BMRCL Announces – ಪ್ರಯಾಣಿಕರ ಗಮನಕ್ಕೆ: ಮೇ 17ರಂದು ಈ ಮಾರ್ಗದ ನಮ್ಮ ಮೆಟ್ರೋ ಸಂಚಾರ ತಾತ್ಕಾಲಿಕ ಸ್ಥಗಿತ
ನಮ್ಮ ಮೆಟ್ರೋ ನೇರಳೆ ಮಾರ್ಗದಲ್ಲಿ ಈ ದಿನದಂದು ನಿರ್ವಹಣಾ ಕಾಮಗಾರಿ ನಡೆಯಲಿದ್ದು, ಬೆಳಗ್ಗೆ 7ರಿಂದ 9 ಗಂಟೆಯವರೆಗೆ ಈ ಮಾರ್ಗದ ನಡುವೆ ಮೆಟ್ರೋ ಸಂಚಾರ ಇರುವುದಿಲ್ಲ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ತಿಳಿಸಿದೆ. ಹಾಗಾದರೆ ಯಾವ ದಿನ ಮತ್ತು ಯಾವ ಮಾರ್ಗದಲ್ಲಿ ಮೆಟ್ರೋ ಸಂಚಾರ ಇರುವುದಿಲ್ಲ ಎಂಬ ಮಾಹಿತಿ ಇಲ್ಲಿದೆ.
ನಮ್ಮ ಮೆಟ್ರೋ ನೇರಳೆ ಮಾರ್ಗದಲ್ಲಿ (Purple Line) ಪ್ರಯಾಣಿಸುವ ಸಾರ್ವಜನಿಕರಿಗೆ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL) ಪ್ರಮುಖ ಪ್ರಕಟಣೆಯೊಂದನ್ನು ಹೊರಡಿಸಿದೆ. ಅಗತ್ಯ ನಿರ್ವಹಣಾ ಕಾಮಗಾರಿಗಳ ಹಿನ್ನೆಲೆ ಮೇ 17ರಂದು ಅಂದರೆ ಭಾನುವಾರ ನೇರಳೆ ಮಾರ್ಗದ ಕೆಲವು ನಿಲ್ದಾಣಗಳ ನಡುವೆ ಬೆಳಗ್ಗೆ 2 ಗಂಟೆಗಳ ಕಾಲ ಮೆಟ್ರೋ ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗುತ್ತಿದೆ.
ಮುಖ್ಯಾಂಶಗಳು
- ಮೈಸೂರು ರಸ್ತೆಯಲ್ಲಿ ಪ್ರಯಾಣ ಮಾಡುವವರಿಗೆ ಸಂಡೇ ಶಾಕ್
- 17ರಂದು ಮೆಟ್ರೋ ಸಂಚಾರದಲ್ಲಿ ವ್ಯತ್ಯಯ
- ಅಗತ್ಯ ನಿರ್ವಹಣೆ ಕಾಮಗಾರಿ ಹಿನ್ನೆಲೆ ಮೆಟ್ರೋ ಸಂಚಾರ ತಾತ್ಕಾಲಿಕ ಸ್ಥಗಿತ
ನಾಡಪ್ರಭು ಕೆಂಪೇಗೌಡ ನಿಲ್ದಾಣ (ಮೆಜೆಸ್ಟಿಕ್) ಮತ್ತು ಸರ್. ಎಂ. ವಿಶ್ವೇಶ್ವರಯ್ಯ ಮೆಟ್ರೋ ನಿಲ್ದಾಣಗಳ (ಸೆಂಟ್ರಲ್ ಕಾಲೇಜ್) ನಡುವೆ ಅತ್ಯಗತ್ಯ ನಿರ್ವಹಣಾ ಕಾಮಗಾರಿ ನಡೆಯಲಿದೆ. ಈ ಕಾರಣದಿಂದಾಗಿ, ಭಾನುವಾರ ಬೆಳಗ್ಗೆ 07 ಗಂಟೆಯಿಂದ 09 ಗಂಟೆಯವರೆಗೆ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ನಿಲ್ದಾಣ (ಹೊಸಹಳ್ಳಿ) ಮತ್ತು ಕಬ್ಬನ್ ಪಾರ್ಕ್ ಮೆಟ್ರೋ ನಿಲ್ದಾಣಗಳ ನಡುವೆ ರೈಲು ಸಂಚಾರ ಇರುವುದಿಲ್ಲ.
![]()
Read here: Namma Metro fare hike confirmed ಫೆಬ್ರವರಿ 9 ರಿಂದ ನಮ್ಮ ಮೆಟ್ರೋ ಟಿಕೆಟ್ ದರ ಏರಿಕೆ ಖಚಿತ
ಎಲ್ಲೆಲ್ಲಿ ಮೆಟ್ರೋ ಲಭ್ಯವಿರಲಿದೆ?
ಸಾರ್ವಜನಿಕರ ಅನುಕೂಲಕ್ಕಾಗಿ ಬೆಳಗ್ಗೆ 07 ಗಂಟೆಯಿಂದ 09 ಗಂಟೆ ಅವಧಿಯಲ್ಲಿ ಕೆಳಕಂಡ ಮಾರ್ಗಗಳಲ್ಲಿ ಎಂದಿನಂತೆ ಮೆಟ್ರೋ ರೈಲುಗಳು ನಿಯಮಿತ ವೇಳಾಪಟ್ಟಿಯಂತೆ ಸಂಚರಿಸಲಿವೆ.
- ಚಲ್ಲಘಟ್ಟ – ವಿಜಯನಗರ
- ಎಂ.ಜಿ. ರಸ್ತೆ – ವೈಟ್ ಫೀಲ್ಡ್, ಕಾಡುಗೋಡಿ
- ಮಾದಾವರ – ಸಿಲ್ಕ್ ಇನ್‌ಸ್ಟಿಟ್ಯೂಟ್
- ಆರ್.ವಿ. ರಸ್ತೆ – ಬೊಮ್ಮಸಂದ್ರ
ಭಾನುವಾರ ಬೆಳಗ್ಗೆ 09 ಗಂಟೆಯ ನಂತರ ಹೊಸಹಳ್ಳಿ ಮತ್ತು ಕಬ್ಬನ್ ಪಾರ್ಕ್ ನಿಲ್ದಾಣಗಳ ನಡುವೆ ಹಾಗೂ ಸಂಪೂರ್ಣ ನೇರಳೆ ಮಾರ್ಗದಲ್ಲಿ ಮೆಟ್ರೋ ಸೇವೆಗಳು ಎಂದಿನಂತೆ ಪುನಃ ಆರಂಭಗೊಳ್ಳಲಿವೆ. ಪ್ರಯಾಣಿಕರು ಈ ತಾತ್ಕಾಲಿಕ ಸೇವಾ ವ್ಯತ್ಯಯವನ್ನು ಗಮನದಲ್ಲಿಟ್ಟುಕೊಂಡು, ತಮ್ಮ ಪ್ರಯಾಣವನ್ನು ಮುಂಚಿತವಾಗಿಯೇ ಯೋಜಿಸಿಕೊಳ್ಳುವಂತೆ ಬಿಎಂಆರ್‌ಸಿಎಲ್ ಮನವಿ ಮಾಡಿದೆ.
Follow Us
Follow KannadaFolks channel on WhatsApp
Visit the Kannadafolks.in follow the latest updates
Subscribe and Receive exclusive content and updates on your favourite topics
Subscribe to KannadaFloks YouTube Channel and watch Videos
Support Us 


