Delhi government – ನೌಕರರಿಗೆ ವಾರಕ್ಕೆ 2 ದಿನ ವರ್ಕ್ ಫ್ರಮ್ ಹೋಮ್; 6 ತಿಂಗಳು ಹೊಸ ವಾಹನ ಖರೀದಿ ಮಾಡುವಂತಿಲ್ಲ!
ತೈಲ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಇಂಧನ ಉಳಿತಾಯಕ್ಕಾಗಿ ‘ವರ್ಕ್ ಫ್ರಮ್ ಹೋಮ್’ ಮಾಡುವಂತೆ ಸಲಹೆ ನೀಡಿದ್ದೇ ತಡ, ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರು ಗುರುವಾರ ಸರ್ಕಾರಿ ನೌಕರರಿಗೆ ವಾರಕ್ಕೆ ಎರಡು ದಿನ ಮನೆಯಿಂದಲೇ ಕೆಲಸ ಮತ್ತು ವಾಹನಗಳ ಕನಿಷ್ಠ ಬಳಕೆ ಘೋಷಿಸಿದ್ದಾರೆ.
ದೆಹಲಿ ಸರ್ಕಾರದ ಈ ನಿರ್ಧಾರ ನಾಳೆಯಿಂದಲೇ ಜಾರಿಗೆ ಬರಲಿದ್ದು, ಇಂಧನ ಉಳಿತಾಯ ಮತ್ತು ದಕ್ಷ ಆಡಳಿತವನ್ನು ಉತ್ತೇಜಿಸಲು ಬಿಜೆಪಿ ನೇತೃತ್ವದ ಸರ್ಕಾರ ರಾಷ್ಟ್ರ ರಾಜಧಾನಿಯಲ್ಲಿ “ಮೇರಾ ಭಾರತ್ ಮೇರಾ ಯೋಗದಾನ್”(ನನ್ನ ಭಾರತ, ನನ್ನ ಕೊಡುಗೆ) ಅಭಿಯಾನವನ್ನು ಪ್ರಾರಂಭಿಸುತ್ತಿದೆ.
ಪ್ರತಿ ಸೋಮವಾರ “ಮೆಟ್ರೋ ಸೋಮವಾರ” ಎಂದು ಆಚರಿಸಲಾಗುವುದು ಎಂದು ಸರ್ಕಾರ ತಿಳಿಸಿದೆ. ಈ ದಿನ ಎಲ್ಲಾ ಸಚಿವರು, ಅಧಿಕಾರಿಗಳು ಮತ್ತು ಉದ್ಯೋಗಿಗಳು ಮೆಟ್ರೋದಲ್ಲಿ ಪ್ರಯಾಣಿಸಬೇಕು ಎಂದು ಸರ್ಕಾರ ಸೂಚಿಸಿದೆ.
ವಾರದಲ್ಲಿ ಒಂದು ದಿನ “ವಾಹನ ರಹಿತ ದಿನ”ವನ್ನು ಆಚರಿಸಲು ಸರ್ಕಾರ ಸಾರ್ವಜನಿಕರಿಗೆ ಮನವಿ ಮಾಡಿದೆ. ದೆಹಲಿಯಲ್ಲಿ ಮುಂದಿನ ಆರು ತಿಂಗಳವರೆಗೆ ಯಾವುದೇ ಹೊಸ ಪೆಟ್ರೋಲ್, ಡೀಸೆಲ್ ಅಥವಾ ಎಲೆಕ್ಟ್ರಿಕ್ ವಾಹನ ಖರೀದಿ ಮಾಡುವಂತಿಲ್ಲ ಎಂದು ಸರ್ಕಾರ ಹೇಳಿದೆ. ಇನ್ನೂ ಸರ್ಕಾರಿ ನೌಕರರಿಗೆ ಸಾರಿಗೆ ಭತ್ಯೆಯನ್ನು ಶೇ. 10 ರಷ್ಟು ಹೆಚ್ಚಿಸಲಾಗುವುದು ಎಂದು ಸರ್ಕಾರ ತಿಳಿಸಿದೆ.

Read here: Delhi woman relocates to bengaluru ಬೆಂಗಳೂರನ್ನು ರಾಷ್ಟ್ರ ರಾಜಧಾನಿ ಎಂದು ಘೋಷಿಸಿ| Kannada Folks
ವಿದೇಶಿ ಪ್ರಯಾಣಕ್ಕೂ ನಿಷೇಧ
ದೆಹಲಿ ಸರ್ಕಾರದ ಯಾವುದೇ ಸಚಿವರು ಅಥವಾ ಅಧಿಕಾರಿಗಳು ಮುಂದಿನ ಒಂದು ವರ್ಷದವರೆಗೆ ಯಾವುದೇ ಅಧಿಕೃತ ವಿದೇಶ ಪ್ರವಾಸ ಕೈಗೊಳ್ಳುವಂತಿಲ್ಲ ಎಂದು ಸರ್ಕಾರ ಹೇಳಿದೆ.
ಹೆಚ್ಚುವರಿಯಾಗಿ, ಜಾಗೃತಿ ಮೂಡಿಸಲು 90 ದಿನಗಳ ಅಭಿಯಾನ ನಡೆಸಲಾಗುವುದು. ಇಂಧನ ಉಳಿತಾಯವನ್ನು ಉತ್ತೇಜಿಸಲು ಮತ್ತು ರಾಷ್ಟ್ರ ನಿರ್ಮಾಣಕ್ಕೆ ಕೊಡುಗೆ ನೀಡುವ ಪ್ರತಿಜ್ಞೆಯನ್ನು ನಾಗರಿಕರಿಗೆ ನೀಡಲಾಗುವುದು ಎಂದು ಸರ್ಕಾರ ತಿಳಿಸಿದೆ.
ವಿದ್ಯುತ್ ಬಳಕೆಯನ್ನು ಕಡಿಮೆ ಮಾಡಲು, ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಹವಾನಿಯಂತ್ರಣಗಳನ್ನು 24 ರಿಂದ 26 ಡಿಗ್ರಿ ಸೆಲ್ಸಿಯಸ್ ನಡುವೆ ಹೊಂದಿಸಲು ನಿರ್ಧರಿಸಲಾಗಿದೆ.
Follow Us
Follow KannadaFolks channel on WhatsApp
Visit the Kannadafolks.in follow the latest updates
Subscribe and Receive exclusive content and updates on your favourite topics
Subscribe to KannadaFloks YouTube Channel and watch Videos
Support Us 


