HomeNewsGopalakrishna Naik Attacked-ಕಾಂಗ್ರೆಸ್ ಮುಖಂಡನ ಮೇಲೆ ಚಾಕು ದಾಳಿ

Gopalakrishna Naik Attacked-ಕಾಂಗ್ರೆಸ್ ಮುಖಂಡನ ಮೇಲೆ ಚಾಕು ದಾಳಿ

Gopalakrishna Naik injured in knife attack, miscreants flee

Gopalakrishna Naik Attacked-ಕಾಂಗ್ರೆಸ್ ಮುಖಂಡನ ಮೇಲೆ ಚಾಕು ದಾಳಿ

ಉತ್ತರ ಕನ್ನಡ ಜಿಲ್ಲೆಯ ಅಂಕೋಲದಲ್ಲಿ ಕಾಂಗ್ರೆಸ್ ನಾಯಕ ಗೋಪಾಲಕೃಷ್ಣ ನಾಯ್ಕರನ್ನು ಅಡ್ಡಗಟ್ಟಿದ ದುಷ್ಕರ್ಮಿಗಳು ಚಾಕು ಮತ್ತು ರಾಡ್‌ನಿಂದ ಮನಬಂದಂತೆ ಇರಿದು ಪರಾರಿಯಾಗಿದ್ದಾರೆ. ಗೋವಾ ನೋಂದಣಿಯ ಕಾರಿನಲ್ಲಿ ಬಂದಿದ್ದ ಹಂತಕರಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ರಾಜಕೀಯ ದ್ವೇಷದ ದಾಳಿಯ ಶಂಕೆ ವ್ಯಕ್ತವಾಗಿದೆ. ಘಟನೆಯ ಸಂಪೂರ್ಣ ವಿವರ ಇಲ್ಲಿದೆ.ಎಲ್​ಪಿಜಿ ಸಿಲಿಂಡರ್ ಬುಕಿಂಗ್ ನಿಯಮಗಳಲ್ಲಿ ಯಾವುದೇ ಬದಲಾವಣೆ ಇಲ್ಲ, ಕೇಂದ್ರ ಸ್ಪಷ್ಟನೆ -  Kannada News | No Change in LPG Booking Rules: Centre Dispels Rumors,  Confirms Adequate Cylinder Supply | TV9 Kannada

Read this : Siddaramaiah on Rahu Kaal-ಸಿದ್ದರಾಮಯ್ಯ ರಾಹುಕಾಲದ ಸತ್ಯ ಹೇಳಿದ ಸಿಎಂ

ಕಾರವಾರ, ಮಾರ್ಚ್ 25: ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕಿನ ಕೇಣಿ ಬಳಿ ಕಾಂಗ್ರೆಸ್ (Congress) ಮುಖಂಡ ಗೋಪಾಲಕೃಷ್ಣ ನಾಯ್ಕ ಮೇಲೆ ದುಷ್ಕರ್ಮಿಗಳು ಮಾರಣಾಂತಿಕ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ. ಗೋಪಾಲಕೃಷ್ಣ ನಾಯ್ಕ ಅವರು ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ, ಗೋವಾ ನೋಂದಣಿಯ ಫೋರ್ಡ್ ಕಾರಿನಲ್ಲಿ ಬಂದಿದ್ದ ದುಷ್ಕರ್ಮಿಗಳು ಅವರನ್ನು ಅಡ್ಡಗಟ್ಟಿ ದಾಳಿ ನಡೆಸಿದ್ದಾರೆ. ಮೊದಲು ರಾಡ್‌ನಿಂದ ಹಲ್ಲೆ ನಡೆಸಿದ ಬಳಿಕ, ಚಾಕುವಿನಿಂದ ತಲೆ ಮತ್ತು ಕುತ್ತಿಗೆ ಭಾಗಕ್ಕೆ ಇರಿದು ಗಂಭೀರವಾಗಿ ಗಾಯಗೊಳಿಸಿದ್ದಾರ

ಸದ್ಯ, ಗಂಭೀರ ಗಾಯಗೊಂಡಿರುವ ಗೋಪಾಲಕೃಷ್ಣ ನಾಯ್ಕರನ್ನು ಅಂಕೋಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರಿಗೆ ಚಿಕಿತ್ಸೆ ಮುಂದುವರಿದಿದ್ದು, ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

ದಾಳಿ ನಡೆಸಿದ ಬಳಿಕ ದುಷ್ಕರ್ಮಿಗಳು ಸ್ಥಳದಿಂದ ಪರಾರಿಯಾಗಿದ್ದು, ಅವರ ಪತ್ತೆಗಾಗಿ ಅಂಕೋಲ ಠಾಣೆ ಪೊಲೀಸರು ಶೋಧ ಕಾರ್ಯ ಆರಂಭಿಸಿದ್ದಾರೆ. ದಾಳಿಯ ಹಿಂದಿನ ಕಾರಣಗಳ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಈ ಘಟನೆ ರಾಜಕೀಯ ವಲಯದಲ್ಲೂ ಆತಂಕ ಉಂಟುಮಾಡಿದೆ.

ಉತ್ತರ ಕನ್ನಡ ಜಿಲ್ಲೆಯಲ್ಲೂ ಗ್ಯಾಸ್ ಸಿಲಿಂಡರ್ ಅಭಾವ: ಜನರ ಪರದಾಟ

ಉತ್ತರ ಕನ್ನಡ ಜಿಲ್ಲೆಯಲ್ಲಿಯೂ ಕಮರ್ಷಿಯಲ್ ಜತೆಗೆ ಗೃಹ ಬಳಕೆಯ ಎಲ್​ಪಿಜಿ ಸಿಲಿಂಡರ್ ಭಾವ ತಲೆದೋರಿದೆ. ವಿತರಣೆಯಲ್ಲಿ ಭಾರಿ ಕಡಿತ ಮಾಡಿರುವ ಹಿನ್ನಲೆ ಜಿಲ್ಲೆಯ ಹೊಟೇಲ್ , ರೆಸ್ಟೋರೆಂಟ್ ಹಾಗೂ ದೊಡ್ಡ ಪ್ರವಾಸಿತಾಣಗಳಿಗೂ ಭಾರಿ ಪೆಟ್ಟು ಬಿದ್ದಿದೆ. ಜಿಲ್ಲೆಯಲ್ಲಿ ಡೊಮೆಸ್ಟಿಕ್ ಸಿಲಿಂಡರ್ 4,23,000 ಕನೆಕ್ಷನ್ ಇದ್ದು, ಕಮರ್ಷಿಯಲ್ ಸಿಲಿಂಡರ್ 11,000 ಕನೆಕ್ಷನ್ ಇದೆ. ಪ್ರತಿ ದಿನ 9000 ಡೊಮೆಸ್ಟಿಕ್ ಸಿಲಿಂಡರ್ ವಿತರಿಸಲಾಗುತ್ತಿದೆ. ಇನ್ನು ಕೇಂದ್ರ ಸರ್ಕಾರದ ಆದೇಶದ ಪ್ರಕಾರ ಪ್ರತಿದಿನ 20 ಪ್ರತಿಶತ, ಅಂದರೆ 700 ಕಮರ್ಶಿಯಲ್ ಸಿಲಿಂಡರ್ ಮಾತ್ರ ಕೊಡಲಾಗುತ್ತಿದೆ. ಸದ್ಯ ಜಿಲ್ಲೆಯಲ್ಲಿ ಕಮರ್ಶಿಯಲ್ ಸಿಲಿಂಡರ್ ಕೊರತೆ ಹೆಚ್ಚಾಗಿ ಕಂಡು ಬರುತ್ತಿರುವ ಹಿನ್ನೆಲೆ, ಕೆಲವು ಹೊಟೇಲ್​​ಗಳಲ್ಲಿ ಡೊಮೆಸ್ಟಿಕ್ ಸಿಲಿಂಡರ್ ಬಳಸುತ್ತಿರುವುದನ್ನು ಅರಿತು ಜಿಲ್ಲಾಧಿಕಾರಿ ಸೇರಿದಂತೆ ವಿವಿಧ ಅಧಿಕಾರಿಗಳ ತಂಡ 300 ಕ್ಕೂ ಹೆಚ್ಚು ಕಡೆ ದಾಳಿ ಮಾಡಿದ್ದು, 14 ಪ್ರಕರಣ ದಾಖಲಾಗಿದೆ.

Follow Us 

Follow KannadaFolks channel on WhatsApp

Visit the Kannadafolks.in follow the latest updates

Subscribe and Receive exclusive content and updates on your favourite topics

Subscribe to KannadaFloks YouTube Channel and watch Videos

Subscribe for Free and Support Us 

ನಿಮ್ಮ ಈ - ಮೇಲ್ ಬಳಸಿ 👇ಇದೀಗ ಉಚಿತವಾಗಿ 🆓 ಚಂದಾದಾರರಾಗಿ..!  ನಿಮಗೆ ನಮ್ಮ ಕಥೆಗಳು, ಹಾಡುಗಳು ಮತ್ತು ಮಾಹಿತಿ ಇಷ್ಟವಾದರೆ ನಿಮ್ಮ ಸಮೂಹಕ್ಕೆ ಶೇರ್ ಮಾಡುವುದನ್ನ ಮರೆಯದಿರಿ 
RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments