CM Siddaramaiah instruction to provide justice to the victims of atrocity cases
ಅಟ್ರಾಸಿಟಿ ಪ್ರಕರಣಗಳಲ್ಲಿ ಸರ್ಕಾರಿ ಪ್ರಾಸಿಕ್ಯೂಟರ್‌ಗಳು ಸರಿಯಾಗಿ ವಾದಿಸಿ ದೌರ್ಜನ್ಯಕ್ಕೀಡಾದವರಿಗೆ ನ್ಯಾಯ ಒದಗಿಸಬೇಕು ಅಂತ ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದರು.ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಅನುಸೂಚಿತ ಜಾತಿಗಳ ಮತ್ತು ಅನುಸೂಚಿತ ಬುಡಕಟ್ಟುಗಳು ಜಾಗೃತ ಮತ್ತು ಉಸ್ತುವಾರಿ ಮೇಲ್ವಿಚಾರಣಾ ಸಮಿತಿ ಸಭೆಯಲ್ಲಿ ಮಾತನಾಡಿದ ಸಿಎಂ, ಡಿಸಿಗಳು, ಎಸ್ಪಿಗಳು, ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ರು.
Read this – CM Siddaramaiah Assembly Session ಸಿಎಂ ಸಿದ್ದರಾಮಯ್ಯ ವಿಧಾನಸಭೆ ಅಧಿವೇಶನ
ಅಟ್ರಾಸಿಟಿ ಪ್ರಕರಣಗಳಲ್ಲಿ ಸರ್ಕಾರಿ ಪ್ರಾಸಿಕ್ಯೂಟರ್‌ಗಳು ಸರಿಯಾಗಿ ವಾದಿಸಿ ದೌರ್ಜನ್ಯಕ್ಕೀಡಾದವರಿಗೆ ನ್ಯಾಯ ಒದಗಿಸಬೇಕು. ದೌರ್ಜನ್ಯ ಮಾಡಿದವರು ಸುಲಭವಾಗಿ ಜಾಮೀನು ಪಡೆಯದಂತೆ ಸೂಕ್ತ ಕ್ರಮ ಕೈಗೊಳ್ಳಬೇಕು. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಒದಗಿಸುವುದು ಎಲ್ಲರ ಜವಾಬ್ದಾರಿ. ದೌರ್ಜನ್ಯ ಪ್ರಕರಣಗಳಲ್ಲಿ ದೋಷಾರೋಪಣೆ ಪಟ್ಟಿಯನ್ನು ನಿಗದಿತ ಅವಧಿಯ ಒಳಗಾಗಿ ಸಲ್ಲಿಸಬೇಕು ಅಂತ ಸೂಚನೆ ನೀಡಿದ್ರು.
- ಬ್ಯಾಕ್‌ಲಾಗ್, ನೇಮಕಾತಿ ಮತ್ತು ಮುಂಬಡ್ತಿ ಪ್ರಕರಣಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡದ ಅಭ್ಯರ್ಥಿಗಳಿಗೆ ಅನ್ಯಾಯವಾಗದಂತೆ ಎಚ್ಚರಿಕೆ ವಹಿಸಬೇಕು. ಈ ಕುರಿತು ಇಲಾಖೆವಾರು ಸಭೆ ನಡೆಸಲು ಮುಖ್ಯಕಾರ‍್ಯದರ್ಶಿಯವರಿಗೆ ಸೂಚನೆ.
- ದೇವದಾಸಿ ಪದ್ದತಿ ಯಾವುದೇ ಜಿಲ್ಲೆಗಳಲ್ಲಿ ನಡೆದರೆ ಅದಕ್ಕೆ ಜಿಲ್ಲಾಧಿಕಾರಿ ಮತ್ತು ಪೊಲೀಸ್ ವರಿಷ್ಠಾಧಿಕಾರಿ ಅವರೇ ನೇರ ಹೊಣೆ. ದೇವದಾಸಿಯರಿಗೆ ಪುನರ್ವಸತಿ ಕಲ್ಪಿಸುವುದು ಜಿಲ್ಲಾಡಳಿತದ ಜವಾಬ್ದಾರಿ. ಈ ಕುರಿತು ಯಾವುದೇ ದೂರಿಗೆ ಅವಕಾಶವಿಲ್ಲದಂತೆ ಕಾರ್ಯ ನಿರ್ವಹಿಸಬೇಕು.
Read this – Kangana Ranawat starrer Emergency trailer release ಕಂಗನಾ ರಣಾವತ್ ನಟನೆಯ ‘ಎಮರ್ಜೆನ್ಸಿ’ ಚಿತ್ರದ ಟ್ರೈಲರ್ ರಿಲೀಸ್
- ಅರಣ್ಯ ಹಕ್ಕು ಸಮಿತಿ ನಿಗದಿತವಾಗಿ ಸಭೆಗಳನ್ನು ನಡೆಸಿ, ಅರ್ಹ ಫಲಾನುಭವಿಗಳಿಗೆ ಹಕ್ಕುಪತ್ರಗಳನ್ನು ನೀಡುವ ಪ್ರಕ್ರಿಯೆ ತ್ವರಿತಗೊಳಿಸಬೇಕು. 3,430 ಪ್ರಕರಣಗಳಲ್ಲಿ ಹಕ್ಕುಪತ್ರ ನೀಡಲು ಇನ್ನೂ ಬಾಕಿಯಿದ್ದು, ಇದನ್ನು ಒಂದು ತಿಂಗಳ ಒಳಗಾಗಿ ಪೂರ್ಣಗೊಳಿಸಬೇಕು.
- ಹಕ್ಕುಪತ್ರ ನೀಡಿದ ಬಳಿಕ ಪಹಣಿಯಲ್ಲಿ ಅವರ ಹೆಸರು ನಮೂದಿಸುವ ಕಾರ್ಯ ತ್ವರಿತಗೊಳಿಸಬೇಕು. ಕಂದಾಯ ಇಲಾಖೆ ಅಧಿಕಾರಿಗಳು ಇದನ್ನು ಆದ್ಯತೆ ಮೇಲೆ ಕೈಗೊಳ್ಳಬೇಕು. ಯಾವುದೇ ಕಾರಣಕ್ಕೂ ಅರಣ್ಯವಾಸಿಗಳನ್ನು ಒಕ್ಕಲೆಬ್ಬಿಸಬಾರದು.
- ಎಸ್ಸಿ/ಎಸ್ಟಿ ಕಾಯ್ದೆಯಡಿ ದಾಖಲಾಗಿರುವ ಪ್ರಕರಣಗಳಲ್ಲಿ ನ್ಯಾಯಾಲಯಗಳು ನೀಡಿರುವ ತಡೆಯಾಜ್ಞೆ ತೆರವುಗೊಳಿಸಲು ಕ್ರಮ ಕೈಗೊಳ್ಳಬೇಕು. 60 ದಿನಗಳ ಒಳಗಾಗಿ ಆರೋಪಪಟ್ಟಿ ದಾಖಲಿಸಬೇಕು. ಇನ್ನೂ 665 ಪ್ರಕರಣಗಳು ತನಿಖೆಗೆ ಬಾಕಿಯಿದ್ದು, ಇದನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. ನ್ಯಾಯಾಲಯಗಳಲ್ಲಿ ಶಿಕ್ಷೆ ಪ್ರಮಾಣ ಕಡಿಮೆಯಾಗುವುದನ್ನು ಒಪ್ಪಲು ಸಾಧ್ಯವಿಲ್ಲ.
- ಪ್ರತಿ ಜಿಲ್ಲೆಯಲ್ಲಿ ಡಿಸಿಆರ್‌ಇ ಕೋಶವನ್ನು ಸ್ಥಾಪಿಸುವ ಕುರಿತು ಈಗಾಗಲೇ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ.
- ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿ ಅವರ ಅಧ್ಯಕ್ಷತೆಯಲ್ಲಿ ಪ್ರತಿ ಮೂರು ತಿಂಗಳಿಗೊಮ್ಮೆ ಕಡ್ಡಾಯವಾಗಿ ಜಾಗೃತ ಮತ್ತು ಉಸ್ತುವಾರಿ ಸಮಿತಿ ಸಭೆ ನಡೆಸಬೇಕು. ಪ್ರಾಸಿಕ್ಯೂಶನ್ ಸಹ ಪರಿಶೀಲನೆ ನಡೆಸಬೇಕು. ಎಲ್ಲಾ ಜಿಲ್ಲಾ ಉಸ್ತುವಾರಿ ಸಚಿವರು ಈ ಸಭೆಯಲ್ಲಿ ಭಾಗವಹಿಸಬೇಕು.
Read this – Kichha Sudeepa gave a hint about the winner of Bigg Boss finale ಬಿಗ್ ಬಾಸ್ ಫಿನಾಲೆಗೆ ವಿನ್ನರ್ ಯಾರೆಂಬ ಸುಳಿವು ಕೊಟ್ಟ ಕಿಚ್ಚ ಸುದೀಪ
- ಮೃತಪಟ್ಟ ಪ್ರಕರಣಗಳಲ್ಲಿ ಅನುಕಂಪ ಆಧಾರದ ಉದ್ಯೋಗಕ್ಕಾಗಿ ಮೃತಪಟ್ಟ ದಿನಾಂಕದಿಂದ 3 ವರ್ಷದ ಒಳಗೆ, ಅಪ್ರಾಪ್ತ ವಯಸ್ಸಿನ ಮಕ್ಕಳು 18 ವರ್ಷಗಳನ್ನು ಪೂರೈಸತಕ್ಕದ್ದು, ಎಂಬ ಮಿತಿಯನ್ನು ತೆಗೆದು ಹಾಕುವ ಬಗ್ಗೆ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು.
- ಸುಳ್ಳು ಜಾತಿ ಪ್ರಮಾಣ ಪತ್ರ ಪ್ರಕರಣಗಳಲ್ಲಿ ಅಂತಹ ಪ್ರಮಾಣ ಪತ್ರ ನೀಡುವ ಅಧಿಕಾರಿಯನ್ನು ಸಹ ಆರೋಪಿಯನ್ನಾಗಿ ಮಾಡಲಾಗುತ್ತದೆ. ಜಾತಿ ಪ್ರಮಾಣ ಪತ್ರ ನೀಡುವ ಸಂದರ್ಭದಲ್ಲಿ ಕಂದಾಯ ಇಲಾಖೆ ಅಧಿಕಾರಿಗಳು ಕಟ್ಟೆಚ್ಚರ ವಹಿಸಬೇಕು ಎಂದು ಸಿಎಂ ತಾಕೀತು ಮಾಡಿದರು.