CM Siddaramaiah Assembly Session – ಸಿಎಂ ಸಿದ್ದರಾಮಯ್ಯ ವಿಧಾನಸಭೆ ಅಧಿವೇಶನ
ಬೆಂಗಳೂರು: ಮುಡಾ ಅವ್ಯವಸ್ಥೆ ಅಕ್ರಮದ ಬಗ್ಗೆ ಎಲ್ಲಾ ಪಕ್ಷದ ಶಾಸಕರ ವಿರುದ್ಧ ಸಿಎಂ ಸಿದ್ದರಾಮಯ್ಯ ಗರಂ ಆಗಿದ್ದಾರೆ..
Read this – rcb retained players 2025 kannada ಆರ್ಸಿಬಿ 2025ರಲ್ಲಿ ಆಟಗಾರರನ್ನು ಉಳಿಸಿಕೊಂಡಿದೆ
ಮೈಸೂರು ಜಿಲ್ಲೆ ಅಭಿವೃದ್ಧಿ ಕುರಿತು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು (ಶುಕ್ರವಾರ) ಸಭೆ ನಡೆಯಿತು. ಈ ವೇಳೆ, ಮೈಸೂರಿನ ಖಾಸಗಿ ಬಡಾವಣೆಗಳಲ್ಲಿನ ಮೂಲಭೂತ ಸವಲತ್ತುಗಳ ಕೊರತೆ, ಕಳಪೆ ನಿರ್ವಹಣೆ, ನೀರು-ಒಳಚರಂಡಿ ವ್ಯವಸ್ಥೆ ಸರಿಯಾಗಿ ಇಲ್ಲದಿರುವ ಬಗ್ಗೆ ಶಾಸಕರು ಸಿಎಂ ಗಮನಕ್ಕೆ ತಂದರು. ಈ ವೇಳೆ ಮಾತನಾಡಿದ ಸಿಎಂ, ಎಲ್ಲಾ ಪಕ್ಷದ ಶಾಸಕರು ನೀವುಗಳೇ ಸುಮಾರು 20 ವರ್ಷಗಳಿಂದ ಮುಡಾ ಸದಸ್ಯರಿದ್ದೀರಿ. ನೀವುಗಳು ಸದಸ್ಯರಾಗಿದ್ದೂ ಯಾಕೆ ಹೀಗಾಯ್ತು? ಯಾಕೆ ಅವ್ಯವಸ್ಥೆ ಆಗಲು ಬಿಟ್ಟಿದ್ದೀರಿ ಎಂದು ಎಲ್ಲಾ ಪಕ್ಷದ ಶಾಸಕರ ಮೇಲೆ ಸಿಎಂ ಅಸಮಾಧಾನ ಹೊರಹಾಕಿದ್ದಾರೆ. Read this – Pushpa 2: The Rule Movie Review : Allu Arjun’s brilliance  What you feel with Peelings
Read this – Pushpa 2: The Rule Movie Review : Allu Arjun’s brilliance  What you feel with Peelings
ಹೊಸ ಬಡಾವಣೆ ಮಾಡುವಾಗ ವಿದ್ಯುತ್ ಸಂಪರ್ಕ, ರಸ್ತೆ, ಒಳಚರಂಡಿ ಇತ್ಯಾದಿ ಸೌಲಭ್ಯಗಳನ್ನು ಕಲ್ಪಿಸುವುದು ಬಡಾವಣೆ ಅಭಿವೃದ್ಧಿ ಮಾಡುವವರ ಜವಾಬ್ದಾರಿ. ಬಳಿಕ ಅದನ್ನು ನಗರ ಸ್ಥಳೀಯ ಸಂಸ್ಥೆಗೆ ಹಸ್ತಾಂತರಿಸಬೇಕಾಗಿತ್ತು. ಆದರೆ ಇಂತಹ ಸುಮಾರು 950 ಬಡಾವಣೆಗಳನ್ನು ಹಸ್ತಾಂತರಿಸದೇ ಇರುವುದರಿಂದ ಸಮಸ್ಯೆ ಮುಂದುವರೆದಿದೆ ಎಂದು ಅಧಿಕಾರಿಗಳು ಸಿಎಂ ಗಮನಕ್ಕೆ ತಂದಿದ್ದಾರೆ.
ಈ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಸಿಎಂ, ನಗರಪಾಲಿಕೆ, ಮುಡಾ ಕುರಿತಾಗಿ ಪ್ರತ್ಯೇಕ ಸಭೆ ಕರೆಯಲು ಅಧಿಕಾರಿಗಳಿಗೆ ಸೂಚನೆ ನೀಡಿದರು. ಇದೇ ವೇಳೆ ಮೈಸೂರು ವಿಮಾನ ನಿಲ್ದಾಣದ ಬಗ್ಗೆಯೂ ಸಭೆಯಲ್ಲಿ ಚರ್ಚೆ ಆಯ್ತು. ಮೈಸೂರು ವಿಮಾನ ನಿಲ್ದಾಣ ವಿಸ್ತರಣೆ ಯೋಜನೆ ತ್ವರಿತವಾಗಿ ಆಗದೆ ಕುಂಟುತ್ತಿರುವ ಬಗ್ಗೆಯೂ ಕೇಂದ್ರ ಮತ್ತು ರಾಜ್ಯದ ಅಧಿಕಾರಿಗಳಿಗೆ ಸಿಎಂ ಪ್ರಶ್ನೆ ಮಾಡಿದ್ದಾರೆ.
ವಿಮಾನ ನಿಲ್ದಾಣದ ವಿಚಾರವಾಗಿ, ಕೇಂದ್ರದ ಸಚಿವರಿಗೆ ವಿವರವಾದ ಪತ್ರ ಬರೆಯಲು ಮತ್ತು ಕೇಂದ್ರ ವಿಮಾನಯಾನ ಸಚಿವರನ್ನು ಜ.15 ರಂದು ಭೇಟಿಯಾಗಿ ಮಾತುಕತೆ ನಡೆಸಲು ಸಭೆಯಲ್ಲಿ ತೀರ್ಮಾನ ಮಾಡಲಾಯಿತು.

 
                                     Support Us
Support Us