Bumper Gift for Police Who Cracked Bengaluru Robbery Case – ಪೊಲೀಸರಿಗೆ ಬಂಪರ್ ಗಿಫ್ಟ್
ಬೆಂಗಳೂರು: ಸಿನಿಮೀಯ ಶೈಲಿಯಲ್ಲಿ 7.11 ಕೋಟಿ ರೂ. ದರೋಡೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಸದ್ಯ ಆರೋಪಿಗಳನ್ನು ಬಂಧಿಸಿದ್ದಾರೆ. ಈ ಪ್ರಕರಣವನ್ನು ಯಶಸ್ವಿಯಾಗಿ ಭೇದಿಸುವಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸ್ ಅಧಿಕಾರಿಗಳಿಗೆ ಬಹುಮಾನ ಘೋಷಣೆ ಮಾಡಲಾಗಿದೆ.
Read this-Bigg Boss Kannada 12-ಜಾನ್ವಿ ಮಾತಿಗೆ ರಕ್ಷಿತಾ ಶೆಟ್ಟಿ ಖಡಕ್ ಉತ್ತರ
ಜಿಪಿ ನಗರದಲ್ಲಿ ಹಾಡಹಗಲೇ ಕೋಟಿ ಕೋಟಿ ದರೋಡೆ ಅತ್ಯಂತ ಚುರುಕಿನಿಂದ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಸೆರೆಹಿಡಿದ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಯ ತಂಡಕ್ಕೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅವರು ಬರೋಬ್ಬರಿ 5 ಲಕ್ಷ ರೂಪಾಯಿ ನಗದು ಬಹುಮಾನವನ್ನು ಘೋಷಿಸಿದ್ದಾರೆ.
5 ಲಕ್ಷ ರೂ. ಬಹುಮಾನ
ನವೆಂಬರ್ 19 ರಂದು ಬೆಂಗಳೂರಿನ ಡೈರಿ ಸರ್ಕಲ್ ಬಳಿ ಇರುವಂತಹ ಎಟಿಎಂಗಳಿಗೆ ಹಣ ತುಂಬಲು ಹೋಗುತ್ತಿದ್ದ ವಾಹನವನ್ನು ಮೊದಲಿಗೆ ದರೋಡೆಕೋರರು ಅಡ್ಡಗಟ್ಟಿದ್ದರು. ಆ ನಂತರ ನಾವು ಸರ್ಕಾರಿ ಅಧಿಕಾರಿಗಳು ಎಂದು ವ್ಯಾನ್ನಲ್ಲಿದ್ದವರನ್ನು ನಂಬಿಸಿ, ವಾಹನದಲ್ಲಿದ್ದ 7.11 ಕೋಟಿ ರೂಪಾಯಿ ಹಣವನ್ನು ದೋಚಿ ಅಲ್ಲಿಂದ ಕಾಲ್ಕಿತ್ತಿದ್ದರು. ಈ ಘಟನೆಯಿಂದ ಇಡೀ ಕರ್ನಾಟಕವೇ ಬೆಚ್ಚಿಬಿದ್ದಿತ್ತತು.
Reda this-ಮೈಸೂರು ದಸರಾ ಮಹೋತ್ಸವ ಉದ್ಘಾಟನೆ-Mysore Dasara
48 ಗಂಟೆಯಲ್ಲಿ ಖದೀಮರ ಅರೆಸ್ಟ್
ಸಿಟಿವಿ ದೃಶ್ಯಾವಳಿ ಪರಿಶೀಲಿಸಿ ತಾಂತ್ರಿಕ ಸಾಕ್ಷ್ಯಗಳ ಆಧಾರದ ಮೇಲೆ ಕಾರ್ಯಾಚರಣೆ ನಡೆಸಿ ಕೇವಲ 48 ಗಂಟೆಯೊಳಗೆ ಪ್ರಕರಣದ ಜಾಡು ಹಿಡಿದು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ತನಿಖೆಯಲ್ಲಿ ಪೊಲೀಸ್ ಕಾನ್ಸ್ಟೆಬಲ್ ಒಬ್ಬರು ಮತ್ತು ಕ್ಯಾಶ್ ಮ್ಯಾನೇಜ್ಮೆಂಟ್ ಸಂಸ್ಥೆಯ ಮಾಜಿ ಉದ್ಯೋಗಿ ಇದರ ಮಾಸ್ಟರ್ಮೈಂಡ್ ಎಂಬುವುದು ಬೆಳಕಿಗೆ ಬಂದಿತ್ತು. ಶ್ರೀಮಂತರಾಗುವ ಹಂಬಲದಲ್ಲಿ ಈ ಕೃತ್ಯ ಎಸಗಿರುವುದಾಗಿ ಪೊಲೀಸರ ಮುಂದೆ ಆರೋಪಿಗಳು ಬಾಯ್ಬಿಟ್ಟಿದ್ದಾರೆ. ಸದ್ಯ ಬೆಂಗಳೂರು ಪೊಲೀಸರು ಬಂಧಿತರಿಂದ ಸುಮಾರು 5.7 ಕೋಟಿ ರೂ. ಹಣವನ್ನು ವಶಪಡಿಸಿಕೊಂಡಿದ್ದಾರೆ ಎನ್ನಲಾಗಿದೆ.
ಸಿಸಿಟಿವಿ ಇಲ್ಲದ ರಸ್ತೆ, ನಂಬರ್ ಪ್ಲೇಟ್ ಬದಲಿಸುತ್ತಿದ್ದ ಖದೀಮರು
ʻಏಳು ಕೋಟಿಗೂ ಹೆಚ್ಚು ಹಣ ದರೋಡೆ ಮಾಡಿದ ಪ್ರಕರಣ ಬೇಧಿಸುವುದು ಸವಾಲಿನ ಕೆಲಸವಾಗಿತ್ತು. ಆರೋಪಿಗಳು ಪ್ಲೇಟ್ ಬದಲಾಯಿಸುತ್ತಿದ್ದರು. ಜೊತೆಗೆ ಸಿಸಿಟಿವಿ ಇಲ್ಲದ ರಸ್ತೆಗಳನ್ನೇ ತಮ್ಮ ಕುತಂತ್ರಕ್ಕೆ ಬಳಸಿಕೊಂಡಿದ್ದರು. ಇದಷ್ಟೇ ಅಲ್ಲದೇ ಪೊಲೀಸರಿಂದ ತಪ್ಪಿಸಿಕೊಳ್ಳಲು ಹಲವು ತಾಂತ್ರಿಕತೆಯ ತಂತ್ರಗಳನ್ನು ಬಳಸಿಕೊಂಡಿದ್ದರು. ನಮ್ಮ ಪೊಲೀಸರು ಅತ್ಯಂತ ಚಾಣಾಕ್ಷತನದಿಂದ ಆರೋಪಿಗಳ ಹೆಡೆಮುರಿ ಕಟ್ಟಿದ್ದಾರೆ ಎಂದು ಕಮಿಷನರ್ ಸೀಮಂತ್ ಕುಮಾರ್ ಸಿಂಗ್ ಅವರು ಮಾಧ್ಯಮದ ಮುಂದೆ ಹೇಳಿದರು.
Support Us 


