Welcome to Kannada Folks   Click to listen highlighted text! Welcome to Kannada Folks
HomeNewsGruhalakshmi money will be released from the taluk panchayat - ತಾಲೂಕು ಪಂಚಾಯಿತಿಯಿಂದ...

Gruhalakshmi money will be released from the taluk panchayat – ತಾಲೂಕು ಪಂಚಾಯಿತಿಯಿಂದ ಬಿಡುಗಡೆಯಾಗಲಿದೆ ಗೃಹಲಕ್ಷ್ಮಿ ಹಣ

Gruhalakshmi money will be released from the taluk panchayat - ತಾಲೂಕು ಪಂಚಾಯಿತಿಯಿಂದ ಬಿಡುಗಡೆಯಾಗಲಿದೆ ಗೃಹಲಕ್ಷ್ಮಿ ಹಣ

Spread the love

Gruhalakshmi money will be released from the taluk panchayat – ತಾಲೂಕು ಪಂಚಾಯಿತಿಯಿಂದ ಬಿಡುಗಡೆಯಾಗಲಿದೆ ಗೃಹಲಕ್ಷ್ಮಿ ಹಣ

ಬೆಂಗಳೂರು: ಚುನಾವಣೆ ವೇಳೆ ಕಾಂಗ್ರೆಸ್‌ ಪ್ರಕಟಿಸಿದ ಮಹತ್ವಾಕಾಂಕ್ಷಿ ಗೃಹಲಕ್ಷ್ಮಿ ಯೋಜನೆ  ಕಾರ್ಯವಿಧಾನದಲ್ಲೇ ಮಹತ್ವದ ಬದಲಾವಣೆ ಮಾಡಲು ರಾಜ್ಯ ಸರ್ಕಾರ  ಮುಂದಾಗಿದೆ.ಹೌದು, ಇಲ್ಲಿಯವರೆಗೆ ರಾಜ್ಯ ಕಾರ್ಯದರ್ಶಿಯಿಂದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ನಿರ್ದೇಶಕರ ಮೂಲಕ ಹಣ ಪಾವತಿಯಾಗುತಿತ್ತು. ಆದರೆ ಇನ್ನು ಮುಂದೆ ರಾಜ್ಯ ಕಾರ್ಯದರ್ಶಿಯಿಂದ ತಾಲೂಕು ಪಂಚಾಯಿತಿಗೆ ಹಣ ಪಾವತಿ ಆಗಲಿದೆ. ತಾಲ್ಲೂಕು ಪಂಚಾಯಿತಿಯಿಂದ ನೇರವಾಗಿ ಫಲಾನುಭವಿಗಳಿಗೆ ಹಣ ತಲುಪಲಿದೆ.Gruha Lakshmi: ಮಹಿಳಾಮಣಿಗಳಿಗೆ ಗುಡ್‌ ನ್ಯೂಸ್‌! 2 ತಿಂಗಳ ಹಣ ಈ ಡೇಟ್‌'ಗೆ ಬರೋದು  ಪಕ್ಕಾ! - Ain Live News

Read this – PM modi takes holy dip in prayagraj sangam ಪ್ರಯಾಗ್ರಾಜರ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿದ ಪ್ರಧಾನಿ ಮೋದಿ

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ನಿರ್ದೇಶಕರಿಗೆ ಇಲಾಖೆಯದ್ದೇ ಬಹಳಷ್ಟು ಜವಾಬ್ದಾರಿಯಿದೆ. ಈಗ ಗೃಹಲಕ್ಷ್ಮಿ ನಿಭಾಯಿಸುವುದು ಮತ್ತಷ್ಟು ಹೊರೆಯಾಗುತ್ತಿದೆ. ಈ ಹೊರೆ ತಪ್ಪಿಸಲು ಬದಲಾವಣೆ ಮಾಡಲು ಇಲಾಖೆ ಮುಂದಾಗಿದೆ ಎನ್ನಲಾಗುತ್ತಿದೆ.

ಈಗಾಗಲೇ ರಾಜ್ಯ ಸರ್ಕಾರ ಮೂರು ತಿಂಗಳಿನಿಂದ ಗೃಹಲಕ್ಷ್ಮೀ ಯೋಜನೆಯ ಹಣವನ್ನು ಪಾವತಿ ಮಾಡಿಲ್ಲ. ಈಗ ಹಣ ಪಾವತಿಯ ಕಾರ್ಯವಿಧಾನದಲ್ಲೇ ಬದಲಾವಣೆ ಮಾಡಲು ಮುಂದಾಗಿದೆ. ಈ ವಿಚಾರದ ಬಗ್ಗೆ ಈಗ ಇಲಾಖೆ ಹಂತದಲ್ಲಿ ಚರ್ಚೆ ನಡೆಯುತ್ತಿದೆ. ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಆರೋಗ್ಯ ಸ್ಥಿತಿ ಸುಧಾರಣೆಯಾದ ಬಳಿಕ ಅಧಿಕೃತ ಆದೇಶ ಪ್ರಕಟವಾಗುವ ಸಾಧ್ಯತೆಯಿದೆ.Karnataka Gruha Lakshmi Scheme List 2024 Check, Village Wise PDF Download -  सरकारी योजना

Read this – Renukaswamys father clarified about the rumour ವದಂತಿ ಬಗ್ಗೆ ರೇಣುಕಾಸ್ವಾಮಿ ತಂದೆ ಸ್ಪಷ್ಟನೆ

ರಾಜ್ಯ ಸರ್ಕಾರದಲ್ಲಿ ಅಭಿವೃದ್ಧಿ ಕೆಲಸಗಳಿಗೆ ಹಣದ ಕೊರತೆಯಾಗಿದೆ ಎಂದು ಶಾಸಕರೇ ಮಾತನಾಡಿಕೊಳ್ಳುತ್ತಿದ್ದಾರೆ. ಈಗ ಗೃಹಲಕ್ಷ್ಮಿ ಕಂತು ಪಾವತಿಗೂ ಹಣದ ಕೊರತೆ ಉಂಟಾಗಿದೆ. ಹೀಗಾಗಿ 3 ಕಂತು ಪಾವತಿ ಮಾಡಿಲ್ಲ ಎಂದು ಎಂದು ಮಹಿಳೆಯರು ಮಾತನಾಡಿಕೊಳ್ಳುತ್ತಿದ್ದಾರೆ.

Read this – Modi, Amit Shah take 100 births but will not go to heaven: Mallikarjuna Kharge said

ತಾಲೂಕು ಪಂಚಾಯಿತಿಯಿಂದ ಹಣ ಬಿಡುಗಡೆಯಾದರೆ ಇದು ಅಕ್ರಮಕ್ಕೆ ಕಾರಣವಾಗಬಹುದು ಎಂಬ ಮಾತುಗಳು ಕೇಳಿ ಬಂದಿದೆ. ಪ್ರಧಾನ ಮಂತ್ರಿ ಕಿಸಾನ್‌ ಸಮ್ಮಾನ್‌ ಹಣ ಪ್ರತಿ ತಿಂಗಳು ರೈತರ ಖಾತೆಗೆ ಜಮೆ ಆಗುತ್ತಿದೆ. ಇದು ದೇಶವ್ಯಾಪಿ ನಡೆಯುತ್ತಿರುವಾಗ ಗೃಹಲಕ್ಷ್ಮಿ ಹಣ ಪಾವತಿಗೆ ಕಷ್ಟ ಯಾಕೆ ಎಂಬ ಪ್ರಶ್ನೆ ಬಂದಿದೆ.

Subscribe for Free and Support Us 

ನಿಮ್ಮ ಈ - ಮೇಲ್ ಬಳಸಿ 👇ಇದೀಗ ಉಚಿತವಾಗಿ 🆓 ಚಂದಾದಾರರಾಗಿ..!  ನಿಮಗೆ ನಮ್ಮ ಕಥೆಗಳು, ಹಾಡುಗಳು ಮತ್ತು ಮಾಹಿತಿ ಇಷ್ಟವಾದರೆ ನಿಮ್ಮ ಸಮೂಹಕ್ಕೆ ಶೇರ್ ಮಾಡುವುದನ್ನ ಮರೆಯದಿರಿ 
RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

×
Click to listen highlighted text!