HomeNewsIf Pakistan Qualify-ಪಾಕಿಸ್ತಾನ್ ಗೆದ್ದರೆ ಸೆಮಿಫೈನಲ್ ಪಂದ್ಯ ಶಿಫ್ಟ್

If Pakistan Qualify-ಪಾಕಿಸ್ತಾನ್ ಗೆದ್ದರೆ ಸೆಮಿಫೈನಲ್ ಪಂದ್ಯ ಶಿಫ್ಟ್

If Pakistan wins the match, the semifinal fixture could be shifted to a different venue or schedule

If Pakistan Qualify-ಪಾಕಿಸ್ತಾನ್ ಗೆದ್ದರೆ ಸೆಮಿಫೈನಲ್ ಪಂದ್ಯ ಶಿಫ್ಟ್

T20 World Cup 2026: ಟಿ20 ವಿಶ್ವಕಪ್​ನ ಸೆಮಿಫೈನಲ್ ಪಂದ್ಯಗಳಿಗೆ ಮೂರು ಕ್ರೀಡಾಂಗಣಗಳನ್ನು ಫೈನಲ್ ಮಾಡಲಾಗಿದೆ. ಇಲ್ಲಿ ಟೀಮ್ ಇಂಡಿಯಾ ಫೈನಲ್​ಗೆ ಪ್ರವೇಶಿಸಿದರೆ ಮೊದಲ ಸೆಮಿಫೈನಲ್ ಮ್ಯಾಚ್ ಭಾರತದಲ್ಲೇ ನಡೆಯಲಿದೆ. ಇನ್ನು ಪಾಕಿಸ್ತಾನ್ ತಂಡ ಮೊದಲ ಸೆಮಿಫೈನಲ್​ಗೆ ಅರ್ಹತೆ ಪಡೆದರೆ ಆ ಪಂದ್ಯವು ಶ್ರೀಲಂಕಾದಲ್ಲಿ ನಡೆಯಲಿದೆ.Pakistan Cricketers Jersey Numbers (1-100): The Legends Behind the Numbers- IPL

Read this : Rishab Shetty ಹಂಪಿಯಲ್ಲಿ ರಿಷಬ್ ಶೆಟ್ಟಿಯ ಜೈ ಹನುಮಾನ್ ಮುಹೂರ್ತ |Kannada Folks

T20 World Cup 2026: ಟಿ20 ವಿಶ್ವಕಪ್ ​ನ ಮೊದಲ ಸುತ್ತಿನ ಪಂದ್ಯಗಳು ಮುಗಿದು ಸೂಪರ್-8 ಸುತ್ತು ಶುರುವಾಗಿದೆ. ಈ ಸುತ್ತಿನಲ್ಲಿ ಪಾಕಿಸ್ತಾನ್ ತಂಡ 2 ಪಂದ್ಯಗಳಲ್ಲಿ ಜಯ ಸಾಧಿಸಿದರೆ ಟಿ20 ವಿಶ್ವಕಪ್​ನ ಮೊದಲ ಸೆಮಿಫೈನಲ್ ಪಂದ್ಯವು ಶಿಫ್ಟ್ ಆಗಲಿದೆ. ಅಂದರೆ ಟಿ20 ವಿಶ್ವಕಪ್​ನ ಮೊದಲ ಪಂದ್ಯಕ್ಕೆ ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನವನ್ನು ನಿಗದಿ ಮಾಡಲಾಗಿದೆ.

ಇದಾಗ್ಯೂ ಪಾಕಿಸ್ತಾನ್ ತಂಡ ಮುಂದಿನ 2 ಪಂದ್ಯಗಳಲ್ಲಿ ಜಯ ಸಾಧಿಸಿದರೆ ಮೊದಲ ಸೆಮಿಫೈನಲ್ ಪಂದ್ಯವನ್ನು ಕೊಲಂಬೊದ ಆರ್​. ಪ್ರೇಮದಾಸ ಸ್ಟೇಡಿಯಂನಲ್ಲಿ ಆಯೋಜಿಸಲಾಗುತ್ತದೆ.

ಪಂದ್ಯ ಶಿಫ್ಟ್ ಏಕೆ?
  • ತಟಸ್ಥ ಸ್ಥಳದ ನಿಯಮ: ಪ್ರಸ್ತುತ ಟಿ20 ವಿಶ್ವಕಪ್ ಅನ್ನು ಭಾರತ ಮತ್ತು ಶ್ರೀಲಂಕಾ ಜಂಟಿಯಾಗಿ ಆಯೋಜಿಸುತ್ತಿದೆ. ಇದಾಗ್ಯೂ ಪಾಕಿಸ್ತಾನ್ ತಂಡವು ತನ್ನ ಎಲ್ಲಾ ಪಂದ್ಯಗಳನ್ನು ಶ್ರೀಲಂಕಾದಲ್ಲಿ ಆಡುತ್ತಿದೆ. ಇದಕ್ಕೆ ಮುಖ್ಯ ಕಾರಣ ಪಾಕ್ ತಂಡವು ಭಾರತದಲ್ಲಿ ಪಂದ್ಯಾವಳಿ ಆಡಲು ಹಿಂದೇಟು ಹಾಕಿರುವುದು.
  • ಕೊಲಂಬೊದಲ್ಲಿ ಸೆಮಿಫೈನಲ್: ಪಾಕಿಸ್ತಾನ್ ತಂಡವು ಸೆಮಿಫೈನಲ್​ಗೆ ಪ್ರವೇಶಿಸಿದರೆ ಆ ಪಂದ್ಯವನ್ನು ಕೊಲಂಬೊದಲ್ಲಿ ಆಯೋಜಿಸುವುದು ಪೂರ್ವ ನಿರ್ಧರಿತ. ಹೀಗಾಗಿ ಪಾಕ್ ತಂಡ ಸೆಮಿಫೈನಲ್​ಗೆ ಪ್ರವೇಶಿಸಿದರೆ ಆರ್​. ಪ್ರೇಮದಾಸ ಮೈದಾನದಲ್ಲಿ ಕಣಕ್ಕಿಳಿಯಲಿದೆ.

ಶ್ರೀಲಂಕಾ ಸೆಮಿಫೈನಲ್​ಗೆ ಬಂದರೆ?

ಶ್ರೀಲಂಕಾ ತಂಡವು ಸೆಮಿಫೈನಲ್​ಗೇರಿದರೂ ಸೆಮಿಫೈನಲ್ ಪಂದ್ಯವನ್ನು ಕೊಲಂಬೊದಲ್ಲಿ ಆಯೋಜಿಸಲಿದ್ದಾರೆ. ಇದಕ್ಕೆ ಮುಖ್ಯ ಕಾರಣ ಆತಿಥೇಯ ದೇಶವಾಗಿರುವುದು. ಆದರೆ ಮೊದಲ ಸೆಮಿಫೈನಲ್​ಗೆ ಭಾರತ ಮತ್ತು ಶ್ರೀಲಂಕಾ ಅರ್ಹತೆ ಪಡೆದರೆ ಆ ಪಂದ್ಯವನ್ನು ಕೊಲ್ಕತ್ತಾದಲ್ಲಿ ಆಯೋಜಿಸಲಾಗುತ್ತದೆ. ಅಂದರೆ ಇಲ್ಲಿ ಭಾರತ ಮೊದಲ ಸೆಮಿಫೈನಲ್​ಗೆ ಅರ್ಹತೆ ಪಡೆಯದೇ ಶ್ರೀಲಂಕಾ ಅರ್ಹತೆ ಪಡೆದಿದ್ದರೆ ಮಾತ್ರ ಮೊದಲ ಸೆಮಿಫೈನಲ್​ ಪಂದ್ಯವನ್ನು ಆರ್. ಪ್ರೇಮದಾಸ ಮೈದಾನದಲ್ಲಿ ಆಯೋಜಿಸಲು ನಿರ್ಧರಿಸಲಾಗಿದೆ.

ಶ್ರೀಲಂಕಾ ಮತ್ತು ಪಾಕಿಸ್ತಾನ್ ತಂಡಗಳು ಸೂಪರ್-8 ಸುತ್ತಿನಲ್ಲೇ ಹೊರಬಿದ್ದರೆ ಸೆಮಿಫೈನಲ್ ನಡೆಯುವುದು ಎಲ್ಲಿ ಎಂಬ ಪ್ರಶ್ನೆ ಮೂಡುವುದು ಸಹಜ. ಈ ಪ್ರಶ್ನೆಗೆ ಉತ್ತರ ಕೊಲ್ಕತ್ತಾದಲ್ಲಿ.

ಅಂದರೆ ಪಾಕಿಸ್ತಾನ್ ಮತ್ತು ಶ್ರೀಲಂಕಾ ಸೆಮಿಫೈನಲ್​ಗೆ ಅರ್ಹತೆ ಪಡೆಯುವಲ್ಲಿ ವಿಫಲವಾದರೆ ಮಾರ್ಚ್ 4 ರಂದು ನಡೆಯಲಿರುವ ಮೊದಲ ಸೆಮಿಫೈನಲ್ ಪಂದ್ಯವನ್ನು ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ಆಯೋಜಿಸಲು ನಿರ್ಧರಿಸಲಾಗಿದೆ.

ಹಾಗೆಯೇ ಮಾರ್ಚ್ 5 ರಂದು ನಡೆಯಲಿರುವ ದ್ವಿತೀಯ ಸೆಮಿಫೈನಲ್ ಪಂದ್ಯಕ್ಕೆ ಮುಂಬೈನ ವಾಂಖೆಡೆ ಸ್ಟೇಡಿಯಂ ಆತಿಥ್ಯವಹಿಸಲಿದೆ. ಇನ್ನು ಫೈನಲ್ ಪಂದ್ಯವು ಮಾರ್ಚ್ 8 ರಂದು ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಆಯೋಜಿಸಲಾಗುತ್ತದೆ.

Follow Us 

Follow KannadaFolks channel on WhatsApp

Visit the Kannadafolks.in follow the latest updates

Subscribe and Receive exclusive content and updates on your favourite topics

Subscribe to KannadaFloks YouTube Channel and watch Videos

Subscribe for Free and Support Us 

ನಿಮ್ಮ ಈ - ಮೇಲ್ ಬಳಸಿ 👇ಇದೀಗ ಉಚಿತವಾಗಿ 🆓 ಚಂದಾದಾರರಾಗಿ..!  ನಿಮಗೆ ನಮ್ಮ ಕಥೆಗಳು, ಹಾಡುಗಳು ಮತ್ತು ಮಾಹಿತಿ ಇಷ್ಟವಾದರೆ ನಿಮ್ಮ ಸಮೂಹಕ್ಕೆ ಶೇರ್ ಮಾಡುವುದನ್ನ ಮರೆಯದಿರಿ 
RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

×