HomeNewsBengaluru street Dog Feeding Rules-GBA ಗುರುತಿಸಿದ ಕೇಂದ್ರಗಳಲ್ಲಿ ಮಾತ್ರ ಬೀದಿ ನಾಯಿಗಳಿಗೆ ಆಹಾರ ಹಾಕಬೇಕು

Bengaluru street Dog Feeding Rules-GBA ಗುರುತಿಸಿದ ಕೇಂದ್ರಗಳಲ್ಲಿ ಮಾತ್ರ ಬೀದಿ ನಾಯಿಗಳಿಗೆ ಆಹಾರ ಹಾಕಬೇಕು

ಪ್ರಾಧಿಕಾರ (GBA) ಈಗ ಬೀದಿ ನಾಯಿಗಳಿಗೆ ಎಲ್ಲೆಂದರಲ್ಲಿ ಆಹಾರ ನೀಡುವುದಕ್ಕೆ ಬ್ರೇಕ್ ಹಾಕಲು ಮುಂದಾಗಿದೆ.

Bengaluru street Dog Feeding Rules-GBA ಗುರುತಿಸಿದ ಕೇಂದ್ರಗಳಲ್ಲಿ ಮಾತ್ರ ಬೀದಿ ನಾಯಿಗಳಿಗೆ ಆಹಾರ ಹಾಕಬೇಕು

ಬೆಂಗಳೂರಿನಲ್ಲಿ ಬೀದಿ ನಾಯಿಗಳ ದಾಳಿ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಈಗ ಬೀದಿ ನಾಯಿಗಳಿಗೆ ಎಲ್ಲೆಂದರಲ್ಲಿ ಆಹಾರ ನೀಡುವುದಕ್ಕೆ ಬ್ರೇಕ್ ಹಾಕಲು ಮುಂದಾಗಿದೆ. ಶ್ವಾನಪ್ರಿಯರು ಮತ್ತು ಸಾರ್ವಜನಿಕರ ನಡುವಿನ ಸಂಘರ್ಷವನ್ನು ತಪ್ಪಿಸಲು ಹಾಗೂ ಸ್ವಚ್ಛತೆಯನ್ನು ಕಾಪಾಡಲು ಈ ಕ್ರಮ ಕೈಗೊಳ್ಳಲಾಗಿದೆ. GBA ಅಡಿಯಲ್ಲಿ ಬರುವ ಐದೂ ನಗರ ಪಾಲಿಕೆಗಳಲ್ಲಿ ಪಶುಪಾಲನಾ ಇಲಾಖೆಯು ಒಟ್ಟು 450 ಅಧಿಕೃತ ಆಹಾರ ಕೇಂದ್ರಗಳನ್ನು ಗುರುತಿಸಿದೆ.ಬೀದಿ ನಾಯಿಗಳಿಗೆ ಆಹಾರ ನೀಡುವ 'ಕುಕುರ್ ತಿಹಾರ್' ಯೋಜನೆಗೆ BBMP ಚಾಲನೆ

ಶೀಘ್ರದಲ್ಲೇ ಈ ಗುರುತಿಸಲಾದ ಸ್ಥಳಗಳಲ್ಲಿ ಶ್ವಾನಗಳಿಗೆ ಆಹಾರ ನೀಡುವ ಸ್ಥಳ ಎಂಬ ಫಲಕಗಳನ್ನು ಅಳವಡಿಸಲಾಗುವುದು ಎಂದು ಹೇಳಿದ್ದಾರೆ. ಅಧಿಕೃತ ಸ್ಥಳಗಳನ್ನು ಬಿಟ್ಟು ರಸ್ತೆಗಳಲ್ಲಿ, ಪಾದಚಾರಿ ಮಾರ್ಗಗಳಲ್ಲಿ ಅಥವಾ ಸಾರ್ವಜನಿಕರಿಗೆ ತೊಂದರೆಯಾಗುವ ಕಡೆಗಳಲ್ಲಿ ಆಹಾರ ನೀಡಿದರೆ ದಂಡ ವಿಧಿಸಲು GBA ನಿರ್ಧರಿಸಿದೆ ಎಂದು ಹೇಳಿದ್ದಾರೆ. ಆಹಾರ ನೀಡುವವರು ಆ ಜಾಗವನ್ನು ಸ್ವಚ್ಛವಾಗಿಡಬೇಕು ಮತ್ತು ಜನದಟ್ಟಣೆ ಕಡಿಮೆ ಇರುವ ಸಮಯದಲ್ಲಿ ಆಹಾರ ನೀಡಬೇಕು ಎಂಬ ಸೂಚನೆಯೂ ಇದೆ.

Read This: Exposes Unhygienic Production- ಐಸ್ ಕ್ರೀಂ ತಿಂದ್ರೆ ನೇರ ಯಮನ ಪಾದಕ್ಕೆ ದಾಳಿಯ ವೇಳೆ ಅಧಿಕಾರಿಗಳಿಗೆ ಶಾಕ್

ಈ ನಿರ್ಧಾರಕ್ಕೆ ಶ್ವಾನಪ್ರಿಯರು ಮತ್ತು ಪ್ರಾಣಿ ಹಕ್ಕು ಹೋರಾಟಗಾರರಿಂದ ಅಸಮಾಧಾನ ವ್ಯಕ್ತವಾಗಿದೆ. ನಾಯಿಗಳು ‘ಟೆರಿಟೋರಿಯಲ್’ ಪ್ರವೃತ್ತಿ ಹೊಂದಿದ್ದು, ಒಂದು ಏರಿಯಾದ ನಾಯಿಗಳು ಮತ್ತೊಂದು ಏರಿಯಾಕ್ಕೆ ಹೋಗಿ ಆಹಾರ ಸೇವಿಸುವುದಿಲ್ಲ. ಹೀಗಾಗಿ, ಎಲ್ಲೋ ಒಂದು ಕಡೆ ಪಾಯಿಂಟ್ ಗುರುತಿಸುವುದು ನಾಯಿಗಳ ನಡುವೆ ಕಾದಾಟಕ್ಕೆ ಮತ್ತು ಹಸಿವಿನಿಂದ ಅವುಗಳ ಆಕ್ರೋಶಕ್ಕೆ ಕಾರಣವಾಗಬಹುದು ಎಂದು ಹೇಳಿದ್ದಾರೆ.

Read This:Exposes Unhygienic Production- ಐಸ್ ಕ್ರೀಂ ತಿಂದ್ರೆ ನೇರ ಯಮನ ಪಾದಕ್ಕೆ ದಾಳಿಯ ವೇಳೆ ಅಧಿಕಾರಿಗಳಿಗೆ ಶಾಕ್

Follow Us 

Follow KannadaFolks channel on WhatsApp

Visit the Kannadafolks.in follow the latest updates

Subscribe and Receive exclusive content and updates on your favourite topics

Subscribe for Free and Support Us 

ನಿಮ್ಮ ಈ - ಮೇಲ್ ಬಳಸಿ 👇ಇದೀಗ ಉಚಿತವಾಗಿ 🆓 ಚಂದಾದಾರರಾಗಿ..!  ನಿಮಗೆ ನಮ್ಮ ಕಥೆಗಳು, ಹಾಡುಗಳು ಮತ್ತು ಮಾಹಿತಿ ಇಷ್ಟವಾದರೆ ನಿಮ್ಮ ಸಮೂಹಕ್ಕೆ ಶೇರ್ ಮಾಡುವುದನ್ನ ಮರೆಯದಿರಿ 
RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

×