HomeNewsCultureDasara - Day 1- Story of goddess shailaputri: Navarathri Vibhava

Dasara – Day 1- Story of goddess shailaputri: Navarathri Vibhava

ಶೈಲ ಪುತ್ರಿಯ ಹಿನ್ನಲೆ:
ಪರ್ವತರಾಜ ಹಿಮವಂತನ ಪುತ್ರಿಯೇ ಶೈಲ ಪುತ್ರಿ. ಈ ದೇವಿಯ ಅವತಾರದ ಹಿಂದೆ ಒಂದು ಕಥೆ ಇದೆ. ಪ್ರಜಾಪತಿ ಬ್ರಹ್ಮನ ಮಗನಾದ ದಕ್ಷ ತನ್ನ 27 ಪುತ್ರಿಯರನ್ನು ಚಂದ್ರನಿಗೆ ಮದುವೆ ಮಾಡಿ ಕೊಟ್ಟಿದ್ದ, ಉಳಿದವರಲ್ಲಿ ಒಬ್ಬಳಾದ ದಾಕ್ಷಾಯಿಣಿ ಶಿವನನ್ನು ವರಿಸಿದಳು. ದಕ್ಷ ಮಹಾರಾಜನಿಗೆ ಅಳಿಯ ಶಿವನನ್ನು ಕಂಡರೆ ಆಗುತ್ತಿರಲಿಲ್ಲ.2

ಸ್ಮಶಾನದಲ್ಲಿ ವಾಸ ಮಾಡುವ, ಕುತ್ತಿಗೆಯಲ್ಲಿ ನಾಗರ ಹಾವನ್ನು ಸುತ್ತಿಕೊಂಡಿರುವ ಶಿವನಿಗಿಂತ, ಚೆಲುವೆಯಾಗಿರುವ ತನ್ನ ಮಗಳಿಗೆ ಉತ್ತಮ ವರ ಸಿಗುತ್ತಿದ್ದ ಎಂದು ಹೇಳಿಕೊಳ್ಳುತ್ತಿದ್ದ. ಶಿವನ ವಿಚಾರದಲ್ಲಿ ಅಸಮಾಧಾನ ವ್ಯಕ್ತಪಡಿಸುತ್ತಿದ್ದ ದಕ್ಷ ಒಂದು ದೊಡ್ಡ ಯಜ್ಞವನ್ನು ಆಯೋಜಿಸಿದ್ದ.

Read here – ಶಿವನು ಭಿಕ್ಷೆಗೆ ಬಂದ; Shivanu bhikshake banda lyrics

Bhagavatham: Daksha Yagnam

 

ಈ ಯಜ್ಞಕ್ಕೆ ಆಗಮಿಸುವಂತೆ ಎಲ್ಲ ಮಕ್ಕಳಿಗೆ, ಬಂಧುಮಿತ್ರರಿಗೆ ಆಹ್ವಾನ ನೀಡಿದ್ದ. ಈ ಸಮಾರಂಭಕ್ಕೆ ದಕ್ಷ ಪ್ರವೇಶಿಸುತ್ತಿದ್ದಂತೆ ಬ್ರಹ್ಮ ಮತ್ತು ಶಿವ ಬಿಟ್ಟು ಉಳಿದವರೆಲ್ಲರೂ ಎದ್ದು ನಿಂತು ಗೌರವ ಸೂಚಿಸಿದರು. ಈಗ ದಕ್ಷನು ‘ ಶಿವ ದೇವರು ಆಗಿರಬಹುದು, ಆದರೆ ಅವನಿಗೆ ನಾನು ಮಾವ. ಸಂಬಂಧದಲ್ಲಿ ನಾನು ಆತನಿಗಿಂತ ದೊಡ್ಡವ. ಶಿವ ಎದ್ದು ನಿಂತು ನನಗೆ ಗೌರವ ನೀಡಬಹುದಿತ್ತು. ಈ ರೀತಿ ಅಗೌರವ ಸಲ್ಲಿಸಿದ್ದು ಸರಿಯಲ್ಲ” ಎಂದು ಮನಸ್ಸಿನಲ್ಲೇ ಉರಿದು ಬಿದ್ದ.

ಇದಕ್ಕೆ ಪ್ರತೀಕಾರವೆಂಬಂತೆ ದಕ್ಷನು ಶಿವನಿಗೆ ಅವಮಾನ ಮಾಡಬೇಕೆಂದು ಇನ್ನೊಂದು ಯಜ್ಞವನ್ನು ಆಯೋಜಿಸಿದ, ಆದರೆ ಮಗಳು ದಾಕ್ಷಾಯಿಣಿ ಹಾಗೂ ಅಳಿಯ ಶಿವನಿಗೆ ಆಹ್ವಾನ ನೀಡದೇ ಉಳಿದ ಎಲ್ಲಾ ಮಕ್ಕಳಿಗೂ ಆಹ್ವಾನ ನೀಡಿದ್ದ.

Read this also – Ravana’s family; Episode 4- Kannada Version; ರಾವಣನಿಗೆ ಏಳು ಸಹೋದರರು

ತಂದೆಯು ಯಾಗವನ್ನು ಆಯೋಜಿಸಿರುವುದನ್ನು ತಿಳಿದ ದಾಕ್ಷಾಯಿಣಿ ಶಿವನೊಂದಿಗೆ’ ಈ ಕಾರ್ಯಕ್ರಮದಲ್ಲಿ ಭಾಗಿಯಾಗೋಣವೇ’ ಎಂದು ಕೇಳುತ್ತಾಳೆ. ಅದಕ್ಕೆ ಶಿವನು ” ಯಾವುದೇ ಶುಭ ಸಮಾರಂಭಕ್ಕೆ ಆಹ್ವಾನ ಇಲ್ಲದೇ ಹೋಗಬಾರದು, ತವರು ಮನೆಯಾದರೂ ಹೋಗಬಾರದು’ ಎಂದು ಹೇಳುತ್ತಾನೆ. ಇದಕ್ಕೆ ದಾಕ್ಷಾಯಿಣಿಯು ‘ಕೆಲಸದ ಒತ್ತಡದಲ್ಲಿ ಯಾವುದೋ ಅನಿವಾರ್ಯ ಕಾರಣದಿಂದಾಗಿ ತಂದೆಗೆ ಮರೆತು ಹೋಗಿರಬಹುದು, ತವರು ಮನೆಗೆ ಹೋಗಲು ಮಗಳಿಗೆ ಏಕೆ ಆಹ್ವಾನ ಬೇಕು’ ಎಂದು ಪ್ರಶ್ನಿಸುತ್ತಾಳೆ. ತೆರಳುವುದು ಬೇಡ ಎಂದು ಹೇಳಿದರೂ ಪತ್ನಿ ದಾಕ್ಷಾಯಿಣಿಯ ಹಠಕ್ಕೆ ಕರಗಿ ಶಿವ ಅನುಮತಿ ನೀಡುತ್ತಾನೆ.

ಶಿವನಿಂದ ಅನುಮತಿಯನ್ನು ಪಡೆದು ದಾಕ್ಷಾಯಿಣಿಯು ತಂದೆಯ ಯಾಗಕ್ಕೆ ಹೋಗುತ್ತಾಳೆ. ಆದರೆ ದಕ್ಷನು ಯಾಗಕ್ಕೆ ಬಂದ ಮಗಳನ್ನು ನೋಡಿ ‘ ನಾನು ಆಹ್ವಾನ ನೀಡದಿದ್ದರೂ ಬಂದಿದ್ದು ಯಾಕೆ? ನಿನ್ನ ಪತಿಯನ್ನೂ ಕರೆದುಕೊಂಡು ಬಂದಿದ್ದೀಯಾ ಎಂದು ಪ್ರಶ್ನೆ ಮಾಡುತ್ತಾನೆ. ತಂದೆ ಮನ ನೋಯಿಸಿದರೂ ನೋವನ್ನು ತಡೆದುಕೊಳ್ಳುತ್ತಾಳೆ. ಯಜ್ಞ ಆರಂಭವಾದ ಬಳಿಕವೂ ದಕ್ಷ ಮತ್ತೆ ಶಿವನನ್ನು ಅವಮಾನಿಸುತ್ತಾನೆ. ಎಲ್ಲರ ಮುಂದೆ ಪತಿಗೆ ಆದ ಅವಮಾನವನ್ನು ಸಹಿಸದ ದಾಕ್ಷಾಯಿಣಿಯು ಮುಂದಿದ್ದ ”ಯಜ್ಞಕುಂಡಕ್ಕೆ ಹಾರಿ ಪ್ರಾಣತ್ಯಾಗ ಮಾಡುತ್ತಾಳೆ.

Aadi Shakti - 󾓶 Goddess Dakshayani's self immolation in the Daksha Yagna  󾓶 Daksha Prajapati , the father of Dakshayani Sati lost all his knowledge  which he acquired through his penance _ Kannadafolks
Yagna ahaavana – Kannadafolks

ಹೀಗೆ ತನ್ನ ಶರೀರವನ್ನು ಭಸ್ಮವಾಗಿಸಿ ಮುಂದಿನ ಜನ್ಮದಲ್ಲಿ ಹಿಮವಂತನ ಪುತ್ರಿಯಾಗಿ ಜನಿಸಿದವಳೇ ಶೈಲ ಪುತ್ರಿ. ಮತ್ತೆ ಶಿವನ ಮಡದಿ ‘ಸತಿ’ಯಾಗಿ ಹೆಸರು ಪಡೆಯುತ್ತಾಳೆ. ಮದುವೆಯಾದ ಬಳಿಕ ಶಿವ ಪತ್ನಿಗೆ ವರ್ಷದಲ್ಲಿ 10 ದಿನ ಮಾತ್ರ ತವರು ಮನೆಗೆ ತೆರಳಲು ಅನುಮತಿ ನೀಡುತ್ತಾನೆ. ಅದರಂತೆ ಈಗಲೂ ದಸರಾ ಸಮಯದಲ್ಲಿ ಮದುವೆಯಾದ ಹೆಣ್ಣು ಮಕ್ಕಳನ್ನು ತವರಿಗೆ ಆಮಂತ್ರಿಸಿ ಗೌರವಿಸುವ ಸಂಪ್ರದಾಯವಿದೆ.

Read – Mysore Dasara: The dark legend behind India’s grandest Dussehra celebrations:

ಶೈಲ ಪುತ್ರಿಯ ರೂಪ:
ಶೈಲಪುತ್ರಿಯನ್ನು ಆದಿಶಕ್ತಿಯೆಂದು ಗುರುತಿಸಲಾಗುತ್ತದೆ. ಆಕೆಯು ಗೂಳಿಯ ಮೇಲೆ ಸವಾರಿ ಮಾಡುತ್ತಿದ್ದ ಕಾರಣ ವೃಷರುಧ ಎಂದೂ ಕರೆಯಲಾಗುತ್ತದೆ. ಶೈಲಪುತ್ರಿಯು ಮನೋಕಾರಕನಾದ ಚಂದ್ರನನ್ನು ತನ್ನ ಮಸ್ತಿಷ್ಕದ ಮೇಲೆ ಧರಿಸಿದ್ದಾಳೆ. ತಮೋಗುಣದ ಸಂಕೇತವಾದ ತ್ರಿಶೂಲವನ್ನು ತನ್ನ ಬಲಗೈಯಲ್ಲಿ ಧಾರಣೆ ಮಾಡಿದ್ದಾಳೆ. ಶ್ವೇತ ವಸ್ತ್ರಧಾರಿಯಾಗಿರುವ ಶೈಲ ಪುತ್ರಿಯು ಮಲ್ಲಿಗೆ ಪ್ರಿಯಳು.

 

Devi Shailputri: The Divine Daughter of ...

kannadafolks
kannadafolkshttps://kannadafolks.in/
ಜನಪದ ಜಾತಿ, ಮತ, ಧರ್ಮ ಮೀರಿದ್ದು. ಅದು ಮಾತು, ಹಾಡು ಮೂಲಕ ಒಬ್ಬರಿಂದ ಮತ್ತೊಬ್ಬರಿಗೆ ಪಸರಿಸಿದ ಸಂಸ್ಕೃತಿ. ನಾವಿಂದು ಆಕಾಶದಿಂದ, ಸಾಗರದ ತಳದವರೆಗೆ ಹೋಗಿ ಅನ್ವೇಷನೆ ಯಾಗಿದೆ.
RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments