HomeNewsDK Shivakumar Warns Congress - ಸಂಪುಟ ಪುನಾರಚನೆಗೆ ಡಿಕೆಶಿ ವಿರೋಧ

DK Shivakumar Warns Congress – ಸಂಪುಟ ಪುನಾರಚನೆಗೆ ಡಿಕೆಶಿ ವಿರೋಧ

ದಾವಣಗೆರೆ ಬೈ ಎಲೆಕ್ಷನ್ ಜಟಾಪಟಿ ನಡುವೆ ಹಿರಿಯ ಶಾಸಕರು ಮಂತ್ರಿಗಿರಿ ಬೇಡಿಕೆಯೊಂದಿಗೆ ಇಂದು (ಏಪ್ರಿಲ್ 12) ದೆಹಲಿ ಫ್ಲೈಟ್ ಹತ್ತಿದ್ದಾರೆ.

DK Shivakumar Warns Congress – ಸಂಪುಟ ಪುನಾರಚನೆಗೆ ಡಿಕೆಶಿ ವಿರೋಧ

ಕರ್ನಾಟಕದಲ್ಲಿ ಎರಡು ಉಪ ಚುನಾವಣೆಗಳು ಮುಕ್ತಾಯವಾದ ಬೆನ್ನಲ್ಲೆ ಸಚಿವ ಸಂಪುಟ ಪುನಾರಚನೆ  ಚಟುವಟಿಕೆಗಳು ಜೋರಾಗಿವೆ. ಸರ್ಕಾರವೂ ಮೂರು ವರ್ಷ ಪೂರೈಸುತ್ತಿರುವ ಹಿನ್ನೆಲೆ ನಮಗೂ ಸಚಿವ ಸ್ಥಾನ ಕೊಡಿ ಎಂದು 25 ಕ್ಕೂ ಅಧಿಕ ಶಾಸಕರು ಹೈಕಮಾಂಡ್‌ ಭೇಟಿಗೆ ದೆಹಲಿಗೆ ತೆರಳಿದ್ದಾರೆ. ಆದ್ರೆ, ಶಾಸಕರ ದೆಹಲಿ ಯಾತ್ರೆಗೆ ಪರೋಕ್ಷವಾಗಿ ಸಿಎಂ ಸಿದ್ದರಾಮಯ್ಯ  ಬೆಂಬಲಿಸಿದರೆ ಮತ್ತೊಂದೆಡೆ ಡಿಸಿಎಂ ಡಿಕೆ ಶಿವಕುಮಾರ್ ಗರಂ ಆಗಿದ್ದಾರೆ. ಅಲ್ಲದೇ ಖಡಕ್ ಎಚ್ಚರಿಕೆಯನ್ನೂ ಸಹ ನೀಡಿದ್ದು, ಇದು ರಾಜ್ಯ ಕಾಂಗ್ರೆಸ್​​​ನಲ್ಲಿ ಭಾರೀ ಸಂಚಲನಕ್ಕೆ ಕಾರಣವಾಗಿದೆ.

ಪಕ್ಷದ ಶಿಸ್ತನ್ನು ಯಾರೂ ಮೀರಬೇಡಿ

ಸಚಿವ ಸ್ಥಾನಕ್ಕಾಗಿ ಆಗ್ರಹಿಸಿ ಶಾಸಕರ ದೆಹಲಿ ಪ್ರವಾಸ ವಿಚಾರವಾಗಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಡಿಕೆ ಶಿವಕುಮಾರ್, ಪಕ್ಷದ ಶಿಸ್ತನ್ನು ಯಾರೂ ಮೀರಬೇಡಿ. ಪಕ್ಷದ ಚೌಕಟ್ಟಿನ ಒಳಗೆ ಎಲ್ಲಾ ಶಾಸಕರು ಮಾತನಾಡಬೇಕು. ಕೆಲವರು ಏನೇನು​ ಮಾತನಾಡಿದ್ದಾರೋ ಎಲ್ಲವನ್ನೂ ಗಮನಿಸಿದ್ದೇನೆ. ಆದರೆ ಮೀಡಿಯಾ ನಿಮ್ಮ ಭವಿಷ್ಯ ಅಲ್ಲ, ಪಾರ್ಟಿ ನಿಮ್ಮ ಭವಿಷ್ಯ. ಪಾರ್ಟಿಯಲ್ಲೇ ಎಲ್ಲರ ಭವಿಷ್ಯವಿದೆ, ಪಕ್ಷದ ಚೌಕಟ್ಟಿನೊಳಗೆ ಇರಬೇಕು. ಇದು ಸಂಪುಟ ಪುನಾರಚನೆ ಕೇಳುವ ಟೈಂ ಅಲ್ಲ. ಈಗ ಮಂತ್ರಿ ಮಾಡೋ ಟೈಂ ಅಲ್ಲ, ಮೊದಲು ಚುನಾವಣೆ ಮಾಡೋಣ ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ.ಸುರ್ಜೇವಾಲ ಒನ್ ಟು ಒನ್ ಸಭೆ,ಕಾಂಗ್ರೆಸ್ ನಾಯಕತ್ವ ಬದಲಾವಣೆ ಚರ್ಚೆಯ ಬೆನ್ನಲ್ಲೇ ದಿಢೀರ್  ದೆಹಲಿ ವಿಮಾನ ಏರಲಿರುವ ಸಿದ್ದು, ಡಿಕೆಶಿ! ಕುತೂಹಲ ಕೆರಳಿಸಿದ ಪ್ರವಾಸ ...

Read this – West Asia War ಇರಾನ್‌ಗೆ ಮಿಲಿಟರಿ ಬೆಂಬಲ ನೀಡಿದರೆ ಶೇ 50ರಷ್ಟು ಸುಂಕ

ವರಿಷ್ಠರನ್ನ ಭೇಟಿ ಮಾಡೋದು ತಪ್ಪೇನಿಲ್ಲ. ಆದ್ರೆ ಬೇಕಾಬಿಟ್ಟಿ ಏನೇನೋ ಕಮೆಂಟ್ ಮಾಡೋದಾದ್ರೆ ನಾವು ಕಠಿಣ ಕ್ರಮ ತೆಗೆದುಕೊಳ್ಳಬೇಕಾಗುತ್ತದೆ. ನನ್ನ ಹತ್ತಿರ ಕೆಲವರು ಬಂದು ಹೇಳಿದ್ದರು. ಹೋಗಿ ಕೇಳೋದರಲ್ಲಿ ತಪ್ಪು ಇಲ್ಲ . ಫಸ್ಟ್ ಎಂಎಎಲ್ ಆದವರು, ಎರಡನೇ ಬಾರಿ ಆದವರು ಕೇಳೋದು ತಪ್ಪು ಏನೆಲ್ಲ. ಹಿಂದೆ ಎಲ್ಲಾ ನಡೆದಿದೆ. ಆದ್ರೆ ಇದು ಟೈಮ್ ಅಲ್ಲ, ಇದು ಟೈಮ್ ಅಲ್ಲ. ಈಗ ಎಲೆಕ್ಷನ್ ಇನ್ನೂ ನಡೆಯುತ್ತಿದೆ. ಹೀಗಾಗಿ ಮೊದಲು ಎಲೆಕ್ಷನ್ ಮಾಡೋಣ ಎಂದಿದ್ದಾರೆ.

ಶಾಸಕರ ದೆಹಲಿ ದಂಡಯಾತ್ರೆ ಬೆಂಬಲಿಸಿದ ಸಿಎಂ

ಹೌದು…ಅತ್ತ ಡಿಕೆ ಶಿವಕುಮಾರ್ ಸಚಿವ ಪುನಾರಚಣೆಗೆ ವಿರೋಧ ವ್ಯಕ್ತಪಡಿಸಿದ್ದು, ದೆಹಲಿಗೆ ತೆರಳಿದ ಶಾಸಕರಿಗೆ ಖಡಕ್ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ. ಆದ್ರೆ, ಇದಕ್ಕೂ ಮೊದಲು ಮಾತನಾಡಿರುವ ಸಿಎಂ ಸಿದ್ದರಾಮಯ್ಯ, ಸಂಪುಟ ಪುನಾರಚನೆ ಸಂಬಂಧ ದೆಹಲಿಗೆ ತೆರಳಿದ ಶಾಸಕರ ಪರವಾಗಿ ಮಾತನಾಡಿದ್ದಾರೆ

ಶಾಸಕರ ನಡೆ ಬಗ್ಗೆ ನಿನ್ನೆ(ಏಪ್ರಿಲ್ 12) ಚಿಕ್ಕಮಗಳೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ, ದೆಹಲಿಗೆ ಹೋದ್ರೆ ತಪ್ಪೇನು, ಬೇಡ ಅಂದೋರು ಯಾರು? ರಾಜ್ಯದಲ್ಲಿ ಸಚಿವ ಸಂಪುಟ ಪುನಾರಚನೆ ಬಗ್ಗೆ ಚರ್ಚೆ ಮಾಡಿದ್ದೇವೆ. ಎರಡೂವರೆ ವರ್ಷಗಳ ಬಳಿಕ ಸಂಪುಟ ಪುನಾರಚನೆ ಮಾಡಬೇಕಿತ್ತು. ಪಂಚ ರಾಜ್ಯಗಳ ಚುನಾವಣೆ, ಬೈಎಲೆಕ್ಷನ್‌ನಿಂದ ವಿಳಂಬವಾಗಿದೆ ಎಂದು ಸ್ಪಷ್ಟಪಡಿಸಿದ್ದರು. ಈ ಮೂಲಕ ಸಿದ್ದರಾಮಯ್ಯನವರು ಪರೋಕ್ಷವಾಗಿ ಶಾಸಕರ ದೆಹಲಿ ಯಾತ್ರೆಗೆ ಬೆಂಬಲಿಸಿದ್ದಾರೆ.

Read this – Jasprit Bumrah IPL Shock-ಆರು ಬೌಲರ್‌ಗಳಿಗೆ ವಿಕೆಟ್ ಇಲ್ಲ

ಮತ್ತೆ ಶುರುವಾಯ್ತಾ ಡಿಕೆಶಿ-ಸಿದ್ದರಾಮಯ್ಯ ಮುಸುಕಿನ ಗುದ್ದಾಟ?

ನಾಯಕತ್ವ ಬದಲಾವಣೆ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ನಡುವೆ ಮುಸುಕಿನ ಗುದ್ದಾಟ ನಡೆಯುತ್ತಲೇ ಇದೆ. ಸಮಯ ಸಂದರ್ಭ ಬಂದಾಗೆಲ್ಲಾ ಡಿಕೆ ಶಿವಕುಮಾರ್ ಪರೋಕ್ಷವಾಗಿ ನಾಯಕತ್ವ ಬದಲಾವಣೆ ಬಗ್ಗೆ ಪ್ರಸ್ತಾಪಿಸುತ್ತಲೇ ಬಂದಿದ್ದಾರೆ.  ಸಿಎಂ ಆಗಲೇಬೇಕೆಂದು ಪಟ್ಟು ಹಿಡಿದಿರುವ ಡಿಕೆ ಶಿವಕುಮಾರ್ ಆಗಾಗ ದೆಹಲಿಗೆ ಹೋಗಿರು ಬರುತ್ತಲೇ ಇದ್ದಾರೆ. ಇನ್ನು ಅವರ ಬೆಂಬಲಿಗ ಶಾಸಕರು ಸಹ ನಾಯಕತ್ವ ಬದಲಾವಣೆ ಬಗ್ಗೆಯೂ ಧ್ವನಿ ಎತ್ತುತ್ತಲೇ ಇದ್ದಾರೆ. ಆದ್ರೆ, ಇದೀಗ ಸಂಪುಟ ಪುನಾರಚನೆಗೆ ಡಿಕೆ ಶಿವಕುಮಾರ್ ಆಗಲಿ ಅಥವಾ ಅವರ ಬಣದ ಶಾಸಕರಾಗಲಿ ಯಾವುದೇ ಬೆಂಬಲ ಕೊಡುತ್ತಿಲ್ಲ, ಬದಲಿಗೆ ವಿರೋಧ ವ್ಯಕ್ತಪಡಿಸುತ್ತಿದ್ದು ಭಾರೀ ಚರ್ಚೆಗೆ ಗ್ರಾಸವಾಗಿದೆ.

Follow Us 

Follow KannadaFolks channel on WhatsApp

Visit the Kannadafolks.in follow the latest updates

Subscribe and Receive exclusive content and updates on your favourite topics

Subscribe to KannadaFloks YouTube Channel and watch Videos

Subscribe for Free and Support Us 

ನಿಮ್ಮ ಈ - ಮೇಲ್ ಬಳಸಿ 👇ಇದೀಗ ಉಚಿತವಾಗಿ 🆓 ಚಂದಾದಾರರಾಗಿ..!  ನಿಮಗೆ ನಮ್ಮ ಕಥೆಗಳು, ಹಾಡುಗಳು ಮತ್ತು ಮಾಹಿತಿ ಇಷ್ಟವಾದರೆ ನಿಮ್ಮ ಸಮೂಹಕ್ಕೆ ಶೇರ್ ಮಾಡುವುದನ್ನ ಮರೆಯದಿರಿ 
RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments