Defamation case of ₹500 Cr filed by Assam CM – ಅಸ್ಸಾಂ ಸಿಎಂ ವಿರುದ್ಧ ಕಾಂಗ್ರೆಸ್ ನಾಯಕರು
ಕಾಂಗ್ರೆಸ್ ನಾಯಕರು ಇತ್ತೀಚೆಗೆ ಪತ್ರಿಕಾಗೋಷ್ಠಿ ನಡೆಸಿ ತಮ್ಮ ವಿರುದ್ಧ ಮಾಡಿದ ಆರೋಪಗಳು “ದುರುದ್ದೇಶಪೂರಿತ” ಎಂದಿರುವ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು, ಅವರ ವಿರುದ್ಧ 500 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಿರುವುದಾಗಿ ಮಂಗಳವಾರ ತಿಳಿಸಿದ್ದಾರೆ.
ಫೆಬ್ರವರಿ 4 ರಂದು ಜಂಟಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅಸ್ಸಾಂ ಕಾಂಗ್ರೆಸ್ ಅಧ್ಯಕ್ಷ ಗೊಗೊಯ್, “ರಾಜ್ಯದಾದ್ಯಂತ ಸುಮಾರು 12,000 ಬಿಘಾ ಭೂಮಿಯನ್ನು ಸಿಎಂ ಮತ್ತು ಅವರ ಕುಟುಂಬ ಒತ್ತುವರಿ ಮಾಡಿದೆ” ಎಂದು ಆರೋಪಿಸಿದ್ದರು.
“ಇಂದು ತಮ್ಮ ವಿರುದ್ಧದ ಆರೋಪಕ್ಕೆ ಪ್ರತಿಕ್ರಿಯಿಸಿರುವ ಅಸ್ಸಾಂ ಸಿಎಂ, ನನ್ನ ವಿರುದ್ಧ ಸುಳ್ಳು, ದುರುದ್ದೇಶಪೂರಿತ ಮತ್ತು ಮಾನಹಾನಿಕರ ಆರೋಪಗಳನ್ನು ಮಾಡಿದ್ದಕ್ಕಾಗಿ ಕಾಂಗ್ರೆಸ್ ನಾಯಕರಾದ ಜಿತೇಂದ್ರ ಸಿಂಗ್, ಭೂಪೇಶ್ ಬಾಘೇಲ್ ಹಾಗೂ ಗೌರವ್ ಗೊಗೊಯ್ ವಿರುದ್ಧ 500 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಿದ್ದೇನೆ” ಎಂದು ಶರ್ಮಾ X ನಲ್ಲಿ ಪೋಸ್ಟ್ ಮಾಡಿದ್ದಾರೆ.
ಸೋಮವಾರ ನಡೆದ ಮತ್ತೊಂದು ಪತ್ರಿಕಾಗೋಷ್ಠಿಯಲ್ಲಿ, ಗೊಗೊಯ್ ಅವರು, ತಮ್ಮ ವಿಡಿಯೋಗಳ ಮೂಲಕ ಮುಖ್ಯಮಂತ್ರಿ ಶರ್ಮಾ ಅವರು ಮುಸ್ಲಿಮರ ವಿರುದ್ಧ “ಜನಾಂಗೀಯ ಹತ್ಯೆಯನ್ನು ಪ್ರಚೋದಿಸುತ್ತಿದ್ದಾರೆ” ಎಂದು ಆರೋಪಿದ್ದಾರೆ.
Follow Us
Follow KannadaFolks channel on WhatsApp
Visit the Kannadafolks.in follow the latest updates
Subscribe and Receive exclusive content and updates on your favourite topics
Subscribe to KannadaFloks YouTube Channel and watch Videos
Support Us 
