HD kumaraswamy meets president droupadi murmu – ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿಯಾದ ಹೆಚ್‌ಡಿಕೆ
ನವದೆಹಲಿ: ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಗುರುವಾರ ರಾಷ್ಟ್ರಪತಿ ಭವನಕ್ಕೆ ತೆರಳಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಗೌರವಪೂರ್ವಕವಾಗಿ ಭೇಟಿಯಾದರು.ಭೇಟಿ ವೇಳೆ ತಮ್ಮ ಎರಡೂ ಇಲಾಖೆಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಮಾರ್ಗದರ್ಶನದಲ್ಲಿ ಕೈಗೊಳ್ಳಲಾಗಿರುವ ಅಭಿವೃದ್ಧಿಪರ ಕಾರ್ಯಕ್ರಮಗಳ ಬಗ್ಗೆ ಸಚಿವರು ರಾಷ್ಟ್ರಪತಿಗಳಿಗೆ ವಿವರಣೆ ನೀಡಿದರು.
Read this – Sarigama VG cremated at Chamarajpet crematorium ಚಿತಾಗಾರದಲ್ಲಿ ನೆರವೇರಿದ ಸರಿಗಮ ವಿಜಿ ಅಂತ್ಯಕ್ರಿಯೆ
ಪ್ರಧಾನಿಗಳ ಆತ್ಮನಿರ್ಭರ್ ಭಾರತ್, ಮೇಕ್ ಇನ್ ಇಂಡಿಯಾ ಪರಿಕಲ್ಪನೆಗಳ ಅಡಿಯಲ್ಲಿ ವಿಕಸಿತ ಭಾರತ ಗುರಿಯನ್ನು ಮುಟ್ಟಲು ಕೈಗೊಳ್ಳಲಾಗಿರುವ ಸರ್ವ ಕ್ರಮಗಳ ಬಗ್ಗೆಯೂ ಸಚಿವರು ರಾಷ್ಟ್ರಪತಿಗಳಿಗೆ ಮಾಹಿತಿ ನೀಡಿದರು.
ರಾಷ್ಟ್ರದಲ್ಲಿ 2030ರ ವೇಳೆಗೆ ವಾರ್ಷಿಕ 300 ದಶಲಕ್ಷ ಟನ್ ಉತ್ಪಾದನೆ ಮಾಡುವ ಗುರಿ ಹೊಂದಲಾಗಿದ್ದು, ಆ ಹಿನ್ನಲೆಯಲ್ಲಿ ವಿಶಾಖಪಟ್ಟಣದ ರಾಷ್ಟ್ರೀಯ ಉಕ್ಕು ಕಾರ್ಖಾನೆಯ ಪುನಶ್ಚೇತನಕ್ಕೆ 11,400 ಕೋಟಿ ರೂ.ಗಳ ಪ್ಯಾಕೇಜ್ ಘೋಷಣೆ ಮಾಡಲಾಗಿದೆ. ಅಲ್ಲದೆ, ಬೋಕಾರೋ ಉಕ್ಕು ಸ್ಥಾವರದಲ್ಲಿ ಕೈಗೊಳ್ಳಲಾಗುತ್ತಿರುವ 20,000 ಕೋಟಿ ರೂ.ಗಳ ವಿಸ್ತರಣಾ ಯೋಜನೆಯ ಬಗ್ಗೆ ಕೂಡಾ ಸಚಿವರು ವಿವರಣೆ ನೀಡಿದರು.
Read this – Renukaswamys father clarified about the rumour ವದಂತಿ ಬಗ್ಗೆ ರೇಣುಕಾಸ್ವಾಮಿ ತಂದೆ ಸ್ಪಷ್ಟನೆ
ಬೃಹತ್ ಕೈಗಾರಿಕೆ ವಲಯದಲ್ಲಿ ತರಲಾಗಿರುವ ಸುಧಾರಣಾ ಕ್ರಮಗಳು ಹಾಗೂ ಪಿಎಂ ಇ ಡ್ರೈವ್ ಬಗ್ಗೆಯೂ ಹೆಚ್‌ಡಿಕೆ ರಾಷ್ಟ್ರಪತಿಗಳಿಗೆ ವಿವರಣೆ ಕೊಟ್ಟರು.