Homeಕನ್ನಡ ಫೊಕ್ಸ್B J P leadery khemchand singh takes oath as manipur cmಮಣಿಪುರ ನೂತನ...

B J P leadery khemchand singh takes oath as manipur cmಮಣಿಪುರ ನೂತನ ಸಿಎಂ ಆಗಿ ಖೇಮ್‌ಚಂದ್ ಸಿಂಗ್ ಪ್ರಮಾಣ ವಚನ ಸ್ವೀಕಾರ

ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆಯನ್ನು ರದ್ದುಗೊಳಿಸಿದ ನಂತರ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ನಾಯಕ ವೈ ಖೇಮ್‌ಚಂದ್ ಸಿಂಗ್ ಅವರು ಬುಧವಾರ ಪ್ರಮಾಣ ವಚನ ಸ್ವೀಕರಿಸಿದರು

B J P leader y khemchandsingh takes oath as manipur cm ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆಯನ್ನು ರದ್ದುಗೊಳಿಸಿದ ನಂತರ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ನಾಯಕ ವೈ ಖೇಮ್‌ಚಂದ್ ಸಿಂಗ್ ಅವರು ಬುಧವಾರ ಪ್ರಮಾಣ ವಚನ ಸ್ವೀಕರಿಸಿದರು

Who is Yumnam Khemchand, set to be new Manipur CM? BJP to form new govt  after year of Prez rule in violence-hit state| India News

ಹಿಂಸಾಚಾರ ಪೀಡಿತ ಮಣಿಪುರದಲ್ಲಿ ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ಒಂದು ವರ್ಷದ ರಾಷ್ಟ್ರಪತಿ ಆಡಳಿತ ಅಂತ್ಯವಾಗಿದ್ದು, ಮತ್ತೆ ಬಿಜೆಪಿ ಸರ್ಕಾರ ರಚನೆಯಾಗಿದೆ.

ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆಯನ್ನು ರದ್ದುಗೊಳಿಸಿದ ನಂತರ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ನಾಯಕ ವೈ ಖೇಮ್‌ಚಂದ್ ಸಿಂಗ್ ಅವರು ಬುಧವಾರ ಪ್ರಮಾಣ ವಚನ ಸ್ವೀಕರಿಸಿದರು.

ಇಂದು ಇಂಫಾಲ್‌ನ ಲೋಕ ಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ರಾಜ್ಯಪಾಲ ಅಜಯ್ ಕುಮಾರ್ ಭಲ್ಲಾ ಅವರು ಸಿಂಗ್ ಅವರಿಗೆ ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣ ವಚನ ಬೋಧಿಸಿದರು.

Read Here BJP MLA Basanagouda Patil Yatnal

ನಂತರ ಕುಕಿ-ಝೋ ಸಮುದಾಯದ ಬಿಜೆಪಿ ಶಾಸಕ ನೆಮ್ಚಾ ಕಿಪ್ಗೆನ್ ಮತ್ತು ನಾಗಾ ಮೂಲದ ಲೋಸಿ ದಿಖೋ ಅವರು ಉಪಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದರು.

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ರದ್ದುಗೊಳಿಸಿದ್ದಾರೆ ಎಂದು ಕೇಂದ್ರ ಗೃಹ ಸಚಿವಾಲಯ(MHA) ಅಧಿಸೂಚನೆ ಹೊರಡಿಸಿದೆ. ಈ ಮೂಲಕ ಹಿಂಸಾಚಾರ ಪೀಡಿತ ಈಶಾನ್ಯ ರಾಜ್ಯದಲ್ಲಿ ಹೊಸ ಚುನಾಯಿತ ಸರ್ಕಾರ ರಚನೆಗೆ ದಾರಿ ಮಾಡಿಕೊಡಲಾಗಿದೆ.

Read Here BJP MLA Basanagouda Patil Yatnal

ನಿನ್ನೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ವೈ ಖೇಮ್‌ಚಂದ್ ಸಿಂಗ್ ಅವರನ್ನು ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆ ಮಾಡಲಾಗಿತ್ತು. ಸಭೆಯಲ್ಲಿ ಮಾಜಿ ಸಿಎಂ ಬಿರೇನ್ ಸಿಂಗ್, ಬಿಜೆಪಿ ಶಾಸಕರು, ಪಕ್ಷದ ಕೇಂದ್ರ ವೀಕ್ಷಕ ತರುಣ್ ಚುಗ್ ಮತ್ತು ಬಿಜೆಪಿ ಈಶಾನ್ಯ ಉಸ್ತುವಾರಿ ಸಂಬಿತ್ ಪಾತ್ರ ಸೇರಿದಂತೆ ಇತರರು ಭಾಗವಹಿಸಿದ್ದರು.

ಸಿಂಗ್‌ಜಮೇ ಕ್ಷೇತ್ರದಿಂದ ಐದು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಸಿಂಗ್ ಅವರು ಈ ಹಿಂದೆ, ಬಿರೇನ್ ಸಿಂಗ್ ಸರ್ಕಾರದ ಎರಡನೇ ಅವಧಿಯಲ್ಲಿ, ಕ್ಯಾಬಿನೆಟ್ ಸಚಿವರಾಗಿ ಸೇವೆ ಸಲ್ಲಿಸಿದ್ದರು.

ಕಳೆದ ಮೇ 2023ರಿಂದ ಮಣಿಪುರದಲ್ಲಿ ಆರಂಭವಾದ ಮೈತೇಯಿ ಮತ್ತು ಕುಕಿ ಸಮುದಾಯಗಳ ನಡುವಿನ ಜನಾಂಗೀಯ ಸಂಘರ್ಷವು ರಾಜ್ಯದ ಕಾನೂನು ಸುವ್ಯವಸ್ಥೆಯನ್ನು ಹದಗೆಡಿಸಿತ್ತು. ಈ ಹಿನ್ನೆಲೆಯಲ್ಲಿ ಉಂಟಾದ ರಾಜಕೀಯ ಅಸ್ಥಿರತೆಯಿಂದಾಗಿ, ಅಂದಿನ ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್ ನೇತೃತ್ವದ ಸರ್ಕಾರ ಪತನಗೊಂಡ ನಂತರ, ಕಳೆದ ಒಂದು ವರ್ಷದಿಂದ ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ಜಾರಿಗೊಳಿಸಲಾಗಿತ್ತು.

Subscribe for Free and Support Us 

ನಿಮ್ಮ ಈ - ಮೇಲ್ ಬಳಸಿ 👇ಇದೀಗ ಉಚಿತವಾಗಿ 🆓 ಚಂದಾದಾರರಾಗಿ..!  ನಿಮಗೆ ನಮ್ಮ ಕಥೆಗಳು, ಹಾಡುಗಳು ಮತ್ತು ಮಾಹಿತಿ ಇಷ್ಟವಾದರೆ ನಿಮ್ಮ ಸಮೂಹಕ್ಕೆ ಶೇರ್ ಮಾಡುವುದನ್ನ ಮರೆಯದಿರಿ 
RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

×