HomeNewsCultureBhagyada Lakshmi Baramma - ಭಾಗ್ಯದ ಲಕ್ಷ್ಮಿ ಬಾರಮ್ಮ – ಶ್ರೀ ಲಕ್ಷ್ಮಿ ಪೂಜಾ ಹಾಡು

Bhagyada Lakshmi Baramma – ಭಾಗ್ಯದ ಲಕ್ಷ್ಮಿ ಬಾರಮ್ಮ – ಶ್ರೀ ಲಕ್ಷ್ಮಿ ಪೂಜಾ ಹಾಡು

Shree Lakshmi Pooja

Bhagyada Lakshmi Baramma / ಭಾಗ್ಯದ ಲಕ್ಷ್ಮಿ ಬಾರಮ್ಮ – ಪ್ರಸಿದ್ಧ(Famous) ಶ್ರೀ ಲಕ್ಷ್ಮಿ ಪೂಜಾ ಹಾಡು

ಭಾಗ್ಯದಾ ಲಕ್ಷ್ಮೀ ಬಾರಮ್ಮಾ
ನಮ್ಮಮ್ಮ ನೀ ….
ಸೌಭಾಗ್ಯದಾ ಲಕ್ಷ್ಮೀ ಬಾರಮ್ಮಾ

ಗೆಜ್ಜೆ ಕಾಲ್ಗಳಾ ಧ್ವನಿಯ ತೋರುತ
ಹೆಜ್ಜೆಯ ಮೇಲೊಂದ್ ಹೆಜ್ಜೆಯನಿಕ್ಕುತ
ಗೆಜ್ಜೆ ಕಾಲ್ಗಳಾ ಧ್ವನಿಯ ತೋರುತ
ಹೆಜ್ಜೆಯ ಮೇಲೊಂದ್ ಹೆಜ್ಜೆಯನಿಕ್ಕುತ
ಸಜ್ಜನ ಸಾಧು ಪೂಜೆಯ ವೇಳೆಗೆ
ಮಜ್ಜಿಗೆಯೊಳಗಿನ ಬೆಣ್ಣೆಯಂತೆ

ಭಾಗ್ಯದಾ ಲಕ್ಷ್ಮೀ ಬಾರಮ್ಮಾ
ನಮ್ಮಮ್ಮ ನೀ ..
ಸೌಭಾಗ್ಯದಾ ಲಕ್ಷ್ಮೀ ಬಾರಮ್ಮಾ

ಕನಕ ವೃಷ್ಟಿಯ ಕರೆಯುತ ಬಾರೆ
ಮನಕಾಮನೆಯ ಸಿದ್ದಿಯ ತೋರೆ
ಕನಕವೃಷ್ಟಿಯ ಕರೆಯುತ ಬಾರೆ
ಮನಕಾಮನೆಯ ಸಿದ್ಧಿಯ ತೋರೆ
ದಿನಕರ ಕೋಟಿ ತೇಜದಿ ಹೊಳೆಯುವ
ಜನಕರಾಯನ ಕುಮಾರಿ ಬೇಗ

ಭಾಗ್ಯದಾ ಲಕ್ಷ್ಮೀ ಬಾರಮ್ಮಾ
ನಮ್ಮಮ್ಮ ನೀ…
ಸೌಭಾಗ್ಯದಾ ಲಕ್ಷ್ಮೀ ಬಾರಮ್ಮಾ

ಅತ್ತಿತ್ತಗಲದೆ ಭಕ್ತರ ಮನೆಯೂಳು
ನಿತ್ಯಮಹೋತ್ಸವ ನಿತ್ಯ ಸುಮಂಗಲ
ಅತ್ತಿತ್ತಗಲದೆ ಭಕ್ತರ ಮನೆಯೂಳು
ನಿತ್ಯಮಹೋತ್ಸವ ನಿತ್ಯ ಸುಮಂಗಲ
ಸತ್ಯವ ತೋರುತ ಸಾಧು ಸಜ್ಜನರ
ಚಿತ್ತದಿ ಹೊಳೆಯುವ ಪುತ್ಥಳಿ ಗೊಂಬೆ

ಭಾಗ್ಯದಾ ಲಕ್ಷ್ಮೀ ಬಾರಮ್ಮಾ
ನಮ್ಮಮ್ಮ ನೀ …..
ಸೌಭಾಗ್ಯದಾ ಲಕ್ಷ್ಮೀ ಬಾರಮ್ಮಾ

ಸಂಖ್ಯೆ ಇಲ್ಲದಾ ಭಾಗ್ಯವ ಕೊಟ್ಟು
ಕಂಕಣ ಕೈಯಾ ತಿರುವುತ ಬಾರೆ
ಸಂಖ್ಯೆ ಇಲ್ಲದಾ ಭಾಗ್ಯವ ಕೊಟ್ಟು
ಕಂಕಣ ಕೈಯಾ ತಿರುವುತ ಬಾರೆ
ಕುಂಕುಮಾಂಕಿತೆ ಪಂಕಜಲೋಚನೆ
ವೆಂಕಟರಮಣನ ಬಿಂಕದರಾಣಿ

ಭಾಗ್ಯದಾ ಲಕ್ಷ್ಮೀ ಬಾರಮ್ಮಾ
ನಮ್ಮಮ್ಮ ನೀ …..
ಸೌಭಾಗ್ಯದಾ ಲಕ್ಷ್ಮೀ ಬಾರಮ್ಮಾ

ಸಕ್ಕರೆ ತುಪ್ಪದ ಕಾಲುವೆ ಹರಿಸಿ
ಶುಕ್ರವಾರದಾ ಪೂಜೆಯ ವೇಳೆಗೆ
ಸಕ್ಕರೆ ತುಪ್ಪದ ಕಾಲುವೆ ಹರಿಸಿ
ಶುಕ್ರವಾರದಾ ಪೂಜೆಯ ವೇಳೆಗೆ
ಅಕ್ಕರೆ ಉಳ್ಳ ಅಳಗಿರಿ ರಂಗನ
ಚೊಕ್ಕ ಪುರಂದರ ವಿಠ್ಠಲನ ರಾಣಿ

ಭಾಗ್ಯದಾ ಲಕ್ಷ್ಮೀ ಬಾರಮ್ಮಾ
ನಮ್ಮಮ್ಮ ನೀ ….
ಸೌಭಾಗ್ಯದಾ ಲಕ್ಷ್ಮೀ ಬಾರಮ್ಮಾ
ನಮ್ಮಮ್ಮ ನೀ….
ಸೌಭಾಗ್ಯದಾ ಲಕ್ಷ್ಮೀ ಬಾರಮ್ಮಾ

Subscribe for Free and Support Us 

ನಿಮ್ಮ ಈ - ಮೇಲ್ ಬಳಸಿ 👇ಇದೀಗ ಉಚಿತವಾಗಿ 🆓 ಚಂದಾದಾರರಾಗಿ..!  ನಿಮಗೆ ನಮ್ಮ ಕಥೆಗಳು, ಹಾಡುಗಳು ಮತ್ತು ಮಾಹಿತಿ ಇಷ್ಟವಾದರೆ ನಿಮ್ಮ ಸಮೂಹಕ್ಕೆ ಶೇರ್ ಮಾಡುವುದನ್ನ ಮರೆಯದಿರಿ 
Banu Mitra
Banu Mitrahttps://kannadafolks.in/
ಜನಪದ ಜಾತಿ, ಮತ, ಧರ್ಮ ಮೀರಿದ್ದು. ಅದು ಮಾತು, ಹಾಡು ಮೂಲಕ ಒಬ್ಬರಿಂದ ಮತ್ತೊಬ್ಬರಿಗೆ ಪಸರಿಸಿದ ಸಂಸ್ಕೃತಿ. ನಾವಿಂದು ಆಕಾಶದಿಂದ, ಸಾಗರದ ತಳದವರೆಗೆ ಹೋಗಿ ಅನ್ವೇಷನೆ ಯಾಗಿದೆ.
RELATED ARTICLES

Leave a Reply

- Advertisment -

Most Popular

Recent Comments