Budget 2026-27 Cinema-ಬಜೆಟ್ 2026 ಕನ್ನಡ ಚಿತ್ರರಂಗಕ್ಕೆ
Karnataka Budget 2026-27: ಸಿಎಂ ಸಿದ್ದರಾಮಯ್ಯ ಅವರು ದಾಖಲೆಯ 17ನೇ ಬಾರಿ ಕರ್ನಾಟಕ ಬಜೆಟ್ ಮಂಡನೆ ಮಾಡಿದ್ದಾರೆ. ಹಲವು ಕ್ಷೇತ್ರಗಳಿಗೆ ಸಾಕಷ್ಟು ಅನುದಾನಗಳನ್ನು ನೀಡಲಾಗಿದೆ. ಕನ್ನಡ ಚಿತ್ರರಂಗ ಈ ಬಾರಿಯ ಬಜೆಟ್ ಮೇಲೆ ಸಾಕಷ್ಟು ನಿರೀಕ್ಷೆಗಳನ್ನು ಇರಿಸಿಕೊಂಡಿತ್ತು. ಹಾಗಿದ್ದರೆ ಬಜೆಟ್ನಲ್ಲಿ ಕನ್ನಡ ಚಿತ್ರರಂಗಕ್ಕೆ ಸಿಕ್ಕಿದ್ದೇನು? ಮಾಹಿತಿ ಇಲ್ಲಿದೆ…
Read this : Ashika Ranganath’s Princess Look-ಆಶಿಕಾ ರಂಗನಾಥ್ ಯುವರಾಣಿ ಲುಕ್
ಸಿಎಂ ಸಿದ್ದರಾಮಯ್ಯ (Siddaramaiah) ಅವರು ದಾಖಲೆಯ 17ನೇ ಬಾರಿ ಕರ್ನಾಟಕ ಬಜೆಟ್ ಅನ್ನು ಇಂದು (ಮಾರ್ಚ್ 06) ಮಂಡಿಸಿದರು. ಹಲವಾರು ಕ್ಷೇತ್ರಗಳಿಗೆ ಹಲವು ಅನುದಾನ, ಯೋಜನೆಗಳನ್ನು ಬಜೆಟ್ನಲ್ಲಿ ಘೋಷಣೆ ಮಾಡಲಾಗಿದೆ. ನಿರೀಕ್ಷೆಯಂತೆ ಶಿಕ್ಷಣ, ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಗ್ರಾಮೀಣಾಭಿವೃದ್ಧಿ, ಕೃಷಿ ಇನ್ನಿತರೆ ಪ್ರಮುಖ ಕ್ಷೇತ್ರಗಳಿಗೆ ಹೆಚ್ಚಿನ ಅನುದಾನವನ್ನು ನೀಡಲಾಗಿದೆ. ಕನ್ನಡ ಚಿತ್ರರಂಗವೂ ಸಹ ಈ ಬಾರಿಯ ಬಜೆಟ್ ಮೇಲೆ ಸಾಕಷ್ಟು ನಿರೀಕ್ಷೆಗಳನ್ನು ಇರಿಸಿಕೊಂಡಿತ್ತು. ಹಾಗಿದ್ದರೆ ಬಜೆಟ್ನಲ್ಲಿ ಕನ್ನಡ ಚಿತ್ರರಂಗಕ್ಕೆ ಸಿಕ್ಕಿದ್ದೇನು? ಮಾಹಿತಿ ಇಲ್ಲಿದೆ…
ಹೆಸರಘಟ್ಟದಲ್ಲಿರುವ ಸರ್ಕಾರಿ ಚಲನಚಿತ್ರ ಮತ್ತು ದೂರದರ್ಶನ ಸಂಸ್ಥೆಯಲ್ಲಿ ನಡೆಸಲಾಗುತ್ತಿರುವ ಸೌಂಡ್ ರೆಕಾರ್ಡಿಂಗ್ ಮತ್ತು ಇಂಜಿನಿಯರಿಂಗ್ ಹಾಗೂ ಸಿನಿಮಾಟೊಗ್ರಫಿ ಕೋರ್ಸುಗಳಿಗೆ ಅಗತ್ಯವಿರುವ ಆಧುನಿಕ ಉಪಕರಣಗಳನ್ನು ಒದಗಿಸಲಾಗುವುದು ಎಂದು ಸಿಎಂ ಅವರು ಬಜೆಟ್ನಲ್ಲಿ ಘೋಷಿಸಿದ್ದಾರೆ.
ಮೈಸೂರು ಫಿಲ್ಮ್ ಸಿಟಿಯನ್ನು ಸ್ಥಾಪಿಸಲು ಈ ಸಾಲಿನಲ್ಲಿ 500 ಕೋಟಿ ರೂ.ಗಳಿಗೆ ಅನುಮೋದನೆ ನೀಡಲಾಗಿದೆ. ಫಿಲ್ಮ್ ಸಿಟಿ ಸೌಲಭ್ಯಗಳನ್ನು ಒಳಗೊಂಡಂತೆ ಪ್ರವಾಸಿಗರಿಗೆ ಅನುಕೂಲವಾಗುವಂತೆ ಥೀಮ್ ಪಾರ್ಕ್, ಸ್ಟಾರ್ ಹೋಟೆಲ್ ಮತ್ತು ರೆಸಾರ್ಟ್ಗಳನ್ನು ಒಳಗೊಂಡ PPP (ಪಬ್ಲಿಕ್ ಪ್ರೈವೇಟ್ ಪಾರ್ಟನರ್ಶಿಪ್) ಮಾದರಿಯಲ್ಲಿ ಅಭಿವೃದ್ಧಿಗೆ ಅನುಮೋದನೆ ನೀಡಿ ವ್ಯವಹಾರ ನಡೆಸಬೇಕೆಂದು ತೀರ್ಮಾನಿಸಲಾಗಿದೆ.
ಕನ್ನಡ ಚಿತ್ರರಂಗದ ಹಿರಿಯ ಮತ್ತು ಲಿಜೆಂಡರಿ ನಿರ್ದೇಶಕ ಆಗಿರುವ ಪುಟ್ಟಣ್ಣ ಕಣಗಾಲ್ ಅವರ ನಿವಾಸವನ್ನು ವಸ್ತು ಸಂಗ್ರಹಾಲಯವನ್ನಾಗಿ ರೂಪಿಸಲಾಗುವುದು ಎಂದು ಸಿದ್ದರಾಮಯ್ಯ ಬಜೆಟ್ನಲ್ಲಿ ಹೇಳಿದ್ದಾರೆ.
Follow Us
Follow KannadaFolks channel on WhatsApp
Visit the Kannadafolks.in follow the latest updates
Subscribe and Receive exclusive content and updates on your favourite topics
Subscribe to KannadaFloks YouTube Channel and watch Videos
Support Us 


