of a victim Book Review K P Poornachandra Tejaswi
Subscribe for Free and Support Us
ನಿಮ್ಮ ಈ - ಮೇಲ್ ಬಳಸಿ 👇ಇದೀಗ ಉಚಿತವಾಗಿ 🆓 ಚಂದಾದಾರರಾಗಿ..! ನಿಮಗೆ ನಮ್ಮ ಕಥೆಗಳು, ಹಾಡುಗಳು ಮತ್ತು ಮಾಹಿತಿ ಇಷ್ಟವಾದರೆ ನಿಮ್ಮ ಸಮೂಹಕ್ಕೆ ಶೇರ್ ಮಾಡುವುದನ್ನ ಮರೆಯದಿರಿ