Welcome to Kannada Folks   Click to listen highlighted text! Welcome to Kannada Folks
HomeNewsGovernment decides to give rice instead of annabhagya scheme money from now...

Government decides to give rice instead of annabhagya scheme money from now on

Government decides to give rice instead of annabhagya scheme money from now on

Spread the love

Government decides to give rice instead of annabhagya scheme money from now on

2023ರ ವಿಧಾನಸಭಾ ಚುನಾವಣೆ ಸಮಯದಲ್ಲಿ ಕಾಂಗ್ರೆಸ್‌ ಘೋಷಿಸಿದ್ದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಯಾದ ಅನ್ನಭಾಗ್ಯ  ಫಲಾನುಭವಿಗಳಿಗೆ ನೀಡುತ್ತಿದ್ದ ಹಣದ ಬದಲಿಗೆ ಅಕ್ಕಿಯನ್ನೇ ಕೊಡಲು ಸರ್ಕಾರ ತೀರ್ಮಾನ ಮಾಡಿದೆ ಎಂದು ಹೇಳಲಾಗುತ್ತಿದೆ. ಅನ್ಯಭಾಗ್ಯ ಯೋಜನೆ ಅಡಿ ಬಿಪಿಎಲ್‌ ಕಾರ್ಡ್‌ ಫಲಾನುಭವಿಗಳಿಗೆ 10 ಕೆಜಿ ಅಕ್ಕಿ ಕೊಡುವುದಾಗಿ ಕಾಂಗ್ರೆಸ್‌ ಚುನಾವಣಾ ಸಂದರ್ಭದಲ್ಲಿ ಘೋಷಣೆ ಮಾಡಿತ್ತು. ನಂತರದ ದಿನಗಳಲ್ಲಿ ಅಗತ್ಯ ಪ್ರಮಾಣದಲ್ಲಿ ಅಕ್ಕಿ ಲಭ್ಯವಾಗದ ಕಾರಣ ಫಲಾನುಭವಿಗಳಿಗೆ 5 ಕೆಜಿ ಅಕ್ಕಿ ಕೊಟ್ಟು, ಉಳಿದ 5 ಕೆಜಿ ಅಕ್ಕಿ ಬದಲಿಗೆ 170 ರೂ. ನೀಡಲಾಗುತ್ತಿತ್ತು

Read this – Maha Shivratri Legends and Rituals ಮಹಾ ಶಿವರಾತ್ರಿ ದಂತಕಥೆಗಳು ಮತ್ತು ಆಚರಣೆಗಳು

ತಿಂಗಳಿನಿಂದಲೇ ಅಕ್ಕಿ ವಿತರಣೆಗೆ ಸಿದ್ಧತೆ:

ಇದೀಗ ಕೇಂದ್ರ ಸರ್ಕಾರದಿಂದ ಅಕ್ಕಿ ಲಭ್ಯವಿರುವ ಹಿನ್ನೆಲೆ ಹೆಚ್ಚುವರಿಯಾಗಿ 5 ಕೆಜಿ ಅಕ್ಕಿಯನ್ನು ಒಎಂಎಸ್‌ಎಸ್‌ ಯೋಜನೆ ಅಡಿಯಲ್ಲಿ ಖರೀದಿಸಿ ಈ ತಿಂಗಳಿನಿಂದಲೇ ಅಕ್ಕಿ ವಿತರಿಸಲು ತೀರ್ಮಾನಿಸಿದೆ. ಈ ಸಂಬಂಧ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವ ಕೆ.ಹೆಚ್‌ ಮುನಿಯಪ್ಪ ಅವರು ಪ್ರಕಟಣೆ ಹೊರಡಿಸಿದ್ದಾರೆ.

Read this – Talks with US to prevent atrocities on Indians: Jaishankar

ಅನ್ನ ಭಾಗ್ಯ ಯೋಜನೆ ಆರಂಭದಲ್ಲಿ ಕೇಂದ್ರ ಸರ್ಕಾರದ 5 ಕೆಜಿ ಅಕ್ಕಿ ಜೊತೆ ರಾಜ್ಯ ಸರ್ಕಾರ 5 ಕೆಜಿ ಅಕ್ಕಿ ನೀಡುವುದಾಗಿ ಘೋಷಿಸಿತ್ತು. ಆದರೆ ಕೇಂದ್ರ ಸರ್ಕಾರದಿಂದ ಸರಿಯಾಗಿ ಸ್ಪಂದನೆ ಸಿಗದೇ ಇದ್ದಾಗ ರಾಜ್ಯ ಸರ್ಕಾರ ಅನ್ನಭಾಗ್ಯದ ಹಣ ನೀಡಲಾಗುವುದು ಎಂದು ತಿಳಿಸಿತ್ತು. ಅದರಂತೆ ಸರ್ಕಾರ ಒಂದು ಕೆಜಿ ಅಕ್ಕಿಗೆ 34 ರೂ. ಪಾವತಿ ಮಾಡಬೇಕಿತ್ತು. ಒಂದು ಪಡಿತರ ಕುಟುಂಬದಲ್ಲಿ ಐವರು ಸದಸ್ಯರಿದ್ದರೆ 20 ಕೆಜಿಗೆ ಅಕ್ಕಿಗೆ ಪ್ರತಿ ತಿಂಗಳು 850 ರೂ. ಜಮೆ ಮಾಡಬೇಕಿತ್ತು. ಆದ್ರೆ ಕಳೆದ 2 ತಿಂಗಳಿನಿಂದಲೂ ಯಾವುದೇ ಹಣ ಜಮೆಯಾದ ಹಿನ್ನೆಲೆ ಈ ಬಗ್ಗೆ ಫಲಾನುಭವಿಗಳು ಅಧಿಕಾರಿಗಳನ್ನು ಪ್ರಶ್ನಿಸಿದ್ದರು. ಅಲ್ಲದೇ ಸರ್ಕಾರದ ವಿರುದ್ಧ ಆಕ್ರೋಶವೂ ಹೊರಹಾಕಿದ್ದರು. ಆದರೀಗ ಹಣದ ಬದಲಿಗೆ ಅಕ್ಕಿಯನ್ನೇ ಕೊಡುವುದಕ್ಕೆ ಸರ್ಕಾರ ತೀರ್ಮಾನಿಸಿದೆ ಎಂದು ಮೂಲಗಳು ತಿಳಿಸಿವೆ.

 

Subscribe for Free and Support Us 

ನಿಮ್ಮ ಈ - ಮೇಲ್ ಬಳಸಿ 👇ಇದೀಗ ಉಚಿತವಾಗಿ 🆓 ಚಂದಾದಾರರಾಗಿ..!  ನಿಮಗೆ ನಮ್ಮ ಕಥೆಗಳು, ಹಾಡುಗಳು ಮತ್ತು ಮಾಹಿತಿ ಇಷ್ಟವಾದರೆ ನಿಮ್ಮ ಸಮೂಹಕ್ಕೆ ಶೇರ್ ಮಾಡುವುದನ್ನ ಮರೆಯದಿರಿ 
RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

×
Click to listen highlighted text!