HomeNewsHealth and FoodHow to make the Mutton Pepper Fry

How to make the Mutton Pepper Fry

ಮಟನ್ ಪೆಪ್ಪರ್ ಫ್ರೈ-Mutton Pepper Fry

ಬೇಕಾಗುವ ಪದಾರ್ಥಗಳು

  • ಮಟನ್- ಒಂದು ಕೇಜಿ (ಚಿಕ್ಕ ತುಂಡುಗಳಾಗಿಸಿದ್ದು)
  • ಅಚ್ಚ ಖಾರದ ಮೆಣಸಿನಪುಡಿ- ಒಂದು ದೊಡ್ಡ ಚಮಚ (ಕಾಶ್ಮೀರಿ ಚಿಲ್ಲಿ ಆದರೆ ಒಂದೂವರೆ ಚಮಚ)
  • ಗರಂ ಮಸಾಲಾ ಪುಡಿ-ಒಂದು ದೊಡ್ಡ ಚಮಚ
  • ಕರಿಬೇವಿನ ಎಲೆಗಳು- ಸ್ವಲ್ಪ
  • ಅರಿಶಿನ ಪುಡಿ- ಸ್ವಲ್ಪ
  • ಹಸಿಮೆಣಸಿನ ಕಾಯಿ-ನಾಲ್ಕು (ಉದ್ದಕ್ಕೆ ಸೀಳಿದ್ದು)
  • ಕಾಳುಮೆಣಸಿನ ಪುಡಿ- ಮೂರು ದೊಡ್ಡಚಮಚ
  • ದನಿಯಾ ಪುಡಿ: ಒಂದು ದೊಡ್ಡ ಚಮಚ
  • ಶುಂಠಿ-ಬೆಳ್ಳುಳ್ಳಿ ಪೇಸ್ಟ್: ಅರ್ಧ ದೊಡ್ಡ ಚಮಚ
  • ಎಣ್ಣೆ – ಸ್ವಲ್ಪ
  • ಉಪ್ಪು: ರುಚಿಗೆ ತಕ್ಕಷ್ಟುMutton Pepper Fry | Kala's Kalai

ಮಾಡುವ ವಿಧಾನ

  • ಮಾಂಸದ ತುಂಡುಗಳನ್ನು ನೀರಿನಲ್ಲಿ ಚೆನ್ನಾಗಿ ತೊಳೆದು ನೀರೆಲ್ಲಾ ಹೊರಹೋಗುವಂತೆ ಬಸಿಯಿರಿ. ಇದಕ್ಕೆ ಅರಿಶಿನದ ಪುಡಿ ಹಚ್ಚಿ ಬದಿಗಿಡಿ.
  • ಸುಮಾರು ಹದಿನೈದು ನಿಮಿಷದ ಬಳಿಕ ಪ್ರೆಶರ್ ಕುಕ್ಕರ್ ನಲ್ಲಿ ಕೊಂಚ ಎಣ್ಣೆ ಹಾಕಿ ಬಿಸಿಮಾಡಿ. ಬಿಸಿಯಾದ ಬಳಿಕ ಶುಂಠಿ ಬೆಳ್ಳುಳ್ಳಿ ಪೇಸ್ಟ್, ಅರಿಶಿನ ಪುಡಿ, ದನಿಯಾ ಪುಡಿ, ಖಾರದ ಪುಡಿ, ಉಪ್ಪು ಹಾಕಿ ಚಿಕ್ಕ ಉರಿಯಲ್ಲಿ ತಿರುವುತ್ತಾ ಹುರಿಯಿರಿ.
  • ಕೊಂಚ ಕಂದು ಬಣ್ಣಕ್ಕೆ ತಿರುಗಿದ ಬಳಿಕ ಮಾಂಸದ ತುಂಡುಗಳನ್ನು ಹಾಕಿ ಕೆಲಕಾಲ ಹುರಿದು ಬಳಿಕ ಮುಚ್ಚಳ ಮುಚ್ಚಿ ಅತಿ ಕಡಿಮೆ ಉರಿಯಲ್ಲಿ ಸುಮಾರು ಹದಿನೈದು ನಿಮಿಷ ಬೇಯಲು ಬಿಡಿ.
  • ಇನ್ನೊಂದು ಪಾತ್ರೆಯಲ್ಲಿ ಒಂದು ಚಮಚ ಎಣ್ಣೆ ಹಾಕಿ ಕರಿಬೇವಿನ ಎಲೆ, ಹಸಿಮೆಣಸಿನಕಾಯಿ ಹಾಕಿ ಕಂದು ಬಣ್ಣವಾಗುವವರೆಗೆ ಹುರಿಯಿರಿ.
  • ಬಳಿಕ ಗರಂ ಮಸಾಲ ಪುಡಿ, ಕಾಳುಮೆಣಸಿನ ಪುಡಿ ಹಾಕಿ ಹುರಿಯಿರಿ. ನಂತರ ಪ್ರೆಶರ್ ಕುಕ್ಕರಿನಲ್ಲಿ ಬೇಯಿಸಿದ್ದ ಮಾಂಸದ ತುಂಡುಗಳನ್ನು ಇದಕ್ಕೆ ಹಾಕಿ ಚೆನ್ನಾಗಿ ಮಿಶ್ರಣ ಮಾಡಿ

How to make the Cheese Kebab in kannada

 

Subscribe for Free and Support Us 

ನಿಮ್ಮ ಈ - ಮೇಲ್ ಬಳಸಿ 👇ಇದೀಗ ಉಚಿತವಾಗಿ 🆓 ಚಂದಾದಾರರಾಗಿ..!  ನಿಮಗೆ ನಮ್ಮ ಕಥೆಗಳು, ಹಾಡುಗಳು ಮತ್ತು ಮಾಹಿತಿ ಇಷ್ಟವಾದರೆ ನಿಮ್ಮ ಸಮೂಹಕ್ಕೆ ಶೇರ್ ಮಾಡುವುದನ್ನ ಮರೆಯದಿರಿ 
Banu Mitra
Banu Mitrahttps://kannadafolks.in/
ಜನಪದ ಜಾತಿ, ಮತ, ಧರ್ಮ ಮೀರಿದ್ದು. ಅದು ಮಾತು, ಹಾಡು ಮೂಲಕ ಒಬ್ಬರಿಂದ ಮತ್ತೊಬ್ಬರಿಗೆ ಪಸರಿಸಿದ ಸಂಸ್ಕೃತಿ. ನಾವಿಂದು ಆಕಾಶದಿಂದ, ಸಾಗರದ ತಳದವರೆಗೆ ಹೋಗಿ ಅನ್ವೇಷನೆ ಯಾಗಿದೆ.
RELATED ARTICLES

Leave a Reply

- Advertisment -

Most Popular

Recent Comments