Congress Became National Shame-ಎಐ ಶೃಂಗಸಭೆಯಲ್ಲಿ ಯೂತ್ ಕಾಂಗ್ರೆಸ್ ಪ್ರತಿಭಟನೆಗೆ ಬಿಜೆಪಿ ಆಕ್ರೋಶ
ದೆಹಲಿಯಲ್ಲಿ ನಡೆಯುತ್ತಿರುವ ಎಐ ಶೃಂಗಸಭೆಯ ಕೊನೆಯ ದಿನವಾದ ಇಂದು ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಘೋಷಣೆ ಕೂಗುತ್ತಾ, ತಮ್ಮ ಅಂಗಿ ಬಿಚ್ಚಿ ಕೈಯಲ್ಲಿ ಹಿಡಿದು ಬೀಸುತ್ತಾ ಪ್ರತಿಭಟನೆ ನಡೆಸಿದ್ದಾರೆ. ಈಗಾಗಲೇ ಎಐ ಶೃಂಗಸಭೆಯಲ್ಲಿ ಭಾಗವಹಿಸಿದ್ದ ಗಲ್ಗೋಟಿಯಾಸ್ ವಿಶ್ವವಿದ್ಯಾಲಯ ಚೀನಾದ ರೋಬೋಟ್ ಅನ್ನು ನಮ್ಮ ದೇಶದ ಅನ್ವೇಷಣೆಯೆಂದು ಹೇಳಿಕೊಂಡಿದ್ದರಿಂದ ಬಿಜೆಪಿ ಸರ್ಕಾರ ತೀವ್ರ ಮುಜುಗರ ಅನುಭವಿಸಿತ್ತು. ಅದರ ಬೆನ್ನಲ್ಲೇ ಕಾಂಗ್ರೆಸ್ ನಡೆಸಿರುವ ಈ ಅರೆಬೆತ್ತಲೆ ಪ್ರತಿಭಟನೆಗೆ ಬಿಜೆಪಿ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.
ನವದೆಹಲಿ, ಫೆಬ್ರವರಿ 20: ದೆಹಲಿಯ ಭಾರತ್ ಮಂಟಪದಲ್ಲಿ ನಡೆಯುತ್ತಿರುವ ಎಐ ಇಂಪ್ಯಾಕ್ಟ್ ಶೃಂಗಸಭೆಯ (AI Impact Summit) ಆವರಣದೊಳಗೆ ಪ್ರಧಾನಿ ಮೋದಿ ಹಾಗೂ ಟ್ರಂಪ್ ಫೋಟೋ ಹಾಗೂ ಅವರ ವಿರುದ್ಧ ಘೋಷಣೆ ಇರುವ ಟಿ-ಶರ್ಟ್ ಹಾಕಿಕೊಂಡು ಬಂದಿದ್ದ ಯುವ ಕಾಂಗ್ರೆಸ್ ಕಾರ್ಯರ್ತರು ಆ ಅಂಗಿಯನ್ನು ಬಿಚ್ಚಿ ‘ಪ್ರಧಾನಿ ಮೋದಿ ರಾಜಿ ಮಾಡಿಕೊಂಡಿದ್ದಾರೆ’ ಎಂದು ಘೋಷಣೆ ಕೂಗುತ್ತಾ ಮೆರವಣಿಗೆ ನಡೆಸಿದ್ದರು. ಕೈಯಲ್ಲಿ ಅಂಗಿಯನ್ನು ಬೀಸುತ್ತಾ ಅರೆಬೆತ್ತಲೆ ಮೆರವಣಿಗೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದು, ಎಫ್ಐಆರ್ ದಾಖಲಿಸಿದ್ದಾರೆ. ಕಾಂಗ್ರೆಸ್ನ ಈ ವರ್ತನೆಗೆ ಬಿಜೆಪಿ ನಾಯಕರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ.

Read here:Congress Alleges BJP Deleted 9 AI Videos ಬಿಜೆಪಿ 9 AI ವೀಡಿಯೊ ಅಳಿಸಿದೆ: ಕಾಂಗ್ರೆಸ್ ಆರೋಪ
ಈ ಬಗ್ಗೆ ಬಿಜೆಪಿ ಐಟಿ ವಿಭಾಗದ ಮುಖ್ಯಸ್ಥ ಅಮಿತ್ ಮಾಳವಿಯಾ ಕಾಂಗ್ರೆಸ್ ವಿರುದ್ಧ ತೀವ್ರವಾಗಿ ವಾಗ್ದಾಳಿ ನಡೆಸಿದ್ದಾರೆ. “ರಾಷ್ಟ್ರೀಯ ಅವಮಾನ” ಎಂದು ಕರೆದ ಅವರು, ಭಾರತ ಸರ್ಕಾರ ಆಯೋಜಿಸಿರುವ ಪ್ರತಿಷ್ಠಿತ ಜಾಗತಿಕ AI ಶೃಂಗಸಭೆಯ ಆವರಣದಲ್ಲಿ, ಕಾಂಗ್ರೆಸ್ ಪಕ್ಷವು ಘನತೆಯಿಂದ ವರ್ತಿಸುವುದನ್ನು ಬಿಟ್ಟು ದೇಶವೇ ತಲೆತಗ್ಗಿಸುವಂತೆ ವರ್ತಿಸಿರುವುದು ಸಹಿಸಲಾಗದ ಸಂಗತಿ. ಇದು ಕಾಂಗ್ರೆಸ್ ನಾಯಕರ ಮನಸ್ಥಿತಿಯನ್ನು ತೋರಿಸುತ್ತದೆ” ಎಂದು X ನಲ್ಲಿ ಪೋಸ್ಟ್ ಮಾಡಿದ್ದಾರೆ.
Follow Us
Follow KannadaFolks channel on WhatsApp
Visit the Kannadafolks.in follow the latest updates
Subscribe and Receive exclusive content and updates on your favourite topics
Subscribe to KannadaFloks YouTube Channel and watch Videos
Support Us 


