HomeNewsIndia Predicted Playing VS South Africa-ಬದಲಾಗಲಿದೆಯಾ ಟೀಮ್ ಇಂಡಿಯಾ ಪ್ಲೇಯಿಂಗ್ |Kannada Folks

India Predicted Playing VS South Africa-ಬದಲಾಗಲಿದೆಯಾ ಟೀಮ್ ಇಂಡಿಯಾ ಪ್ಲೇಯಿಂಗ್ |Kannada Folks

Possible changes expected in the India national cricket team playing XI ahead of the match against South Africa national cricket team

India Predicted Playing VS South Africa-ಬದಲಾಗಲಿದೆಯಾ ಟೀಮ್ ಇಂಡಿಯಾ ಪ್ಲೇಯಿಂಗ್

T20 World Cup 2026: ಟಿ20 ವಿಶ್ವಕಪ್​ನ 43ನೇ ಪಂದ್ಯದಲ್ಲಿ ಭಾರತ ಮತ್ತು ಸೌತ್ ಆಫ್ರಿಕಾ ತಂಡಗಳು ಮುಖಾಮುಖಿಯಾಗಲಿವೆ. ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದ ಮೂಲಕ ಟೀಮ್ ಇಂಡಿಯಾ ಸೂಪರ್-8 ಸುತ್ತಿನ ಅಭಿಯಾನ ಆರಂಭಿಸಲಿದೆ. ಈ ಪಂದ್ಯದ ಬಳಿಕ ಝಿಂಬಾಬ್ವೆ ಹಾಗೂ ವೆಸ್ಟ್ ಇಂಡೀಸ್ ತಂಡಗಳನ್ನು ಎದುರಿಸಲಿದೆ.

IND vs SA: ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್​ನಲ್ಲಿ ಒಂದು ಬದಲಾವಣೆ - Kannada News | India vs South Africa, 3rd ODI Toss and Playing XI | TV9 Kannada

Read this : Donald Trump Imposes new 10 Tariff-ಭಾರತದ ಮೇಲೆ ಶೇ.10ರಷ್ಟು ಸುಂಕ ಘೋಷಿಸಿದ ಪರಿಣಾಮವೇನು? |Kannada Folks

T20 World Cup 2026: ಟಿ20 ವಿಶ್ವಕಪ್​ನ ದ್ವಿತೀಯ ಸುತ್ತಿಗೆ ವೇದಿಕೆ ಸಿದ್ಧವಾಗಿದೆ. ಫೆಬ್ರವರಿ 21 ರಂದು ನಡೆಯಲಿರುವ ಸೂಪರ್-8 ರೌಂಡ್​ನ ಮೊದಲ ಮ್ಯಾಚ್​ನಲ್ಲಿ ಪಾಕಿಸ್ತಾನ್ ಮತ್ತು ನ್ಯೂಝಿಲೆಂಡ್ ಮುಖಾಮುಖಿಯಾಗಲಿದೆ. ಇನ್ನು ಫೆಬ್ರವರಿ 22 ರಂದು ನಡೆಯಲಿರುವ ಮೊದಲ ಪಂದ್ಯದಲ್ಲಿ ಇಂಗ್ಲೆಂಢ್ ಮತ್ತು ಶ್ರೀಲಂಕಾ ಕಣಕ್ಕಿಳಿದರೆ, ದ್ವಿತೀಯ ಪಂದ್ಯದಲ್ಲಿ ಭಾರತ ಮತ್ತು ಸೌತ್ ಆಫ್ರಿಕಾ ತಂಡಗಳು ಸೆಣಸಲಿದೆ.

ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯಕ್ಕಾಗಿ ಟೀಮ್ ಇಂಡಿಯಾ ತನ್ನ ಪ್ಲೇಯಿಂಗ್ ಇಲೆವೆನ್ ಬದಲಿಸಲಿದೆಯಾ ಎಂಬುದೇ ಪ್ರಶ್ನೆ. ಏಕೆಂದರೆ ಟೀಮ್ ಇಂಡಿಯಾ ಆರಂಭಿಕ ದಾಂಡಿಗ ಅಭಿಷೇಕ್ ಶರ್ಮಾ ಕಳೆದ ಮೂರು ಮ್ಯಾಚ್​ಗಳಲ್ಲಿ ಸೊನ್ನೆ ಸುತ್ತಿದ್ದಾರೆ.

ಇದಾಗ್ಯೂ ಅಭಿಷೇಕ್ ಶರ್ಮಾ ಅವರನ್ನು ಆಡುವ ಬಳಗದಿಂದ ಕೈ ಬಿಡುವ ಸಾಧ್ಯತೆಯಿಲ್ಲ. ಏಕೆಂದರೆ ತಂಡದಲ್ಲಿರುವ ಮತ್ತೋರ್ವ ಆರಂಭಿಕ ದಾಂಡಿಗ ಸಂಜು ಸ್ಯಾಮ್ಸನ್ ಕೂಡ ಫಾರ್ಮ್​ನಲ್ಲಿಲ್ಲ. ಹೀಗಾಗಿ ಅಭಿಷೇಕ್​ಗೆ ಮತ್ತೊಂದು ಚಾನ್ಸ್​ ನೀಡುವ ಸಾಧ್ಯತೆ ಹೆಚ್ಚು.

ಅಷ್ಟೇ ಅಲ್ಲದೆ ಕಳೆದ ಪಂದ್ಯದಲ್ಲಿ ಕಣಕ್ಕಿಳಿದ ಬಳಗವೇ ಸೌತ್ ಆಫ್ರಿಕಾ ವಿರುದ್ಧ ಕೂಡ ಆಡುವ ಸಾಧ್ಯತೆಯಿದೆ. ಏಕೆಂದರೆ ನೆದರ್​ಲೆಂಡ್ಸ್ ವಿರುದ್ಧದ ಪಂದ್ಯ ನಡೆದಿರುವುದು ಕೂಡ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ. ಹೀಗಾಗಿ ಅದೇ ಪ್ಲೇಯಿಂಗ್ ಇಲೆವೆನ್​ ಅನ್ನೇ ಈ ಮ್ಯಾಚ್​ನಲ್ಲೂ ಮುಂದುವರೆಸುವ ಸಾಧ್ಯತೆಯಿದೆ.

ಅದರಂತೆ ಟೀಮ್ ಇಂಡಿಯಾ ಪರ ಆರಂಭಿಕರಾಗಿ ಅಭಿಷೇಕ್ ಶರ್ಮಾ ಹಾಗೂ ಇಶಾನ್ ಕಿಶನ್ ಕಣಕ್ಕಿಳಿಯಲಿದ್ದಾರೆ. ಇನ್ನು ಮೂರನೇ ಕ್ರಮಾಂಕದಲ್ಲಿ ತಿಲಕ್ ವರ್ಮಾ ಆಡಿದ್ರೆ, ನಾಲ್ಕನೇ ಕ್ರಮಾಂಕದಲ್ಲಿ ಸೂರ್ಯಕುಮಾರ್ ಯಾದವ್ ಬ್ಯಾಟ್ ಬೀಸಲಿದ್ದಾರೆ.

ಇನ್ನು ಆಲ್​ರೌಂಡರ್​ಗಳಾಗಿ ಹಾರ್ದಿಕ್ ಪಾಂಡ್ಯ, ಶಿವಂ ದುಬೆ ಹಾಗೂ ಅಕ್ಷರ್ ಪಟೇಲ್​ಗೆ ಸ್ಥಾನ ಸಿಗಲಿದೆ. ಹಾಗೆಯೇ ಫಿನಿಶರ್ ಪಾತ್ರದಲ್ಲಿ ರಿಂಕು ಸಿಂಗ್ ಕಣಕ್ಕಿಳಿಯಲಿದ್ದಾರೆ. ಇನ್ನುಳಿದಂತೆ ಬೌಲರ್​ಗಳಾಗಿ ಜಸ್​ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್ ಹಾಗೂ ವರುಣ್ ಚಕ್ರವರ್ತಿ ಆಡುವ ಬಳಗದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಅದರಂತೆ ಟೀಮ್ ಇಂಡಿಯಾದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿರಲಿದೆ…

  • ಇಶಾನ್ ಕಿಶನ್
  • ಅಭಿಷೇಕ್ ಶರ್ಮಾ
  • ತಿಲಕ್ ವರ್ಮಾ
  • ಸೂರ್ಯಕುಮಾರ್ ಯಾದವ್
  • ಹಾರ್ದಿಕ್ ಪಾಂಡ್ಯ
  • ಅಕ್ಷರ್ ಪಟೇಲ್
  • ಶಿವಂ ದುಬೆ
  • ರಿಂಕು ಸಿಂಗ್
  • ವರುಣ್ ಚಕ್ರವರ್ತಿ
  • ಅರ್ಷದೀಪ್ ಸಿಂಗ್
  • ಜಸ್​ಪ್ರೀತ್ ಬುಮ್ರಾ.

ಭಾರತ ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಅಕ್ಷರ್ ಪಟೇಲ್ (ಉಪನಾಯಕ), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಜಸ್​ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ, ಮೊಹಮ್ಮದ್ ಸಿರಾಜ್, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಇಶಾನ್ ಕಿಶನ್ (ವಿಕೆಟ್ ಕೀಪರ್), ರಿಂಕು ಸಿಂಗ್.

Follow Us 

Follow KannadaFolks channel on WhatsApp

Visit the Kannadafolks.in follow the latest updates

Subscribe and Receive exclusive content and updates on your favourite topics

Subscribe to KannadaFloks YouTube Channel and watch Videos

Subscribe for Free and Support Us 

ನಿಮ್ಮ ಈ - ಮೇಲ್ ಬಳಸಿ 👇ಇದೀಗ ಉಚಿತವಾಗಿ 🆓 ಚಂದಾದಾರರಾಗಿ..!  ನಿಮಗೆ ನಮ್ಮ ಕಥೆಗಳು, ಹಾಡುಗಳು ಮತ್ತು ಮಾಹಿತಿ ಇಷ್ಟವಾದರೆ ನಿಮ್ಮ ಸಮೂಹಕ್ಕೆ ಶೇರ್ ಮಾಡುವುದನ್ನ ಮರೆಯದಿರಿ 
RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

×