HomeNewsCultureHoroscope Today 05 April-ದಿನ ಭವಿಷ್ಯ |Kannada Folks

Horoscope Today 05 April-ದಿನ ಭವಿಷ್ಯ |Kannada Folks

Horoscope Today 05 April-ದಿನ ಭವಿಷ್ಯ

Horoscope Today 05 April-ದಿನ ಭವಿಷ್ಯ

ಶಾಲಿವಾಹನ ಶಕವರ್ಷ 1949ರ ಉತ್ತರಾಯಣ, ವಸಂತ ಋತುವಿನ ಚೈತ್ರ ಮಾಸದ ಕೃಷ್ಣ ಪಕ್ಷದ ತೃತೀಯಾ ತಿಥಿಯ ಭಾನುವಾರದಂದು ಸಾಧನೆಯ ಮಾರ್ಗದಲ್ಲಿ ಚುರುಕುತನ, ರಾಜಕೀಯದಲ್ಲಿ ಇಬ್ಬಂದಿತನ, ಸಹೋದ್ಯೋಗಿಗಳ ಜೊತೆ ಮೊಂಡುತನ, ವ್ಯಾಪಾರದಲ್ಲಿ ಹುಂಬುತನ ಇವೆಲ್ಲ ಈ ದಿನ ಇರಲಿವೆ.

ಮೇಷ ರಾಶಿ:

ಜೀವನದಲ್ಲಿ ಬದಲಾವಣೆಯೆ ಶಾಶ್ವತ ಎನ್ನುವ ವಾಕ್ಯವನ್ನು ಸ್ಮರಿಸುತ್ತ ಮುಂದಡಿಯಿಡಿ. ನೆಮ್ಮದಿ ನಿಮ್ಮೆದುರು ನಿಲ್ಲುವುದು. ಇಂದು ಸಂಗಾತಿಗೆ ನಿಮ್ಮ ಮೇಲೆ ಅಭಿಮಾನ ಬರಬಹುದು. ಅವಿವಾಹಿತರು ವಿವಾಹದ ಬಗ್ಗೆ ಬಂಧುಗಳ ಜೊತೆ ಚರ್ಚಿಸುವಿರಿ. ಮನಸ್ಸಿನ ನಿಯಂತ್ರಣವು ಲಯವನ್ನು ತಪ್ಪಬಹುದು. ನೀವು ಇಂದು ವೃತ್ತಿಪರ ರಂಗದಲ್ಲಿ ನಿಮಗೆ ಪ್ರಶಂಸೆ ಸಿಗುವ ಸಾಧ್ಯತೆ ಇದೆ. ಹೊಸತನ್ನು ಕಲಿಯುವ ಉತ್ಸಾಹದಲ್ಲಿ ಇರುವಿರಿ. ಧೈರ್ಯದಿಂದ ಹೊಸ ಸವಾಲುಗಳನ್ನು ಎದುರಿಸುವಿರಿ. ಭೂಮಿ ಮತ್ತು ಆಸ್ತಿಗೆ ಸಂಬಂಧಿಸಿದ ಕೆಲಸಗಳು ಇರುತ್ತವೆ.

ವೃಷಭ ರಾಶಿ:

ಸಾಲದ ವಿಚಾರ ಬಂದರೆ ಮೌನವಹಿಸಿ, ಎದ್ದು ಹೋಗಿ ಅಥವಾ ವಿಷಯಾಂತರಿಸಿ. ಪಿತ್ರಾರ್ಜಿತ ಸಂಪತ್ತು ನಿಮಗೆ ಉಪಯೋಗವಾಗಬಹುದು. ಸಂಗಾತಿಯೊಡನೆ ಸಲ್ಲಾಪ ಮಾಡುವಿರಿ. ಸಂಪತ್ತು ನಿಮ್ಮ ಶ್ರಮಕ್ಕನುಸಾರ ಸಿಗಲಿದೆ. ನಿಮ್ಮ ಬರೆವಣಿಗೆಯಿಂದ, ಮಾತಿನಿಂದ‌ ನಿಮಗೆ ಕೀರ್ತಿಯು ಲಭ್ಯ. ಕಚೇರಿಯಲ್ಲಿ ಕೆಲಸದ ಹೊರೆ ನಿಮ್ಮ ಸ್ವಂತ ಕೆಲಸವನ್ನು ಮಾಡಲು ಸ್ವಲ್ಪ ಸಮಯವನ್ನು ನೀಡುತ್ತದೆ. ನಿಮ್ಮ ವ್ಯಾಯಾಮದಲ್ಲಿ ಮಿತಿ ಇರಲಿ. ಇಲ್ಲವಾದರೆ ದೇಹಾರೋಗ್ಯ ಕೆಡಬಹುದು. ಉತ್ತಮ ಆರೋಗ್ಯದಿಂದ ಆನಂದಿಸುವಿರಿ.

ಮಿಥುನ ರಾಶಿ:

ಸ್ನೇಹಿತರ ಜೊತೆ ಸೇರಿ ಹಣವನ್ನು ಖರ್ಚು ಮಾಡಲು ಮುಂದಾಗುತ್ತೀರಿ. ನಿಮ್ಮ ನ್ಯೂನತೆಗಳು ಇನ್ನೊಬ್ಬರ ಬಾಯಿಗೆ ಸಿಕ್ಕ ರಸಗವಳದಂತೆ ಚಪ್ಪರಿಸಿ ಸೇವಿಸುತ್ತಿರುತ್ತಾರೆ. ಇಂದು ನಿಮ್ಮ ಪೂರ್ವಜರ, ಹಿರಿಯರ ಕಾರ್ಯಗಳು ನೆನಪಾಗುವುದು. ಸಂಗಾತಿಯ ಜೊತೆ ಸಂತೋಷದಿಂದ ಸಮಯವನ್ನು ಕಳೆಯುವಿರಿ. ಈ ದಿನ ಕೆಲಸದಲ್ಲಿ, ನಿಮ್ಮ ದಕ್ಷತೆಯಿಂದ ಮುಖ್ಯವಾದವರನ್ನು ನೀವು ಮೆಚ್ಚಿಸಲು ಸಾಧ್ಯವಾಗುತ್ತದೆ. ಆರೋಗ್ಯದ ಆರೈಕೆಯ ಬಗ್ಗೆ ಗಮನವಿರಲಿ. ಆಸ್ತಿ ವ್ಯವಹಾರವು ನಿಮಗೆ ಅನುಕೂಲವಾಗುವ ಸಾಧ್ಯತೆಯಿದೆ.

ಕರ್ಕಾಟಕ ರಾಶಿ:

ನಿಮಗೆ ಸಂಗಾತಿಯ ಬಗ್ಗೆ ಅಸೂಯೆ ಬರಬಹುದು. ಇಂದು ಹುಟ್ಟಿದ ಪ್ರೇಮವು ಕೆಲವೇ ದಿನದಲ್ಲಿ ಸಾಯುತ್ತದೆ. ಕಛೇರಿಯಲ್ಲಿ ಎಲ್ಲರ ಜೊತೆ ಸೌಹಾರ್ದದಿಂದ ಇರುವಿರಿ. ಅಧ್ಯಾತ್ಮದ ಚಿಂತನೆಯಿಂದ ನಿಮ್ಮ ಬದುಕಿನ ದಿಕ್ಕು ಬದಲಾಗುವ ಸಾಧ್ಯತೆ ಇದೆ. ಯಾರನ್ನೂ ನೀವು ಪೂರ್ಣವಾಗಿ ನಂಬಲಾರಿರಿ. ಖಾಸಗಿ ಸಂಸ್ಥೆಯಲ್ಲಿ ಉನ್ನತ ಸ್ಥಾನ, ನೆಮ್ಮದಿ.‌ ಸುಲಭವಾಗಿ ಸಿಕ್ಕುವುದನ್ನು ಬಿಟ್ಟಕೊಳ್ಳುವಿರಿ. ನಿಮ್ಮ ಬೆರೆಯುವಿಕೆಯು ಕಡಿಮೆ ಆಗಬಹುದು.

ಸಿಂಹ ರಾಶಿ:

ಸ್ಥಿರಾಸ್ತಿಯು ಕೈ ತಪ್ಪುವ ಸೂಚನೆ ಸಿಗಲಿದ್ದು, ಏನು ಮಾಡುವ ಆಲೋಚನೆ ಬರದು. ಪರರ ದೃಷ್ಟಿ ನಿಮ್ಮ ಮೇಲೆ ಬೀಳಲಿದೆ. ಎಲ್ಲ ಸೋಲುಗಳನ್ನು ಪಾಠವನ್ನಾಗಿ ಸ್ವೀಕರಿಸಿ, ಸಂತೋಷವೂ ಸಿಗುವುದು. ಪುತ್ರೋತ್ಸವದ ಆನಂದ ನಿಮ್ಮ ಪಾಲಿಗಿದೆ‌. ನೆರೆ-ಹೊರೆಯವರ ಜೊತೆ ಕಲಹವಾಗಬಹುದು. ಹೊಸ ಯೋಜನೆಯನ್ನು ಪಡೆದುಕೊಳ್ಳುವಿರಿ. ನೀವು ಇಂದು ಎಲ್ಲರ ಜೊತೆ ವಿನಯದಿಂದ ಮಾತನಾಡಬೇಕು. ರಾಜಕೀಯದಲ್ಲಿ ಸಂಪರ್ಕ ಪ್ರದೇಶವು ವಿಶಾಲವಾಗಿರುತ್ತದೆ. ಯಾರಮೇಲೂ ಅವಲಂಬಿತವಾಗುವುದು ನಿಮಗೆ ಇಷ್ಟವಾಗದು.

ಕನ್ಯಾ ರಾಶಿ:

ಇಂದು ಔಷಧೀಯ ವಸ್ತುಗಳಿಂದ ಹೆಚ್ಚು ಲಾಭವಿರಲಿದೆ. ಆರೋಪಗಳನ್ನು ನೀವು ಸುಳ್ಳಾಗಿಸುವಿರಿ. ಯಾವ ಮಾತನ್ನೂ ಯೋಚಿಸದೇ ಕೊಡಬೇಡಿ. ಅದೇ ಮುಳುವಾದೀತು. ಸಂಗಾತಿಯ ಸೌಂದರ್ಯಕ್ಕೆ ಮಾರುಹೋಗಬೇಡಿ. ಎಲ್ಲರ ಜೊತೆ ಸಂವಹನವನ್ನು ಜಾಗರೂಕತೆಯಿಂದ ನಿಭಾಯಿಸಬೇಕು. ಕೇಳಿ ಬಂದವರಿಗೆ ಅಲ್ಪ ಸಹಾಯ. ಕುಟುಂಬದ ಬಗ್ಗೆ ನಿಮಗೆ ಹೆಮ್ಮೆ ಎನಿಸಬಹುದು. ಹಳೆಯ ಬಂಧುಗಳನ್ನು ಭೇಟಿಯಿಂದ ನಿಮ್ಮಲ್ಲಿ ಉತ್ಸಾವಿರುವುದು. ನೀವು ಹೊಸ ಯೋಜನೆಯ ಬಗ್ಗೆ ಅಧಿಕ ಆಲೋಚನೆ ಇರಲಿದೆ.

ತುಲಾ ರಾಶಿ:

ಉಪಯೋಗವಿಲ್ಲದ ಕಾರ್ಯಕ್ಕೊಸ್ಕರ ಖರ್ಚನ್ನೂ ಮಾಡುವಿರಿ. ಸಂಗಾತಿಯೊಡನೆ ಸಂತೋಷದಿಂದ ಸಲ್ಲಾಪಮಾಡುತ್ತ ಸಮಯ ಸರಿಯುವುದು. ಭೂಮಿಯನ್ನು ಮಾರಾಟ ಮಾಡಲು ಪ್ರಯತ್ನಿಸಿದರೆ ನಿಮ್ಮ ಬೆಲೆಗೆ ಸರಿಹೊಂದುವಂತೆ ಖರೀದಿಯಾಗುವುದು. ಜಟಿಲ ಸಮಸ್ಯೆಗಳನ್ನು ಸರಳಗೊಳಿಸುವಿರಿ. ಆರ್ಥಿಕವಾದ ಕೆಲವು ವಿಚಾರಗಳಲ್ಲಿ ಗೌಪ್ಯತೆಯನ್ನು ಇಟ್ಟುಕೊಳ್ಳುವಿರಿ‌. ಬಂಧುಗಳ ಸಲಹೆಯು ಸಮಸ್ಯೆಯನ್ನು ವಿಭಿನ್ನ ದೃಷ್ಟಿಕೋನದಿಂದ ನೋಡಲು ನಿಮಗೆ ಸಹಾಯ ಮಾಡುತ್ತದೆ.

ವೃಶ್ಚಿಕ ರಾಶಿ:

ನಿಮ್ಮ ಬಗ್ಗೆ ಪೂರ್ವಾಗ್ರಹದಿಂದ‌ ಕೂಡಿರುವವರಿಗೆ ನಿಮ್ಮ ನಿಜಸ್ಥಿತಿಯನ್ನು ತಿಳಿಸುವಿರಿ. ಸಂಪಾದನೆ ಹೆಚ್ಚಾಗುವುದು. ಕಾನೂನಾತ್ಮಕ ಚಟುವಟಿಕೆಯಲ್ಲಿ ಚುರುಕು‌ ಹೆಚ್ಚು. ಮನೋರಂಜನೆಯ ಕಾರ್ಯಕ್ರಮಗಳಿಗೆ ಭಾಗವಹಿಸಬಹುದು. ಇಂದಿನ ನಿಮ್ಮ‌ ಕಾರ್ಯಗಳ ಬಗ್ಗೆ ಸ್ಪಷ್ಟತೆ ಇರಲಿ. ಆರ್ಥಿಕ ವ್ಯವಹಾರಕ್ಕೆ ಮಾರ್ಗ ಸುಲಲಿತ. ಅಧ್ಯಾತ್ಮಪ್ರಿಯರಿಗೆ ಉತ್ತಮ‌ ಸಂಗಾತಿ ಲಭ್ಯ.‌ ಮನೆಯಲ್ಲಿ ಶಾಂತಿ ಮತ್ತು ಸಾಮರಸ್ಯವನ್ನು ತರಲು ನೀವು ಕೋಪವನ್ನು ನಿಯಂತ್ರಣ ಮಾಡಿಕೊಳ್ಳಬೇಕು.

ಧನು ರಾಶಿ:

ಸಹೋದರರ ನಡುವೆ ಸಮನ್ವಯದ ಕೊರತೆ ಕಾಣಿಸುವುದು. ಕುಟುಂಬಕ್ಕೆ ಸ್ವಲ್ಪ ಸಮಯವನ್ನು ಕೊಡಿ. ಅವರಿಗೆ ಏನು ಬೇಕು? ಏನು ಮಾಡಬೇಕು ಎಂಬುದನ್ನು ಅರಿತು ಕಾರ್ಯಪ್ರವೃತ್ತರಾಗಿ. ಕಾನೂನಿಗೆ ವಿರುದ್ಧವಾಗಿ ಏನನ್ನಾದರು ಮಾಡಿ ಸಿಕ್ಕಿಬೀಳುವಿರಿ.‌ ನಂಬಿಕೆಯನ್ನು ಉಳಿಸಿಕೊಳ್ಳುವತ್ತ ನಿಮ್ಮ ಯೋಚನೆ ಇರಲಿದೆ. ಅಧಿಕಾರಿಗಳ ಜೊತೆ ಮಾತಿನ ಚಕಮಕಿ ನಡೆಯಬಹುದು. ಇಂದು ಮಹಿಳೆಯರಿಗೆ ಶುಭ ದಿನ. ಪ್ರಾರ್ಥನೆಯ ಪರಿಣಾಮ ನಿಮ್ಮ ಮನಸ್ಸು ಎಂದಿಗಿಂತ ನೆಮ್ಮದಿಯಿಂದ ಇರಲಿದೆ. ಬಂಧುಗಳ ಎದುರು ಸ್ವಾಭಿಮಾನದ ಪ್ರದರ್ಶನ.

ಮಕರ ರಾಶಿ:

ಋಣಾತ್ಮಕ ಭಾವನೆಗಳೂ ದೂರವಾಗುವವು. ಮಾನಸಿಕ ನೆಮ್ಮದಿಯೂ ಸಿಗುವುದು. ಜೀವನೂ ಸರಳ ಎನಿಸಬಹುದು. ಕುಟುಂಬದವರ ಜೊತೆ ನಗುತ್ತಾ ಇರಿ. ಕಲಾವಿದರಿಗೆ ದೊಡ್ಡ ಸಮಾರಂಭದಲ್ಲಿ ಭಾಗವಹಿಸಲು ಆಹ್ವಾನ ಬರಬಹುದು. ವೈದ್ಯವೃತ್ತಿಯವರಿಗೆ ಕೃತಜ್ಞತೆಯ ಸಂತೃಪ್ತಿ. ಸಂಗಾತಿಯನ್ನು ಜೊತೆ ಹೊಸ ಉದ್ಯಮವನ್ನು ಆರಂಭಿಸುವ ಹುನ್ನಾರ ನಡೆಯಲಿದೆ. ಪ್ರಯಾಣದಲ್ಲಿ ಆಕಸ್ಮಿಕ ತೊಂದರೆಯನ್ನು ಎದುರಿಸಬೇಕಾಗುವುದು. ಒಳ್ಳೆಯ ಕಾರ್ಯಕ್ಕೆ ಸುತ್ತಮುತ್ತಲಿಂದ ಪ್ರಶಂಸೆ.

ಕುಂಭ ರಾಶಿ:

ಸಾಧ್ಯಾವಾದರೆ ಪ್ರೀತಿಸಿ, ಇಲ್ಲವೇ ತಟಸ್ಥವಾಗಿರಿ. ಬರುವ ಹಣವನ್ನು ನಿರೀಕ್ಷಿಸಬಹುದು. ಆಲಂಕಾರಿಕ ಸ್ಪರ್ಧೆಯಲ್ಲಿ ವಿಜಯಿಯಾಗುವಿರಿ. ಸಂಗಾತಿಯೊಂದಿಗೆ ಮನಸ್ತಾಪಗಳು ಏಳಬಹುದು. ಪ್ರೇಮನಿವೇದನೆಯನ್ನು ಮಾಡಲು ಹೋಗಬೇಡಿ. ತಿರಸ್ಕಾರಿಸಬಹುದು. ಉದ್ಯೋಗದ ಕಾರಣಕ್ಕೆ ದೂರಪ್ರಯಾಣವನ್ನು ಮಾಡುವಿರಿ. ಬರಬೇಕಾದ ಹಣ ನಿಮ್ಮ ಜೇಬಿಗೆ ಬೀಳುವುದು. ಕುಟುಂಬದ ಸದಸ್ಯರ ಸಲಹೆಯಿಂದ ನೀವು ಪ್ರಯೋಜನ ಪಡೆಯಬಹುದು.

ಮೀನ ರಾಶಿ:

ಆಹಾರದಿಂದ ಆರೋಗ್ಯ ಹಾಳಾಗುವ ಸಂಭವವಿದೆ. ಕೊಟ್ಟಿರುವ ಜವಾಬ್ದಾರಿಯನ್ನು ಯೋಗ್ಯರೀತಿಯಲ್ಲಿ ಮಾಡಿ ಮುಗಿಸುವಿರಿ. ಸಂಪತ್ತನ್ನು ಉಳಿಸಲು ಯತ್ನಿಸಿದಷ್ಟೂ ಯಾವುದಾದರೂ ಒಂದು ರೀತಿಯಲ್ಲಿ ಖರ್ಚಾಗುವುದು. ನಿದ್ರೆಯಲ್ಲಿ ಕಂಡ ಕನಸುಗಳೆಲ್ಲ ಸತ್ಯವಾಗದು. ನಿಮ್ಮ ಮಾತಿಗೆ ಅಪರಿಚಿತರೂ ಮೂಕವಿಸ್ಮತರಾದಾರು. ನಿಮ್ಮನ್ನು ಬಹು ದಿನಗಳಿಂದ ಬಾಧಿಸುತ್ತಿದ್ದ ಅನಾರೋಗ್ಯದಿಂದ ಮುಕ್ತಿ ಪಡೆಯುವಿರಿ. ಅತಿಯಾದ ಓಡಾಟವನ್ನು ನಿಲ್ಲಿಸಿ. ನೀವು ಆತ್ಮವಿಶ್ವಾಸ ಮತ್ತು ಕಠಿಣ ಪರಿಶ್ರಮದಿಂದ ಪ್ರತಿ ಗುರಿಯನ್ನು ಸಾಧಿಸುವಿರಿ.

ಇಂದಿನ ಪಂಚಾಂಗ:

ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ವಸಂತ, ಚಾಂದ್ರಮಾಸ : ಚೈತ್ರ, ಸೌರ ಮಾಸ : ಮೀನ, ಮಹಾನಕ್ಷತ್ರ : ಉತ್ತರಾಭಾದ್ರ, ವಾರ : ಭಾನು, ಪಕ್ಷ : ಕೃಷ್ಣ, ತಿಥಿ : ತೃತೀಯಾ, ನಿತ್ಯನಕ್ಷತ್ರ : ವಿಶಾಖಾ, ಯೋಗ : ಹರ್ಷಣ, ಕರಣ : ಕೌಲವ, ಸೂರ್ಯೋದಯ – 06 – 18 am, ಸೂರ್ಯಾಸ್ತ – 06 – 35 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 17:04 – 18:36, ಯಮಗಂಡ ಕಾಲ 12:27 – 13:59, ಗುಳಿಕ ಕಾಲ 15:31 – 17:04

Follow Us 

Follow KannadaFolks channel on WhatsApp

Visit the Kannadafolks.in follow the latest updates

Subscribe and Receive exclusive content and updates on your favourite topics

Subscribe to KannadaFloks YouTube Channel and watch Videos

Subscribe for Free and Support Us 

ನಿಮ್ಮ ಈ - ಮೇಲ್ ಬಳಸಿ 👇ಇದೀಗ ಉಚಿತವಾಗಿ 🆓 ಚಂದಾದಾರರಾಗಿ..!  ನಿಮಗೆ ನಮ್ಮ ಕಥೆಗಳು, ಹಾಡುಗಳು ಮತ್ತು ಮಾಹಿತಿ ಇಷ್ಟವಾದರೆ ನಿಮ್ಮ ಸಮೂಹಕ್ಕೆ ಶೇರ್ ಮಾಡುವುದನ್ನ ಮರೆಯದಿರಿ 
RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments