HomeNewsDubai Drone Attack Flights Cancelled-ದುಬೈ ಡ್ರೋನ್ ದಾಳಿ ರಾಜ್ಯ ವಿಮಾನಗಳು ರದ್ದು

Dubai Drone Attack Flights Cancelled-ದುಬೈ ಡ್ರೋನ್ ದಾಳಿ ರಾಜ್ಯ ವಿಮಾನಗಳು ರದ್ದು

Flights from Karnataka Grounded

Dubai Drone Attack Flights Cancelled-ದುಬೈ ಡ್ರೋನ್ ದಾಳಿ ರಾಜ್ಯ ವಿಮಾನಗಳು ರದ್ದು

ದುಬೈ ವಿಮಾನ ನಿಲ್ದಾಣದ ಬಳಿ ಡ್ರೋನ್ ದಾಳಿಯಿಂದಾಗಿ ಭಾರತದಿಂದ ದುಬೈಗೆ ಹಾರಾಟ ನಡೆಸಬೇಕಿದ್ದ ವಿಮಾನಗಳು ರದ್ದಾಗಿವೆ. ಏರ್ ಇಂಡಿಯಾ, ಏರ್ ಇಂಡಿಯಾ ಎಕ್ಸ್‌ಪ್ರೆಸ್ ಸೇವೆಗಳು ಸ್ಥಗಿತಗೊಂಡಿದ್ದು, ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಿಂದ 24 ಹಾಗೂ ಮಂಗಳೂರಿನಿಂದ ಕೆಲ ವಿಮಾನಗಳ ಹಾರಾಟದಲ್ಲಿ ವ್ಯತ್ಯಯವಾಗಿದೆ. ಪ್ರಯಾಣಿಕರು ಶುಲ್ಕವಿಲ್ಲದೆ ಪ್ರಯಾಣ ಮರುನಿಗದಿಪಡಿಸಲು ಅಥವಾ ಪೂರ್ಣ ಹಣ ಮರಳಿ ಪಡೆಯಲು ಅವಕಾಶ ಕಲ್ಪಿಸಲಾಗಿದೆ.Dubai airport resumes some flights after drone attack exposes risks - The  Economic Times

Read this : Speaker Khader Suspends 3 Officials-ಖಾದರ್ ಸಿಟ್ಟಿಗೆ 3 ಅಧಿಕಾರಿಗಳು ದಂಡಿತರು

 

ಬೆಂಗಳೂರು, ಮಾರ್ಚ್​​ 16: ದುಬೈ ವಿಮಾನ ನಿಲ್ದಾಣದ ಬಳಿ ಡ್ರೋನ್ ದಾಳಿ ಹಿನ್ನೆಲೆ ಭಾರತದಿಂದ ದುಬೈಗೆ ತೆರಳಬೇಕಿದ್ದ ವಿಮಾನಗಳ ಹಾರಾಟ ರದ್ದುಗೊಂಡಿದೆ. ಏರ್‌ ಇಂಡಿಯಾ, ಏರ್ ಇಂಡಿಯಾ ಎಕ್ಸಪ್ರೆಸ್ ವಿಮಾನಗಳ ಹಾರಾಟ ಸ್ಥಗಿತಗೊಂಡಿದ್ದು, ಪ್ರಯಾಣಿಕರು ಯಾವುದೇ ಹೆಚ್ಚುವರಿ ಶುಲ್ಕವಿಲ್ಲದೆ ಭವಿಷ್ಯದ ಬೇರೆ ದಿನಾಂಕಕ್ಕೆ ತಮ್ಮ ಪ್ರಯಾಣವನ್ನು ಮರುನಿಗದಿ ಮಾಡಿಕೊಳ್ಳಲು ಅವಕಾಶ ನೀಡಲಾಗಿದೆ. ಪ್ರಯಾಣ ಬೇಡವೆನ್ನುವವರು ಟಿಕೆಟ್ ರದ್ದುಗೊಳಿಸಿ ಪೂರ್ಣ ಹಣವನ್ನು ಮರಳಿ ಪಡೆಯಬಹುದಾಗಿದೆ. ಇನ್ನು ವಿಮಾನ ರದ್ದಿನಿಂದ‌ ದುಬೈನಲ್ಲಿ ಸಿಲುಕಿರುವ ಪ್ರಯಾಣಿಕರು ಪರದಾಟ ನಡೆಸಿರುವ ಪ್ರಸಂಗವೂ ವರದಿಯಾಗಿದೆ.

ಬೆಂಗಳೂರಲ್ಲಿ 24 ವಿಮಾನಗಳ ಹಾರಾಟ ಕ್ಯಾನ್ಸಲ್

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಬಳಿಯ ಕೆಂಪೇಗೌಡ ಏರ್​ಪೋರ್ಟ್​ನಿಂದ ನಿರ್ಗಮನ ಮತ್ತು ಆಗಮಿಸಬೇಕಿದ್ದ ಒಟ್ಟು 24 ವಿಮಾನಗಳ ಹಾರಾಟ ಕ್ಯಾನ್ಸಲ್ ಆಗಿವೆ. ಕೆಂಪೇಗೌಡ ಏರ್​ಪೋರ್ಟ್​ನಿಂದ ನಿರ್ಗಮಿಸಬೇಕಿದ್ದ 11 ಫ್ಲೈಟ್​ಗಳು ಮತ್ತು ಅರಬ್ ದೇಶಗಳಿಂದ ಕೆಐಎಬಿಗೆ ಆಗಮಿಸಬೇಕಿದ್ದ 13 ಫ್ಲೈಟ್ ರದ್ದಾಗಿವೆ. ಅಬುದಾಬಿ, ರಿಯಾದ್, ಜಿಡ್ಡಾ, ಡಮಾಮ್, ದುಬೈ ಹಾಗೂ ದೋಹಾದಿಂದ ಕೆಐಎಬಿಗೆ ಆಗಮಿಸಿದ್ದ ವಿಮಾನಗಳು ಕ್ಯಾನ್ಸಲ್ ಆಗಿವೆ ಎನ್ನಲಾಗಿದೆ.

ಮಂಗಳೂರು ಏರ್​​ಪೋರ್ಟ್​​ನಿಂದಲೂ ವಿಮಾನ ಹಾರಾಟ ವ್ಯತ್ಯಯ

ದುಬೈ ವಿಮಾನ ನಿಲ್ದಾಣದ ಬಳಿ ದಾಳಿ ಹಿನ್ನೆಲೆ ಮಂಗಳೂರಿನಿಂದ ದುಬೈ, ಡಮಾಮ್ ಮತ್ತು ಅಬುಧಾಬಿಗೆ ವಿಮಾನ ಸೇವೆ ಸ್ಥಗಿತಗೊಂಡಿದೆ. ಏರ್ ಇಂಡಿಯಾ ಎಕ್ಸ್​​ಪ್ರೆಸ್​​ನ ಇಂದು ಮತ್ತು ನಾಳೆಯ ವಿಮಾನ ಹಾರಾಟ ರದ್ದಾಗಿದೆ. ಯುನೈಟೆಡ್‌ ಅರಬ್‌ ಎಮಿರೇಟ್ಸ್ ವಿಮಾನ ನಿಲ್ದಾಣದ ಅಧಿಕಾರಿಗಳ ಸೂಚನೆಯ ಹಿನ್ನೆಲೆ ವಿಮಾನಯಾನ ಹಾರಾಟ ನಡೆಸುತ್ತಿಲ್ಲ ಎಂದು ತಿಳಿದುಬಂದಿದೆ.

Follow Us 

Follow KannadaFolks channel on WhatsApp

Visit the Kannadafolks.in follow the latest updates

Subscribe and Receive exclusive content and updates on your favourite topics

Subscribe to KannadaFloks YouTube Channel and watch Videos

Subscribe for Free and Support Us 

ನಿಮ್ಮ ಈ - ಮೇಲ್ ಬಳಸಿ 👇ಇದೀಗ ಉಚಿತವಾಗಿ 🆓 ಚಂದಾದಾರರಾಗಿ..!  ನಿಮಗೆ ನಮ್ಮ ಕಥೆಗಳು, ಹಾಡುಗಳು ಮತ್ತು ಮಾಹಿತಿ ಇಷ್ಟವಾದರೆ ನಿಮ್ಮ ಸಮೂಹಕ್ಕೆ ಶೇರ್ ಮಾಡುವುದನ್ನ ಮರೆಯದಿರಿ 
RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments