HomeNewsCongress Faces Muslim Backlash-ದಾವಣಗೆರೆ ಕಾಂಗ್ರೆಸ್ ಸಂಕಷ್ಟ |Kannada Folks

Congress Faces Muslim Backlash-ದಾವಣಗೆರೆ ಕಾಂಗ್ರೆಸ್ ಸಂಕಷ್ಟ |Kannada Folks

Minority Anger Puts Congress on Edge in Davangere Bypoll

Congress Faces Muslim Backlash-ದಾವಣಗೆರೆ ಕಾಂಗ್ರೆಸ್ ಸಂಕಷ್ಟ

ದಾವಣಗೆರೆ ದಕ್ಷಿಣ ಉಪಚುನಾವಣೆ ಸಂಬಂಧ ಕಾಂಗ್ರೆಸ್‌ ವಿರುದ್ಧ ಮುಸ್ಲಿಂ ಸಮುದಾಯದ ಅಸಮಾಧಾನ ತೀವ್ರವಾಗಿದೆ. ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ನಾಯಕರು ಸಿಟ್ಟಾಗಿದ್ದಾರೆ. ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಸಮಾಧಾನಪಡಿಸಲು ಯತ್ನಿಸಿದರೂ, ಆಕ್ರೋಶ ತಗ್ಗಿಲ್ಲ. ಸಚಿವ ಜಮೀರ್ ಅಹ್ಮದ್ ಪ್ರಚಾರಕ್ಕೆ ಬಾರದಿರುವುದು ಪಕ್ಷದ ಆತಂಕವನ್ನು ಹೆಚ್ಚಿಸಿದೆ. ಈ ನಡುವೆಯೂ ಸಿದ್ದರಾಮಯ್ಯ ರೋಡ್‌ಶೋ ಮೂಲಕ ಕಾಂಗ್ರೆಸ್ ಅಭ್ಯರ್ಥಿ ಪರ ಇಂದು ಮತಯಾಚಿಸಲಿದ್ದಾರೆ.ದಾವಣಗೆರೆ ಬೈ ಎಲೆಕ್ಷನ್​​: ಮುಸ್ಲಿಂ ಸಮುದಾಯದ ಆಕ್ರೋಶವೇ ಕಾಂಗ್ರೆಸ್​​ಗೀಗ ಟೆನ್ಷನ್​! -  Kannada News | Davangere By Election: Congress Grapples with Muslim  Community Tension Over Ticket Snub | TV9 Kannada

Read this :IndiGo Emergency Landing in Delhi-ದೆಹಲಿ ಇಂಡಿಗೋ ತುರ್ತು ಲ್ಯಾಂಡ್ 

ದಾವಣಗೆರೆ, ಏಪ್ರಿಲ್ 01: ಉಪ ಚುನಾವಣೆ ಅಖಾಡ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಪಕ್ಷಗಳ ಪ್ರಚಾರವೂ ಭರದಿಂದ ಸಾಗಿದೆ. ಆದರೆ ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ ಸಂಬಂಧಿಸಿ ಆಡಳಿತಾರೂಢ ಕಾಂಗ್ರೆಸ್​​ ಪಕ್ಷಕ್ಕೆ ಮುಸ್ಲಿಂ ಸಮುದಾಯದ ಅಸಮಾಧಾನವೇ ಈಗ ಬಿಸಿ ತುಪ್ಪವಾಗಿ ಮಾರ್ಪಟ್ಟಿದೆ. ಸಮುದಾಯಕ್ಕೆ ಟಿಕೆಟ್​​ ಕೈ ತಪ್ಪಿದ ಹಿನ್ನೆಲೆ ಅಸಮಾಧಾನಗೊಂಡಿದ್ದ ಕೆಲ ನಾಯಕರನ್ನು ಸ್ವತಃ ಸಿಎಂ ಮತ್ತು ಡಿಸಿಎಂ ಅವರೇ ಖುದ್ದು ಅಖಾಡಕ್ಕಿಳಿದು ಸಮಾಧಾನಪಡಿಸಿದ್ದರೂ, ಕೆಲ ಮುಖಂಡರ ಆಕ್ರೋಶದ ಕಿಚ್ಚು ಮಾತ್ರ ಇನ್ನೂ ಆರಿಲ್ಲ. ಹೀಗಾಗಿ ಮುಸ್ಲಿಂ ಮುಖಂಡರ ಮನೆಗಳಿಗೆ ಕಾಂಗ್ರೆಸ್ ನಾಯಕರ ಮಾರ್ಚ್ ಫಾಸ್ಟ್ ನಡೆಯುತ್ತಿದೆ.

ಹೌದು, ಉಪ ಚುನಾವಣೆಯ ಪ್ರಚಾರದ ಭರಾಟೆಯ ನಡುವೆಯೂ ಅಲ್ಪಸಂಖ್ಯಾತರ ಮುಖಂಡರನ್ನು ಸಮಾಧಾನ ಪಡಿಸುವ ಕೆಲಸಕ್ಕೆ ಕಾಂಗ್ರೆಸ್ ನಾಯಕರು ಮುಂದಾಗಿದ್ದಾರೆ. ಇದೇ ಕಾರಣಕ್ಕೆ ದಾವಣಗೆರೆಗೆ ಪ್ರಚಾರಕ್ಕೆ ಬಂದ ನಾಯಕರೆಲ್ಲ ಅಲ್ಪಸಂಖ್ಯಾತರ ಮನೆಗೆ ತೆರಳಿ ಮಾತುಕತೆ ನಡೆಸುತ್ತಿದ್ದಾರೆ. ಒಂದೊಮ್ಮೆ ಮುಸ್ಲಿಂ ಸಮುದಾಯ ನಮಗೆ ಕೈಕೊಟ್ಟರೆ ಎಂಬ ಆತಂಕ ನಾಯಕರಿಗೆ ಶುರುವಾಗಿದ್ದು, ಸಚಿವ ಜಮೀರ್​​ ಕೂಡ ಇತ್ತ ಮುಖ ಮಾಡದಿರೋದು ಟೆನ್ಷನ್​​ ಹೆಚ್ಚಿಸಿದೆ. ಕ್ಷೇತ್ರಕ್ಕೆ ಜಮೀರ್​​ ಪ್ರಚಾರಕ್ಕೆ ಬರಬೇಕೆಂಬ ಬಗ್ಗೆ ಹೆಚ್ಚಿನ ಬೇಡಿಕೆ ಇದ್ದರೂ, ಸಚಿವರು ಮಾತ್ರ ಕೇರಳಕ್ಕೆ ಹೋಗಿ ಕುಳಿತಿದ್ದಾರೆ. ಮುಸ್ಲಿಂ ಸಮುದಾಯಕ್ಕೆ ದಾವಣಗೆರೆ ದಕ್ಷಿಣ ಕ್ಷೇತ್ರದಿಂದ ಕಾಂಗ್ರೆಸ್​​ ಟಿಕೆಟ್​​ ಕೊಡಿಸುವ ಬಗ್ಗೆ ಜಮೀರ್​​ ಶಪಥ ಮಾಡಿದ್ದರು. ಆದರೆ ಕೊನೇ ಕ್ಷಣದಲ್ಲಿ ಟಿಕೆಟ್​​ ಕೈತಪ್ಪಿದ ಕಾರಣ ಅವರು ಬೇಸರಗೊಂಡಿದ್ದಾರಾ ಎಂಬ ಅನುಮಾನವೂ ಮೂಡಿದೆ. ಇದೇ ಕಾರಣಕ್ಕೆ ಅವರು ದಾವಣಗೆರೆಯತ್ತ ಮುಖ ಮಾಡುತ್ತಿಲ್ಲ ಎಂಬ ಮಾತುಗಳೂ ಕೇಳಿಬಂದಿವೆ.

ಇಂದು ಸಿಎಂ ಸಿದ್ದರಾಮಯ್ಯರಿಂದ ಪ್ರಚಾರ

ಕಾಂಗ್ರೆಸ್​​ಗೆ ಪ್ರತಿಷ್ಠೆಯ ಕಣವಾಗಿರುವ ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಇಂದು ಸಿಎಂ ಸಿದ್ದರಾಮಯ್ಯ ಮತಬೇಟೆ ನಡೆಸಲಿದ್ದಾರೆ. ಅಹಿಂದಾ ಮತಗಳೇ ಅಧಿಕವಾಗಿರುವ ಗ್ರಾಮೀಣ ಪ್ರದೇಶಗಳ ಮೇಲೆ ಸಿಎಂ ಕಣ್ಣಿಟ್ಟಿದ್ದು, ದಾವಣಗೆರೆ ದಕ್ಷಿಣ ಕ್ಷೇತ್ರದ ನಾಗನೂರು, ಶಿರಮ ಗೊಂಡನಹಳ್ಳಿ, ಆರನೇ ಮೈಲು ಕಲ್ಲು, ಹೊಸ ಬೆಳವನುರು, ತುರ್ಚಘಟ್ಟ, ಹೊಸ ನಾಯಕನಹಳ್ಳಿ ಗ್ರಾಮಗಳಲ್ಲಿ ಭರ್ಜರಿ ರೋಡ್ ಶೋ ನಡೆಸಲಿದ್ದಾರೆ. ಮಧ್ಯಾಹ್ನ ಹದಡಿ ಗ್ರಾಮದಲ್ಲಿನ ಸಾರ್ವಜನಿಕ ಸಭೆಯಲ್ಲಿಯೂ ಅವರು ಭಾಗಿಯಾಗಿ, ಕಾಂಗ್ರೆಸ್ ಅಭ್ಯರ್ಥಿ ಸಮರ್ಥ ಶಾಮನೂರ ಪರ ಮತಯಾಚನೆ ಮಾಡಲಿದ್ದಾರೆ.

Follow Us 

Follow KannadaFolks channel on WhatsApp

Visit the Kannadafolks.in follow the latest updates

Subscribe and Receive exclusive content and updates on your favourite topics

Subscribe to KannadaFloks YouTube Channel and watch Videos

 

 

Subscribe for Free and Support Us 

ನಿಮ್ಮ ಈ - ಮೇಲ್ ಬಳಸಿ 👇ಇದೀಗ ಉಚಿತವಾಗಿ 🆓 ಚಂದಾದಾರರಾಗಿ..!  ನಿಮಗೆ ನಮ್ಮ ಕಥೆಗಳು, ಹಾಡುಗಳು ಮತ್ತು ಮಾಹಿತಿ ಇಷ್ಟವಾದರೆ ನಿಮ್ಮ ಸಮೂಹಕ್ಕೆ ಶೇರ್ ಮಾಡುವುದನ್ನ ಮರೆಯದಿರಿ 
RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments