HomeNewsBommai Rejects Doctorate-ಬೊಮ್ಮಾಯಿ ಡಾಕ್ಟರೇಟ್ ನಿರಾಕರಣೆ

Bommai Rejects Doctorate-ಬೊಮ್ಮಾಯಿ ಡಾಕ್ಟರೇಟ್ ನಿರಾಕರಣೆ

Declines honor from Haveri University

Bommai Rejects Doctorate-ಬೊಮ್ಮಾಯಿ ಡಾಕ್ಟರೇಟ್ ನಿರಾಕರಣೆ

ಗೌರವ ಡಾಕ್ಟರೇಟ್ ಎನ್ನುವುದು ವಿಶ್ವವಿದ್ಯಾನಿಲಯ ಅಥವಾ ಕಾಲೇಜು ನೀಡುವ ಪ್ರತಿಷ್ಠಿತ ಶೈಕ್ಷಣಿಕ ಗೌರವವಾಗಿದ್ದು, ನಿರ್ದಿಷ್ಟ ಕ್ಷೇತ್ರ, ಸಮಾಜ ಅಥವಾ ಮಾನವೀಯತೆಗೆ ಗಮನಾರ್ಹ ಕೊಡುಗೆಗಳನ್ನು ನೀಡಿದ ವ್ಯಕ್ತಿಗಳಿಗೆ ನೀಡಲಾಗುತ್ತದೆ. ಅದರಂತೆ ಮಾಜಿ ಮುಖ್ಯಮಂತ್ರಿ, ಹಾಲಿ ಸಂಸದರೂ ಆಗಿರುವ ಬಸವರಾಜ್ ಬೊಮ್ಮಾಯಿ ಅವರಿಗೆ ಹಾವೇರಿ ವಿಶ್ವವಿದ್ಯಾಲಯವು ಗೌರವ ಡಾಕ್ಟರೇಟ್​ ನೀಡಲು ಮುಂದಾಗಿದೆ. ಆದ್ರೆ, ಇದನ್ನು ಬೊಮ್ಮಾಯಿ ಅವರು ವಿನಯಪೂರ್ವಕವಾಗಿ ನಿರಾಕರಿಸಿದ್ದಾರೆ.ಗೌರವ ಡಾಕ್ಟರೇಟ್ ನಿರಾಕರಿಸಿದ ಬಸವರಾಜ ಬೊಮ್ಮಾಯಿ, ಹಾವೇರಿ ವಿವಿಗೆ ಹೇಳಿದಿಷ್ಟು -  Kannada News | BJP MP And Karnataka ex CM basavaraj bommai declines  honorary doctorate From Haveri University | TV9 Kannada

Read this : Hanke India China Gap-ಹ್ಯಾಂಕ್ ತಲಾದಾಯ ಹಿಂದುಳಿಕೆ

ಹಾವೇರಿ, (ಏಪ್ರಿಲ್ 05): ಹಾವೇರಿ ವಿಶ್ವವಿದ್ಯಾಲಯವು (haveri university) ತಮಗೆ ನೀಡಲು ನಿರ್ಧರಿಸಿದ್ದ ಗೌರವ ಡಾಕ್ಟರೇಟ್ (honorary doctorate) ಅನ್ನು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ (Basavaraj Bommai) ಅವರು ವಿನಮ್ರವಾಗಿ ನಿರಾಕರಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ಸಾರ್ವಜನಿಕ ಸೇವೆಯಲ್ಲಿರುವ ತಮಗೆ ಜನರ ಪ್ರೀತಿ ಮತ್ತು ವಿಶ್ವಾಸವೇ ಅತಿ ದೊಡ್ಡ ಪ್ರಶಸ್ತಿ ಎಂದು ಹೇಳಿಕೊಂಡಿದ್ದಾರೆ. ತಮ್ಮ ಸಿಂಡಿಕೇಟ್ ಸಭೆಯಲ್ಲಿ ತಮಗೆ ಗೌರವ ಡಾಕ್ಟರೇಟ್ ನೀಡಲು ತೀರ್ಮಾನಿಸಿದ ಹಾವೇರಿ ವಿಶ್ವವಿದ್ಯಾಲಯದ ಕುಲಪತಿಗಳು, ಉಪಕುಲಪತಿಗಳು, ಕುಲಸಚಿವರು ಹಾಗೂ ಸಿಂಡಿಕೇಟ್ ಸದಸ್ಯರಿಗೆ ಬೊಮ್ಮಾಯಿ ಅವರು ಹೃತ್ಪೂರ್ವಕ ಕೃತಜ್ಞತೆಗಳನ್ನು ಸಲ್ಲಿಸಿದ್ದಾರೆ.

ಬೊಮ್ಮಾಯಿ ಹೊರಡಿಸಿದ ಪ್ರಕರಣೆಯಲ್ಲೇನಿದೆ?

ಈ ಕುರಿತು ಪ್ರಕಟಣೆ ನೀಡಿರುವ ಅವರು, “ನನಗೆ ಗೌರವ ಡಾಕ್ಟರೇಟ್ ನೀಡಲು ತೀರ್ಮಾನಿಸಿರುವುದಕ್ಕೆ ಕುಲಪತಿಗಳು, ಉಪಕುಲಪತಿಗಳು, ಕುಲಸಚಿವರು ಹಾಗೂ ಸಿಂಡಿಕೇಟ್ ಸದಸ್ಯರಿಗೆ ಹೃತ್ಪೂರ್ವಕ ಕೃತಜ್ಞತೆಗಳು. ನಾನು ಗೌರವ ಡಾಕ್ಟರೇಟ್ ಸ್ವೀಕರಿಸುವುದಿಲ್ಲವೆಂದು ಈಗಾಗಲೇ ಕುಲಪತಿಗಳಿಗೆ ತಿಳಿಸಿದ್ದೇನೆ. ನಾನು ಸಾರ್ವಜನಿಕ ಸೇವೆಯಲ್ಲಿ ಇರುವುದರಿಂದ, ಸಾರ್ವಜನಿಕ ಸೇವೆಗೆ ಯಾವುದೇ ಪ್ರಶಸ್ತಿಯನ್ನು ಅಪೇಕ್ಷಿಸುವುದಿಲ್ಲ. ಸಾರ್ವಜನಿಕ ಸೇವೆಗೆ ಜನರ ಪ್ರೀತಿ ಮತ್ತು ವಿಶ್ವಾಸವೇ ನನಗೆ ಅತ್ಯಂತ ದೊಡ್ಡ ಗೌರವವೆಂದು ಭಾವಿಸುತ್ತೇನೆ. ಆದ್ದರಿಂದ ಗೌರವ ಡಾಕ್ಟರೇಟ್ ಸ್ವೀಕರಿಸುವುದಿಲ್ಲವೆಂದು ವಿನಮ್ರವಾಗಿ ಪುನರುಚ್ಚರಿಸುತ್ತೇನೆ ” ಎಂದಿದ್ದಾರೆ.

“ಗೌರವ ಡಾಕ್ಟರೇಟ್ ಎಂಬುದು ದೀರ್ಘಕಾಲದಿಂದ ಯಾವುದಾದರೂ ಕ್ಷೇತ್ರದಲ್ಲಿ ವಿಶಿಷ್ಟ ಮತ್ತು ಮಹತ್ತರ ಸೇವೆ ಸಲ್ಲಿಸಿದವರಿಗೆ ನೀಡಬೇಕಾದ ಗೌರವವೆಂಬುದು ನನ್ನ ಅಭಿಪ್ರಾಯ. ಹೀಗಾಗಿ ಇದನ್ನು ಅಂಥ ಸಾಧಕರಿಗೆ ನೀಡಬೇಕು. ರಾಜಕಾರಣಿಗಳಿಗೆ ಅಥವಾ ಸ್ವಯಂ ಪ್ರೇರಣೆಯಿಂದ ಸಮಾಜ ಸೇವೆಯಲ್ಲಿ ತೊಡಗಿರುವವರಿಗೆ ಗೌರವ ಡಾಕ್ಟರೇಟ್ ನೀಡುವುದು ಸಮಂಜಸವಲ್ಲ ಎಂಬುದು ನನ್ನ ವೈಯಕ್ತಿಕ ಅಭಿಪ್ರಾಯ. ಈ ವಿಷಯದಲ್ಲಿ ಪುನರ್ ವಿಚಾರ ಮಾಡಬೇಕೆಂದು ವಿನಂತಿಸುತ್ತೇನೆ ” ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅಲ್ಲದೇ ತಮ್ಮ ಸಿಂಡಿಕೇಟ್ ಸಭೆಯಲ್ಲಿ ತಮಗೆ ಗೌರವ ಡಾಕ್ಟರೇಟ್ ನೀಡಲು ತೀರ್ಮಾನಿಸಿದ ಹಾವೇರಿ ವಿಶ್ವವಿದ್ಯಾಲಯದ ಕುಲಪತಿಗಳು, ಉಪಕುಲಪತಿಗಳು, ಕುಲಸಚಿವರು ಹಾಗೂ ಸಿಂಡಿಕೇಟ್ ಸದಸ್ಯರಿಗೆ ಬೊಮ್ಮಾಯಿ ಅವರು ಹೃತ್ಪೂರ್ವಕ ಕೃತಜ್ಞತೆಗಳನ್ನು ಸಲ್ಲಿಸಿದ್ದಾರೆ.

Follow Us 

Follow KannadaFolks channel on WhatsApp

Visit the Kannadafolks.in follow the latest updates

Subscribe and Receive exclusive content and updates on your favourite topics

Subscribe to KannadaFloks YouTube Channel and watch Videos

Subscribe for Free and Support Us 

ನಿಮ್ಮ ಈ - ಮೇಲ್ ಬಳಸಿ 👇ಇದೀಗ ಉಚಿತವಾಗಿ 🆓 ಚಂದಾದಾರರಾಗಿ..!  ನಿಮಗೆ ನಮ್ಮ ಕಥೆಗಳು, ಹಾಡುಗಳು ಮತ್ತು ಮಾಹಿತಿ ಇಷ್ಟವಾದರೆ ನಿಮ್ಮ ಸಮೂಹಕ್ಕೆ ಶೇರ್ ಮಾಡುವುದನ್ನ ಮರೆಯದಿರಿ 
RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments