HomeNewsDK Shivakumar-ಮತ್ತೆ ಭುಗಿಲೆದ್ದ ನಾಯಕತ್ವ ಬದಲಾವಣೆ ಚರ್ಚೆ

DK Shivakumar-ಮತ್ತೆ ಭುಗಿಲೆದ್ದ ನಾಯಕತ್ವ ಬದಲಾವಣೆ ಚರ್ಚೆ

DK Shivakumar-ಮತ್ತೆ ಭುಗಿಲೆದ್ದ ನಾಯಕತ್ವ ಬದಲಾವಣೆ ಚರ್ಚೆ

DK Shivakumar-ಮತ್ತೆ ಭುಗಿಲೆದ್ದ ನಾಯಕತ್ವ ಬದಲಾವಣೆ ಚರ್ಚೆ

ರಾಜ್ಯದಲ್ಲಿ ಮತ್ತೆ ನಾಯಕತ್ವ ಬದಲಾವಣೆ ಚರ್ಚೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಸಿದ್ದರಾಮಯ್ಯನವರೇ ಐದು ವರ್ಷ ಮುಖ್ಯಮಂತ್ರಿಯಾಗಿ ಇರುತ್ತಾರೆ. ಈ ಬಗ್ಗೆ ಹೈಕಮಾಂಡ್ ಸ್ಪಷ್ಟವಾಗಿ ಸಿಗ್ನಲ್ ಕೊಟ್ಟಿದೆ ಎಂದು ಯತೀಂದ್ರ ಸಿದ್ದರಾಮಯ್ಯ ಅವರು ಶುಕ್ರವಾರ ಹೇಳಿದ್ದಾರೆ.

ಬಳಿಕ ಯತೀಂದ್ರ ಹೇಳಿಕೆಗೆ ಪ್ರತಿಕ್ರಿಯಿಸಿದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು, ಯತೀಂದ್ರ ಅವರೇ ಈಗ ನಮ್ಮ ಹೈಕಮಾಂಡ್. ಅವರು ಹೇಳಿದ ಮೇಲೆ ಮುಗಿಯಿತು ಎಂದು ತಿರುಗೇಟು ನೀಡಿದರು.

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಚರ್ಚೆ ನಡುವೆ ಡಿ.ಕೆ ಶಿವಕುಮಾರ್ ದೆಹಲಿಗೆ ಆಗಮನ! ವರಿಷ್ಠರನ್ನು ಭೇಟಿಯಾಗ್ತಾರಾ?

ಇಂದು ಮಂಗಳೂರು ವಿಮಾನ ನಿಲ್ದಾಣದಲ್ಲಿ ವರದಿಗಾರರೊಂದಿಗೆ ಮಾತನಾಡಿದ ಡಿಕೆಶಿ, ಯತೀಂದ್ರರ ಈ‌ ಹೇಳಿಕೆಯನ್ನು ಗೌರವದಿಂದ ಸ್ವೀಕರಿಸುತ್ತೇನೆ. ಅವರೇ ನಮ್ಮ ಹೈಕಮಾಂಡ್ ಅಂತ ಒಪ್ಪಿಕೊಳ್ಳೋಣ. ಯತೀಂದ್ರ ಅಥವಾ ಶಿವಗಂಗಾ ಹೇಳಿಕೆ ಬಗ್ಗೆ ಹೆಚ್ಚಿಗೆ ಮಾತನಾಡುವುದಿಲ್ಲ. ಈ ಬಗ್ಗೆ ಏನು ಪ್ರತಿಕ್ರಿಯಿಸಬೇಕೋ ಅದನ್ನು ದೆಹಲಿಯಲ್ಲಿ ಪ್ರತಿಕ್ರಿಯಿಸುತ್ತೇನೆ ಎಂದರು.

Read This: ಮುಂದಿನವಾರ ರಾಜಧಾನಿಯಲ್ಲಿ ಇರಲಿದೆ ದಾಖಲೆಯ ಚಳಿ- Kannada News | Bangalore Braces for Record Cold

ಇನ್ನು ಪುತ್ತೂರು ಕಾಂಗ್ರೆಸ್ ಕಚೇರಿ ಶಿಲಾನ್ಯಾಸದಲ್ಲಿ ಮುಸ್ಲಿಂ ಮುಖಂಡರ ಹೆಸರು ಕೈಬಿಟ್ಟ ವಿಚಾರವಾಗಿ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಡಿಸಿಎಂ, ಕಾಂಗ್ರೆಸ್ ಜಾತಿ ಮೇಲಲ್ಲ ನೀತಿ ಮೇಲೆ ರಾಜಕಾರಣ ಮಾಡುತ್ತದೆ. ನಮಗೆ ಎಲ್ಲಾ ಜಾತಿ, ಧರ್ಮಗಳೂ ಬೇಕು. ರಾಜಕಾರಣದಲ್ಲಿ ಧರ್ಮ ಬೇಕು, ಧರ್ಮದಲ್ಲಿ ರಾಜಕಾರಣ ಇರಬಾರದು. ಅಸೂಯೆ ಇರುವವರು ಈ ರೀತಿ ಮಾತನಾಡುತ್ತಾರೆ ಎಂದರು.

Read This: ಮುಂದಿನವಾರ ರಾಜಧಾನಿಯಲ್ಲಿ ಇರಲಿದೆ ದಾಖಲೆಯ ಚಳಿ- Kannada News | Bangalore Braces for Record Cold

 

Follow Us 

Follow KannadaFolks channel on WhatsApp

Visit the Kannadafolks.in follow the latest updates

Subscribe and Receive exclusive content and updates on your favourite topics

Subscribe to KannadaFloks YouTube Channel and watch Videos

 

Subscribe for Free and Support Us 

ನಿಮ್ಮ ಈ - ಮೇಲ್ ಬಳಸಿ 👇ಇದೀಗ ಉಚಿತವಾಗಿ 🆓 ಚಂದಾದಾರರಾಗಿ..!  ನಿಮಗೆ ನಮ್ಮ ಕಥೆಗಳು, ಹಾಡುಗಳು ಮತ್ತು ಮಾಹಿತಿ ಇಷ್ಟವಾದರೆ ನಿಮ್ಮ ಸಮೂಹಕ್ಕೆ ಶೇರ್ ಮಾಡುವುದನ್ನ ಮರೆಯದಿರಿ 
RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

×