Harry Brook set – ಬರೋಬ್ಬರಿ 5.65 ಕೋಟಿ ರೂ.ಗೆ ಸನ್ರೈಸರ್ಸ್ ತಂಡಕ್ಕೆ ಹ್ಯಾರಿ ಬ್ರೂಕ್ ಎಂಟ್ರಿ
ದಿ ಹಂಡ್ರೆಡ್ ಲೀಗ್ ಶುರುವಾಗಿದ್ದು 2021 ರಲ್ಲಿ. ಈ ಟೂರ್ನಿಯಲ್ಲಿ 100 ಎಸೆತಗಳ ಪಂದ್ಯಗಳನ್ನು ಆಡಲಾಗುತ್ತದೆ. ಅಂದರೆ ಟಿ20 ಬದಲಿಗೆ ಇಲ್ಲಿ ಪ್ರತಿ ಇನಿಂಗ್ಸ್ಗೆ 100 ಎಸೆತಗಳನ್ನು ಎಸೆಯಲಾಗುತ್ತದೆ. ಹಾಗೆಯೇ ಒಂದು ಓವರ್ನಲ್ಲಿ 5 ಎಸೆತಗಳು ಇರುತ್ತವೆ. ಇಲ್ಲಿ ಗಮನಿಸಬೇಕಾದ ಮುಖ್ಯ ಅಂದರೆ ಒಬ್ಬ ಬೌಲರ್ ಸತತ 2 ಓವರ್ ಅಥವಾ 10 ಎಸೆತಗಳನ್ನು ಎಸೆಯಬಹುದು. ಹೀಗೆ ಹಲವು ರೀತಿಯಲ್ಲಿ ವಿಭಿನ್ನವಾಗಿ ಟೂರ್ನಿಗೆ ಇದೀಗ ಸನ್ರೈಸರ್ಸ್ ಹೈದರಾಬಾದ್ ಫ್ರಾಂಚೈಸಿ ಕಾಲಿಟ್ಟಿದೆ.
Read this – List of Top Kannada Youtubers in India 2025 ಕನ್ನಡ ಟಾಪ್ ಯೂಟ್ಯೂಬರ್ಸ್
ಇಂಡಿಯನ್ ಪ್ರೀಮಿಯರ್ ಲೀಗ್ ಮಿನಿ ಹರಾಜಿಗೂ ಮುನ್ನ ಸನ್ರೈಸರ್ಸ್ ಹೈದರಾಬಾದ್ ಫ್ರಾಂಚೈಸಿ ಬಿಗ್ ಡೀಲ್ ಕುದುರಿಸಿಕೊಂಡಿದೆ. ಆದರೆ ಅದು ಐಪಿಎಲ್ನಲ್ಲಿ ಅಲ್ಲ. ಬದಲಾಗಿ ಇಂಗ್ಲೆಂಡ್ ಕ್ರಿಕೆಟ್ ಬೋರ್ಡ್ ಆಯೋಜಿಸುವ ದಿ ಹಂಡ್ರೆಡ್ ಲೀಗ್ನಲ್ಲಿ ಎಂಬುದು ವಿಶೇಷ.ಸನ್ರೈಸರ್ಸ್ ಹೈದರಾಬಾದ್ ಫ್ರಾಂಚೈಸಿಯು ಇಂಗ್ಲೆಂಡ್ನ ದಿ ಹಂಡ್ರೆಡ್ ಲೀಗ್ಗೆ ಕಾಲಿಟ್ಟಿದೆ. ನಾರ್ದರ್ನ್ ಸೂಪರ್ಚಾರ್ಜರ್ಸ್ ಫ್ರಾಂಚೈಸಿಯನ್ನು ಖರೀದಿಸಿರುವ ಕಾವ್ಯ ಮಾರನ್ ಅವರು ತಮ್ಮ ಹೊಸ ತಂಡಕ್ಕೆ ಸನ್ರೈಸರ್ಸ್ ಲೀಡ್ಸ್ ಎಂದು ಹೆಸರಿಟ್ಟಿದ್ದಾರೆ.
ಇದೀಗ ಸನ್ರೈಸರ್ಸ್ ಲೀಡ್ಸ್ ತಂಡವು ಇಂಗ್ಲೆಂಡ್ನ ಸ್ಟಾರ್ ಆಟಗಾರ ಹ್ಯಾರಿ ಬ್ರೂಕ್ ಅವರನ್ನು ರಿಟೈನ್ ಮಾಡಿಕೊಂಡಿದೆ. ಅಂದರೆ ಮುಂಬರುವ ಟೂರ್ನಿಗೂ ಮುನ್ನ ಬ್ರೂಕ್ ಅವರನ್ನು ತಂಡದಲ್ಲೇ ಉಳಿಸಿಕೊಳ್ಳಲು ನಿರ್ಧರಿಸಿದೆ. ಅದು ಕೂಡ ಬರೋಬ್ಬರಿ 5.65 ಕೋಟಿ ರೂ.ಗೆ ಎಂಬುದು ವಿಶೇಷ.
Read this – Who is Pratika Rawal Rawal began her cricketing journey at the tender age of 10
ಹ್ಯಾರಿ ಬ್ರೂಕ್ ಕಳೆದ ಸೀಸನ್ನಲ್ಲಿ ನಾರ್ದರ್ನ್ ಸೂಪರ್ಚಾರ್ಜರ್ಸ್ ಪರ ಕಣಕ್ಕಿಳಿದಿದ್ದರು. ಈ ವೇಳೆ ಅವರು ತಂಡದ ನಾಯಕನಾಗಿಯೂ ಕಾಣಿಸಿಕೊಂಡಿದ್ದರು. ಇದೀಗ ಫ್ರಾಂಚೈಸಿ ಬದಲಾದರೂ ಬ್ರೂಕ್ ಅವರನ್ನು £470,000 (ಸುಮಾರು 5.65 ಕೋಟಿ ರೂ.) ಗೆ ತಂಡದಲ್ಲೇ ಉಳಿಸಿಕೊಳ್ಳಲು ಸನ್ರೈಸರ್ಸ್ ಲೀಡ್ಸ್ ನಿರ್ಧರಿಸಿದೆ. ಅದರಂತೆ ಮುಂಬರುವ ಸೀಸನ್ನಲ್ಲಿ ಹ್ಯಾರಿ ಬ್ರೂಕ್ ಸನ್ರೈಸರ್ಸ್ ಲೀಡ್ಸ್ ಪರ ಕಣಕ್ಕಿಳಿಯಲಿದ್ದಾರೆ.
ಕುತೂಹಲಕಾರಿ ವಿಷಯ ಎಂದರೆ ಈ ಬಾರಿಯ ಐಪಿಎಲ್ನಲ್ಲಿ ಹ್ಯಾರಿ ಬ್ರೂಕ್ ಕಾಣಿಸಿಕೊಳ್ಳುವುದಿಲ್ಲ ಎಂಬುದು. ಐಪಿಎಲ್ 2025 ರಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಆಯ್ಕೆಯಾಗಿದ್ದ ಬ್ರೂಕ್ ವಿನಾಕಾರಣ ಇಂಡಿಯನ್ ಪ್ರೀಮಿಯರ್ ಲೀಗ್ನಿಂದ ಹೊರಗುಳಿದಿದ್ದರು. ಐಪಿಎಲ್ನ ಹೊಸ ನಿಯಮದ ಪ್ರಕಾರ, ಹರಾಜಿನಲ್ಲಿ ಆಯ್ಕೆಯಾದ ಬಳಿಕ ಟೂರ್ನಿಯಿಂದ ಹೊರಗುಳಿಯುವಂತಿಲ್ಲ. ಹೀಗೆ ಹೊರಗುಳಿದರೆ ಅವರ ಮೇಲೆ 2 ವರ್ಷಗಳ ನಿಷೇಧ ಹೇರಲಾಗುತ್ತದೆ. ಅದರಂತೆ ಇದೀಗ ಹ್ಯಾರಿ ಬ್ರೂಕ್ ಮೇಲೆ 2 ವರ್ಷಗಳ ನಿಷೇಧ ಹೇರಲಾಗಿದೆ.
Support Us 


