Cable Factory – ಒಂದು ಕಿಡಿಗೆ ಸತತ 22 ಗಂಟೆ ಕಾಲ ಹೊತ್ತಿ ಉರಿದ ಕೇಬಲ್ ಫ್ಯಾಕ್ಟರಿ
ದೊಡ್ಡಬಳ್ಳಾಪುರ ಹೊರವಲಯದ ಬಾಶೆಟ್ಟಹಳ್ಳಿ ಅಡ್ವಾನ್ಸ್ ಕೇಬಲ್ ಟೆಕ್ನಾಲಜಿಸ್ ಫ್ಯಾಕ್ಟರಿಯಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದೆ. ಸಣ್ಣ ಕಿಡಿಯಿಂದ ಹೊತ್ತಿಕೊಂಡ ಬೆಂಕಿ ಸಂಪೂರ್ಣ ಕಾರ್ಖಾನೆಯನ್ನು ಸುಟ್ಟುಹಾಕಿದ್ದು, ಕೋಟ್ಯಂತರ ರೂಪಾಯಿ ಮೌಲ್ಯದ ಕೇಬಲ್ ವೈರ್ಗಳು ಸುಟ್ಟು ಬೂದಿಯಾಗಿವೆ. 22 ಗಂಟೆಗಳ ನಿರಂತರ ಕಾರ್ಯಾಚರಣೆಯ ನಂತರ ಅಗ್ನಿಶಾಮಕ ದಳ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಸಣ್ಣ ಕಿಡಿಯಿಂದ ಹೊತ್ತಿಕೊಂಡ ಬೆಂಕಿ ಕೇಬಲ್ ಫ್ಯಾಕ್ಟರಿಯನ್ನೇ ಸಂಪೂರ್ಣವಾಗಿ ಸುಟ್ಟು (cable factory fire) ಬೂದಿ ಮಾಡಿದ್ದು, ಕೋಟ್ಯಂತರ ರೂ ಮೌಲ್ಯದ ಕೇಬಲ್ ವೈರ್ಗಳು ಬೆಂಕಿಗಾಹುತಿಯಾಗಿದೆ. ಸತತ 22 ಗಂಟೆಗಳ ನಿರಂತರ ಕಾರ್ಯಾಚರಣೆ ಬಳಿಕ ಬೆಂಕಿ ಹತೋಟಿಗೆ ಬಂದಿದ್ದು, ಸ್ಥಳಿಯರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ನಿಟ್ಟುಸಿರು ಬಿಟ್ಟಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ಹೊರವಲಯದ ಬಾಶೆಟ್ಟಹಳ್ಳಿ ಕೈಗಾರಿಕಾ ಪ್ರದೇಶದ ಅಡ್ವಾನ್ಸ್ ಕೇಬಲ್ ಟೆಕ್ನಾಲಜಿಸ್ ಫ್ಯಾಕ್ಟರಿಯಲ್ಲಿ ನಿನ್ನೆ ಘಟನೆ ನಡೆದಿದೆ.

Read this:List of candidates ಪರಿಷತ್ ಚುನಾವಣೆ ಘೋಷಣೆ ಮಾಡಿದ ಬಿಜೆಪಿ: ಜೆಡಿಎಸ್ಗೆ 1 ಸ್ಥಾನ
ನಿನ್ನೆ ಸಂಜೆ ಐದು ಗಂಟೆ ಸಮಯಕ್ಕೆ ಕಾರ್ಮಿಕರೆಲ್ಲಾ ಕೆಲಸ ಮುಗಿಸಿ ಮನೆಗೆ ತೆರಳುವ ತವಕದಲ್ಲಿರುವಾಗಲೇ ಮೂಲೆಯೊಂದರಲ್ಲಿ ಹೊತ್ತಿಕೊಂಡ ಬೆಂಕಿ ನೋಡನೋಡುತ್ತಿದ್ದಂತೆ ಸಂಪೂರ್ಣ ಫ್ಯಾಕ್ಟರಿಯನ್ನೇ ಆವರಿಸಿತ್ತು. ಹೆದ್ದಾರಿಯ ಫ್ಲೈಓವರ್ ಮೇಲೆ ನಿಂತ್ತು ನೋಡಿದ ಜನರಿಗೆ ಅಕ್ಷರಶಃ ಯಾವುದೋ ಬಾಂಬ್ ಬಿದ್ದಂತೆ ಬಾನೆತ್ತರಕ್ಕೆ ದಟ್ಟ ಹೊಗೆ ಆವರಿಸಿರುವ ದೃಶ್ಯ ಕಂಡುಬಂದಿದ್ದು ಎಲ್ಲರೂ ಒಂದು ಕ್ಷಣ ಬೆಚ್ಚಿ ಬಿದ್ದಿದ್ದಿರು. ಇನ್ನು ಅಗ್ನಿ ಅವಘಡಕ್ಕೆ ಸಂಪೂರ್ಣ ಕೈಗಾರಿಕಾ ಫ್ಯಾಕ್ಟರಿ ಸುಟ್ಟು ಭಸ್ಮವಾಗಿದ್ದು, 22 ಗಂಟೆಗೂ ಅಧಿಕ ಕಾಲ ಅಗ್ನಿಶಾಮಕ ದಳದ ಸಿಬ್ಬಂದಿ ಹರಸಾಹಸಪಟ್ಟಿದ್ದಾರೆ.
ಕೋಟ್ಯಂತರ ರೂ ನಷ್ಟ
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ಹೊರವಲಯದ ಬಾಶೆಟ್ಟಹಳ್ಳಿ ಕೈಗಾರಿಕಾ ಪ್ರದೇಶದ ಅಡ್ವಾನ್ಸ್ ಕೇಬಲ್ ಟೆಕ್ನಾಲಜಿಸ್ ಫ್ಯಾಕ್ಟರಿಯಲ್ಲಿ ನಿನ್ನೆ ಸಂಜೆ 05:30ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿತ್ತು. ಬೆಂಕಿ ಕಾಣಿಸುತ್ತಿದ್ದಂತೆ ಎಚ್ಚೆತ್ತ ಕಾರ್ಮಿಕರು ಆಡಳಿತ ಮಂಡಳಿ ಮೊದಲಿಗೆ ಬೆಂಕಿ ನಂದಿಸುವ ಯತ್ನ ಮಾಡಿದರು ರಬ್ಬರ್ ಮತ್ತು ಪ್ಲಾಸ್ಟಿಕ್ಗೆ ಬೆಂಕಿ ಹೊತ್ತಿಕೊಂಡ ಕಾರಣ ಬೆಂಕಿ ನಂದಿಸಲು ವಿಫಲವಾಗಿ ಫ್ಯಾಕ್ಟರಿಯಿಂದ ಹೊರಗಡೆ ಬಂದಿದ್ದಾರೆ.
ಇನ್ನು ಕಾರ್ಮಿಕರು ಹೊರಗಡೆ ಬರುತ್ತಿದ್ದಂತೆ ಬೆಂಕಿ ತನ್ನ ರುದ್ರ ನರ್ತನವನ್ನೆ ತೋರಿದ್ದು, ಕ್ಷಣ ಮಾತ್ರದಲ್ಲೇ ಒಂದು ಎಕರೆಯಷ್ಟು ವಿಸ್ತೀರ್ಣದಲ್ಲಿರುವ ಸಂಪೂರ್ಣ ಫ್ಯಾಕ್ಟರಿಗೆ ಬೆಂಕಿ ಆವರಿಸಿದೆ. ಬೆಂಕಿಯ ಕೆನ್ನಾಲೆಗೆ ಫ್ಯಾಕ್ಟರಿ ಧಗಧಗನೆ ಹೊತ್ತಿ ಉರಿದು ಕೆಲ ಸಿಲಿಂಡರ್ ಸಹ ಸ್ಪೋಟಗೊಂಡಿವೆ ಎನ್ನಲಾಗ್ತಿದ್ದು, ಬೆಂಕಿಯ ರುದ್ರ ನರ್ತನಕ್ಕೆ ಫ್ಯಾಕ್ಟರಿ ಸುಟ್ಟು ಕರಕಲಾಗಿದೆ.
ಫ್ಯಾಕ್ಟರಿಗೆ ಬೆಂಕಿ ಬಿದ್ದ ವಿಚಾರ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳದ ಸಿಬ್ಬಂದಿ ಸಹ ಸ್ಥಳಕ್ಕೆ ದೌಡಾಯಿಸಿ ಬಂದಿದ್ದು, ಮೊದಲಿಗೆ ಬೆಂಕಿ ನಂದಿಸುವ ಕೆಲಸ ಮಾಡಿದ್ದಾರೆ. ಆದರೆ ಎಷ್ಟೇ ನೀರು ಹೊಡೆದರು ಬೆಂಕಿ ಹತೋಟಿಗೆ ಬಾರದ ಕಾರಣ ಚಿಕ್ಕಬಳ್ಳಾಪುರ, ಕೋಲಾರ, ಗೌರಿಬಿದನೂರು, ಯಲಹಂಕ, ವೈಟ್ ಫೀಲ್ಡ್, ನೆಲಮಂಗಲ, ದೇವನಹಳ್ಳಿ ಸೇರಿದಂತೆ ಹಲವು ಭಾಗಗಳಿಂದ 15ಕ್ಕೂ ಅಧಿಕ ಅಗ್ನಿಶಾಮಕ ವಾಹನ ಹಾಗೂ ನೂರಕ್ಕೂ ಅಧಿಕ ಸಿಬ್ಬಂದಿಯನ್ನ ಕರೆಸಿಕೊಂಡಿದ್ದಾರೆ. ಜೊತೆಗೆ ಫ್ಯಾಕ್ಟರಿ ಪಕ್ಕದಲ್ಲೇ ಇದ್ದ ರೈತನ ಕೃಷಿ ಹೊಂಡದಿಂದ ನೀರನ್ನ ತುಂಬಿಕೊಂಡು ಬಂದು ರಾತ್ರಿ ಪೂರ್ತಿ ನೀರು ಹೊಡೆದರ ಬೆಂಕಿ ಹಾರಿಲ್ಲ. ಕೊನೆಗೆ ಸತತ 22 ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬೆಂಕಿ ನಂದಿಸಿದ್ದರು ಸಹ ಅಲ್ಲಲ್ಲಿ ಹೊಗೆ ಹಾಡುತ್ತಲ್ಲಿದ್ದು, ಅದನ್ನ ಸಹ ಸಂಪೂರ್ಣವಾಗಿ ನಿಯಂತ್ರಿಸಲಾಗಿದೆ.
ಇನ್ನು ಇಷ್ಟು ದೊಡ್ಡ ಪ್ರಮಾಣದಲ್ಲಿ ಫ್ಯಾಕ್ಟರಿಯಲ್ಲಿ ಬೆಂಕಿ ಹೊತ್ತಿಕೊಳ್ಳಲು ಸೂಕ್ತ ತುರ್ತು ಮುಂಜಾಗ್ರತಾ ಕ್ರಮಗಳನ್ನ ಕೈಗೊಳ್ಳದಿರುವುದು ಕಾರಣ ಎನ್ನಲಾಗುತ್ತಿದೆ. ಆಕಸ್ಮಿಕ ಅಗ್ನಿ ಅವಘಡಕ್ಕೆ ಕೋಟಿ ಕೋಟಿ ಮೌಲ್ಯದ ಕೇಬಲ್ ಹಾಗೂ ಕಚ್ಚಾ ವಸ್ತುಗಳು ಸುಟ್ಟು ಕರಕಲಾಗಿವೆ. ಈ ಸಂಬಂಧ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಾಗಿದ್ದು, ತನಿಖೆ ಬಳಿಕ ಬೆಂಕಿ ಅವಘಡಕ್ಕೆ ಕಾರಣ ಏನು ಅನ್ನೋದು ಬೆಳಕಿಗೆ ಬರಬೇಕಿದೆ.
Read this: No-Trust Move vs Om Birla-ಓಂ ಬಿರ್ಲಾ ವಿರುದ್ಧ ಅವಿಶ್ವಾಸ |Kannada Folks
Follow Us
Follow KannadaFolks channel on WhatsApp
Visit the Kannadafolks.in follow the latest updates
Subscribe and Receive exclusive content and updates on your favourite topics
Subscribe to KannadaFloks YouTube Channel and watch Videos
Support Us 


