HomeNewsBypoll Fake Message Row-ಸಿರಿಗೆರೆ ಸ್ವಾಮೀಜಿ ನಕಲಿ ಸಂದೇಶ

Bypoll Fake Message Row-ಸಿರಿಗೆರೆ ಸ್ವಾಮೀಜಿ ನಕಲಿ ಸಂದೇಶ

Fake message misusing seer’s name sparks concern

Bypoll Fake Message Row-ಸಿರಿಗೆರೆ ಸ್ವಾಮೀಜಿ ನಕಲಿ ಸಂದೇಶ

ದಾವಣಗೆರೆ ಉಪಚುನಾವಣೆ ಸಂದರ್ಭದಲ್ಲಿ ಸಿರಿಗೆರೆ ತರಳಬಾಳು ಶ್ರೀಗಳ ಹೆಸರಿನಲ್ಲಿ ನಕಲಿ ಮತಯಾಚನೆ ಸಂದೇಶವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಮಠದ ಆಡಳಿತ ಮಂಡಳಿ ಇದು ಸುಳ್ಳು ಸಂದೇಶವೆಂದು ಸ್ಪಷ್ಟಪಡಿಸಿದ್ದು, ಜಿಲ್ಲಾಧಿಕಾರಿಗಳಿಗೆ ದೂರು ನೀಡಿದೆ. ಮತದಾರರನ್ನು ತಪ್ಪು ದಾರಿಗೆಳೆಯುವ ಇಂತಹ ಕೃತ್ಯಗಳ ವಿರುದ್ಧ ಕಠಿಣ ಕ್ರಮಕ್ಕೆ ಮನವಿ ಮಾಡಲಾಗಿದೆ.ಎಚ್ಚರ! ಸಿರಿಗೆರೆ ಸ್ವಾಮೀಜಿ ಹೆಸರಿನಲ್ಲಿ ವೈರಲ್ ಆಗುತ್ತಿದೆ ನಕಲಿ ಸಂದೇಶ! - Kannada  News | Karnataka Byelection 2026: Fake Message Misuses Sirigere Seer's  Name; Mutt Files Complaint | TV9 Kannada

Read this : Iran Leadership Doubts-ಮೊಜ್ತಬಾ ಅಸಮರ್ಥ

ದಾವಣಗೆರೆ, ಏಪ್ರಿಲ್ 07: ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ (Byelection) ಏಪ್ರಿಲ್ 9ರಂದು ನಡೆಯಲಿರುವ ಹಿನ್ನೆಲೆಯಲ್ಲಿ ರಾಜಕೀಯ ಚಟುವಟಿಕೆಗಳು ಚುರುಕುಗೊಂಡಿವೆ. ಪ್ರಮುಖ ಪಕ್ಷಗಳು ಮತದಾರರನ್ನು ಸೆಳೆಯಲು ವಿವಿಧ ರೀತಿಯ ಪ್ರಚಾರ ಕೈಗೊಂಡಿರುವ ನಡುವೆ, ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಸಂದೇಶಗಳ ಹಾವಳಿ ಕೂಡ ಹೆಚ್ಚಾಗಿದೆ. ಚುನಾವಣೆ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬರಿಗೆ ಓಟ್​ ಹಾಕಿ ಎಂದು ಸಿರಿಗೆರೆ ಸ್ವಾಮೀಜಿ ಹೆಸರಲ್ಲಿನ ಸಂದೇಶ ವೈರಲ್ ಆಗಿದ್ದು, ಸಾಕಷ್ಟು ಚರ್ಚೆ ಹುಟ್ಟಿಹಾಕಿತ್ತು. ಇದಕ್ಕೀಗ ಸ್ಪಷ್ಟನೆ ಸಿಕ್ಕಿದೆ.

ಸ್ಪಷ್ಟನೆ ನೀಡಿದ ಆಡಳಿತ ಮಂಡಳಿ

ಸಿರಿಗೆರೆ ತರಳುಬಾಳು ಗುರುಪೀಠದ ಡಾ. ಶಿವಮೂರ್ತಿ ಶಿವಾಚಾರ್ಯ ಶ್ರೀ ಅವರ ಹೆಸರಿನಲ್ಲಿ ನಕಲಿ ಸಂದೇಶವೊಂದು ವೈರಲ್ ಆಗಿದ್ದು, ನಿರ್ದಿಷ್ಟ ಅಭ್ಯರ್ಥಿಗೆ ಮತ ನೀಡುವಂತೆ ಕರೆ ನೀಡಲಾಗಿದೆ ಎಂಬುದು ಬೆಳಕಿಗೆ ಬಂದಿದೆ. ಸ್ವಾಮೀಜಿಯಿಂದಲೇ ಸಾಮಾಜಿಕ ಜಾಲತಾಣದಲ್ಲಿ ಈ ರೀತಿಯ ಪ್ರಚಾರ ನಡೆಯುತ್ತಿದೆಯೇನೋ ಎಂದು ಹಲವರು ಭಾವಿಸಿದ್ದರು. ಆದರೆ ಇದಕ್ಕೆ ಮಠದ ಆಡಳಿತ ಮಂಡಳಿ ಸ್ಪಷ್ಟನೆ ನೀಡಿದ್ದು, ಶ್ರೀಗಳ ಹೆಸರಿನಲ್ಲಿ ನಕಲಿ ಸಂದೇಶ ರವಾನಿಸಲಾಗುತ್ತಿದೆ ಎಂದಿದೆ. ಈ ಸಂದೇಶವು ಸ್ವಾಮೀಜಿಯವರ ನಿಲುವನ್ನು ತಪ್ಪಾಗಿ ಪ್ರತಿಬಿಂಬಿಸುವುದಾಗಿ ಮಠದ ಆಡಳಿತ ಮಂಡಳಿ ಹೇಳಿದೆ.

ಜಿಲ್ಲಾಧಿಕಾರಿಗೆ ದೂರು

ಈ ಕುರಿತು ಮಠದ ಕಾರ್ಯದರ್ಶಿ ಜಿಲ್ಲಾಧಿಕಾರಿಗಳಿಗೆ ಲಿಖಿತ ದೂರು ಸಲ್ಲಿಸಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಮಾಹಿತಿಯನ್ನು ಹರಡುವವರ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ. ಇಂತಹ ನಕಲಿ ಸಂದೇಶಗಳು ಮತದಾರರನ್ನು ತಪ್ಪು ದಾರಿಗೆಳೆಯುವ ಸಾಧ್ಯತೆ ಇರುವುದರಿಂದ ಅಧಿಕಾರಿಗಳು ಕಟ್ಟುನಿಟ್ಟಿನ ನಿಗಾ ವಹಿಸುವ ಅಗತ್ಯವಿದೆ ಎಂದು ತಿಳಿಸಿದ್ದಾರೆ.

Follow Us 

Follow KannadaFolks channel on WhatsApp

Visit the Kannadafolks.in follow the latest updates

Subscribe and Receive exclusive content and updates on your favourite topics

Subscribe to KannadaFloks YouTube Channel and watch Videos

Subscribe for Free and Support Us 

ನಿಮ್ಮ ಈ - ಮೇಲ್ ಬಳಸಿ 👇ಇದೀಗ ಉಚಿತವಾಗಿ 🆓 ಚಂದಾದಾರರಾಗಿ..!  ನಿಮಗೆ ನಮ್ಮ ಕಥೆಗಳು, ಹಾಡುಗಳು ಮತ್ತು ಮಾಹಿತಿ ಇಷ್ಟವಾದರೆ ನಿಮ್ಮ ಸಮೂಹಕ್ಕೆ ಶೇರ್ ಮಾಡುವುದನ್ನ ಮರೆಯದಿರಿ 
RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments