BESCOM Smart Meter: Complaint Dismissed – ಬೆಸ್ಕಾಂ ಸ್ಮಾರ್ಟ್‌ಮೀಟರ್: ದೂರು ವಜಾ

Read this-PM Modi in Udupi ಉಡುಪಿಯಲ್ಲಿ ಮೋದಿ ರೋಡ್ ಶೋ
ರಾಜ್ಯದಲ್ಲಿ ಬೆಸ್ಕಾಂ ಸ್ಮಾರ್ಟ್ ಮೀಟರ್ ಅಳವಡಿಕೆಗೆ ಟೆಂಡರ್‌ನಲ್ಲಿ ಅಕ್ರಮ ನಡೆದಿರುವುದಕ್ಕೆ ಸಂಬಂಧಿಸಿದಂತೆ ಮೃತ ಐಎಎಸ್ ಅಧಿಕಾರಿ ಮಹಾಂತೇಶ ಬೀಳಗಿ, ಸಚಿವ ಕೆಜೆ ಜಾರ್ಜ್ ಸೇರಿದಂತೆ ಹಲವ ವಿರುದ್ಧ ದಾಖಲಾಗಿದ್ದ ಖಾಸಗಿ ದೂರು ರದ್ದಾಗಿದೆ.
ಬೆಸ್ಕಾಂನಿಂದ ಸ್ಮಾರ್ಟ್ ಮೀಟರ್ ಅಳವಡಿಕೆ ಕಡ್ಡಾಯಗೊಳಿಸಲಾಗಿತ್ತು. ಈ ಯೋಜನೆಯ ಟೆಂಡರ್‌ನಲ್ಲಿ ಅಕ್ರಮ ನಡೆದಿದೆ ಎಂಬ ಆರೋಪ ಕೇಳಿ ಬಂದಿತ್ತು. ಈ ಸಂಬಂಧ ಲೋಕಾಯುಕ್ತ ಪೊಲೀಸರು ವರದಿ ಸಲ್ಲಿಸಬೇಕು ಎಂದು ವಿಶೇಷ ನ್ಯಾಯಾಲಯದ ಆದೇಶ ಮಾಡಿತ್ತು. ಈ ಆದೇಶವನ್ನು ಪ್ರಶ್ನಿಸಿ ಹಾಗೂ ರದ್ದು ಕೋರಿ ಇಂಧನ ಸಚಿವ ಕೆ ಜೆ ಜಾರ್ಜ್, ಇಂಧನ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಗೌರವ ಗುಪ್ತ, ಬೆಸ್ಕಾಂ ಮಾಜಿ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ಹಾಗೂ ಬೆಸ್ಕಾಂನ ತಾಂತ್ರಿಕ ನಿರ್ದೇಶಕ ಎಚ್ ಜೆ ರಮೇಶ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.
ದಾವೆ ಹೂಡಿದ್ದ ಬಿಜೆಪಿ ನಾಯಕರಿಗೆ ಹಿನ್ನಡೆ
ಹೈಕೋರ್ಟ್ ನ್ಯಾಯಮೂರ್ತಿ ಎಂ ಐ ಅರುಣ್ ಅವರ ಏಕಸದಸ್ಯ ಪೀಠವು ವಿಚಾರಣೆ ನಡೆಸಿದ್ದು, ಮಂಗಳವಾರ ಆದೇಶ ಪ್ರಕಟಿಸಿದೆ. ದಾವೆ ಹೂಡಿದ್ದ ಬಿಜೆಪಿ ನಾಯಕರಿಗೆ ಹಿನ್ನಡೆಯಾಗಿದೆ.
Read this-Karnataka Weather ಮಲೆನಾಡಿನಲ್ಲಿ ದಟ್ಟ ಮಂಜು
ಬಿಜೆಪಿ ಆರೋಪ ಏನು?
ಸ್ಮಾರ್ಟ್ ಮೀಟರ್ ಯೋಜನೆಯಲ್ಲಿ ದಾವಣಗೆರೆಯ ರಾಜಶ್ರೀ ಎಲೆಕ್ಟ್ರಿಕಲ್ಸ್ಗೆ ಗುತ್ತಿಗೆ ನೀಡಲಾಗಿದೆ. ಈ ಕಂಪೆನಗಾಗಿ ಇತರೆ ಕಂಪನಿಗಳು ಟೆಂಡರ್ನಲ್ಲಿ ಭಾಗವಹಿಸದಂತೆ ನೋಡಿಕೊಳ್ಳಲಾಗಿದೆ ಎಂದು ಬಿಜೆಪಿ ಆರೋಪ ಮಾಡಿತ್ತು. ಇನ್ನು ದರದ ವಿಚಾರವಾಗಿಯೂ ಬಿಜೆಪಿಗೆ ಆಕ್ಷೇಪ ಇದ್ದು, ರಾಜ್ಯಗಳಲ್ಲಿ 900 ರೂಪಾಯಿಗಳಿಗೆ ಸಿಗುವ ಸ್ಮಾರ್ಟ್ ಮೀಟರ್ ಅನ್ನು 5 ಸಾವಿರದಿಂದ 10 ಸಾವಿರ ರೂಪಾಯಿಗಳಿಗೆ ಗ್ರಾಹಕರಿಗೆ ನೀಡಲಾಗುತ್ತಿದೆ. ಇದು ದೊಡ್ಡ ಹಗರಣ ಎಂದು ದೂರಿತ್ತು.
ಕೇಂದ್ರದ RDSS ಯೋಜನೆಯಡಿ 900 ರೂ.ಗೆ ಸಿಗುವ ಮೀಟರ್ ಅನ್ನು 5 ರಿಂದ 9 ಸಾವಿರ ರೂ. ಗ್ರಾಹಕರು ಖರೀದಿಸಬೇಕಾಗಿದೆ. ಇದಕ್ಕೆಲ್ಲಾ ಬೆಸ್ಕಾಂ ಅಧ್ಯಕ್ಷ ಹಾಗೂ ಇಂಧನ ಸಚಿವ ಕೆ.ಜೆ.ಜಾರ್ಜ್ ಹಾಗೂ ಇತರೆ ಅಧಿಕಾರಿಗಳೇ ಹೊಣೆ ಎಂದು ಬಿಜೆಪಿ ಆರೋಪ ಮಾಡಿತ್ತು. ಈ ಆರೋಪದ ಮೇಲೆ ಲೋಕಾಯುಕ್ತ ಪೊಲೀಸರು ವರದಿ ನೀಡುವಂತೆ ವಿಶೇಷ ನ್ಯಾಯಾಲಯದ ಆದೇಶ ನೀಡಿತ್ತು. ಸದ್ಯ ಹೈಕೋರ್ಟ್ ದೂರು ರದ್ದು ಪಡಿಸಿದೆ
Support Us 


