HomeNewsIndia T20 Ireland & England-ಐಪಿಎಲ್ ನಂತರ ಭಾರತ ಟಿ20 ಸರಣಿ |Kannada Folks

India T20 Ireland & England-ಐಪಿಎಲ್ ನಂತರ ಭಾರತ ಟಿ20 ಸರಣಿ |Kannada Folks

India to play T20s vs Ireland & England after IPL

India T20 Ireland & England-ಐಪಿಎಲ್ ನಂತರ ಭಾರತ ಟಿ20 ಸರಣಿ

India T20 schedule 2026: ಐಪಿಎಲ್ ಮುಗಿದ ಬಳಿಕ ಟೀಂ ಇಂಡಿಯಾ ಬ್ಯುಸಿಯಾಗಿರಲಿದೆ. ಸೂರ್ಯಕುಮಾರ್ ಯಾದವ್ ನಾಯಕತ್ವದಲ್ಲಿ ಐರ್ಲೆಂಡ್ ವಿರುದ್ಧ 3 ಟಿ20 ಪಂದ್ಯಗಳನ್ನು ಆಡಲಿದೆ. ಆ ಬಳಿಕ ಇಂಗ್ಲೆಂಡ್ ಪ್ರವಾಸ ಕೈಗೊಂಡು 5 ಟಿ20 ಮತ್ತು 3 ಏಕದಿನ ಪಂದ್ಯಗಳ ಸರಣಿಯಲ್ಲಿ ಭಾಗವಹಿಸಲಿದೆ. ಈ ಸರಣಿಗಳ ಸಂಪೂರ್ಣ ವೇಳಾಪಟ್ಟಿ ಇಲ್ಲಿದೆ.ಟಿ20 ವಿಶ್ವಕಪ್​: ಇಂದು ಭಾರತ - ನೆದರ್ಲ್ಯಾಂಡ್ಸ್​​ ಮುಖಾಮುಖಿ

Read this : Meti Family Gets Ticket-ಬಾಗಲಕೋಟೆ ಟಿಕೆಟ್ ಫೈನಲ್ |Kannada Folks

ಕೆಲವೇ ದಿನಗಳ ಹಿಂದೆ ಟಿ20 ವಿಶ್ವಕಪ್ ಗೆದ್ದುಕೊಂಡಿರುವ ಟೀಂ ಇಂಡಿಯಾ (Team India) ಇದೀಗ ಐಪಿಎಲ್‌ನಲ್ಲಿ (IPL 2026) ಕಣಕ್ಕಿಳಿಯಲು ಸಜ್ಜಾಗಿದೆ. ಎರಡು ತಿಂಗಳ ಕಾಲ ಈ ಮಿಲಿಯನ್ ಡಾಲರ್ ಟೂರ್ನಿಯಲ್ಲಿ ಬೆವರು ಹರಿಸಲಿರುವ ಟೀಂ ಇಂಡಿಯಾ ಆಟಗಾರರು ಆ ಬಳಿಕ ಮತ್ತೆ ರಾಷ್ಟ್ರೀಯ ಕರ್ತವ್ಯಕ್ಕೆ ಮರಳಲಿದ್ದಾರೆ. ಅದಕ್ಕೆ ಪೂರಕವಾಗಿ ಇದೀಗ ಭಾರತದ ಮುಂದಿನ ಟಿ20 ಸರಣಿಯ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಸೂರ್ಯಕುಮಾರ್ ಯಾದವ್ (Suryakumar Yadav) ನೇತೃತ್ವದ ತಂಡವು ಐರ್ಲೆಂಡ್ ವಿರುದ್ಧ ಮೂರು ಪಂದ್ಯಗಳ ಟಿ20 ಸರಣಿಯನ್ನು ಆಡಲಿದೆ.

ಈ ಸರಣಿ ಜೂನ್ ಕೊನೆಯ ವಾರದಲ್ಲಿ ನಡೆಯಲಿದ್ದು, ಸರಣಿಯ ದಿನಾಂಕಗಳನ್ನು ಶೀಘ್ರದಲ್ಲೇ ಘೋಷಿಸಲಾಗುವುದು. ಇಂಗ್ಲೆಂಡ್ ಪ್ರವಾಸ ಕೈಗೊಳ್ಳುವ ಮೊದಲು ಟೀಂ ಇಂಡಿಯಾ ಈ ಸರಣಿಯನ್ನು ಆಡಲಿದೆ. ವಾಸ್ತತವಾಗಿ ಭಾರತ ಹಾಗೂ ಇಂಗ್ಲೆಂಡ್ ನಡುವೆ ಜುಲೈ ತಿಂಗಳಲ್ಲಿ ಐದು ಪಂದ್ಯಗಳ ಟಿ20 ಸರಣಿ ಹಾಗೂ ಆ ಬಳಿಕ ಮೂರು ಪಂದ್ಯಗಳ ಏಕದಿನ ಸರಣಿ ನಡೆಯಲಿದೆ. ಆ ಸರಣಿ ಆರಂಭಕ್ಕೂ ಮುನ್ನ ಐರ್ಲೆಂಡ್ ವಿರುದ್ಧ ಟೀಂ ಇಂಡಿಯಾ ಈ ಟಿ20 ಸರಣಿಯನ್ನು ಆಡಲಿದೆ.

ಭಾರತದ ಇಂಗ್ಲೆಂಡ್ ಪ್ರವಾಸ

ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಸರಣಿ ಜುಲೈ 1 ರಂದು ಆರಂಭವಾಗಲಿದ್ದು, ಅದಕ್ಕೂ ಮುನ್ನ ಅಂದರೆ ಜೂನ್‌ನಲ್ಲಿ ಟೀಂ ಇಂಡಿಯಾ ಐರ್ಲೆಂಡ್ ವಿರುದ್ಧ ಟಿ20 ಸರಣಿ ಆಡಲಿದೆ. ಈ ಸರಣಿಯ ದಿನಾಂಕಗಳನ್ನು ಬಿಸಿಸಿಐ ಶೀಘ್ರದಲ್ಲೇ ಪ್ರಕಟಿಸುವ ನಿರೀಕ್ಷೆಯಿದೆ. ಈ ಸರಣಿಯ ನಂತರ, ಟೀಂ ಇಂಡಿಯಾ ಜುಲೈ 1, 4, 7, 9 ಮತ್ತು 11 ರಂದು ಇಂಗ್ಲೆಂಡ್ ವಿರುದ್ಧ ಐದು ಪಂದ್ಯಗಳ ಟಿ20 ಸರಣಿಯನ್ನು ಆಡಲಿದೆ. ಈ ಸರಣಿಗಾಗಿ ಇಂಗ್ಲೆಂಡ್‌ಗೆ ಪ್ರಯಾಣ ಬೆಳೆಸಲಿದೆ. ಇದರ ನಂತರ ಜುಲೈ 14 ರಂದು ಏಕದಿನ ಸರಣಿ ಆರಂಭವಾಗಲಿದ್ದು, ಎರಡನೇ ಏಕದಿನ ಪಂದ್ಯ ಜುಲೈ 16 ರಂದು ಮತ್ತು ಮೂರನೇ ಪಂದ್ಯ ಜುಲೈ 19 ರಂದು ನಡೆಯಲಿದೆ.

ಭಾರತ-ಐರ್ಲೆಂಡ್ ಟಿ20 ಸರಣಿ

ಭಾರತ ತಂಡವು ಟಿ20 ಸರಣಿಗಾಗಿ ಐರ್ಲೆಂಡ್​ಗೆ ಭೇಟಿ ನೀಡುತ್ತಿರುವುದು ಇದು ನಾಲ್ಕನೇ ಬಾರಿಯಾಗಲಿದೆ. ಟೀಂ ಇಂಡಿಯಾ ಇದುವರೆಗೆ ಐರ್ಲೆಂಡ್‌ನಲ್ಲಿ ಆರು ಟಿ20 ಪಂದ್ಯಗಳನ್ನು ಆಡಿದ್ದು, ಎಲ್ಲವನ್ನೂ ಗೆದ್ದಿದೆ. ಭಾರತ ಮತ್ತು ಐರ್ಲೆಂಡ್ ನಡುವಿನ ಈ ಎಲ್ಲಾ ಪಂದ್ಯಗಳು ಡಬ್ಲಿನ್‌ನ ಮಲಾಹೈಡ್‌ನಲ್ಲಿ ನಡೆದಿದ್ದವು.

Follow Us 

Follow KannadaFolks channel on WhatsApp

Visit the Kannadafolks.in follow the latest updates

Subscribe and Receive exclusive content and updates on your favourite topics

Subscribe to KannadaFloks YouTube Channel and watch Videos

 

Subscribe for Free and Support Us 

ನಿಮ್ಮ ಈ - ಮೇಲ್ ಬಳಸಿ 👇ಇದೀಗ ಉಚಿತವಾಗಿ 🆓 ಚಂದಾದಾರರಾಗಿ..!  ನಿಮಗೆ ನಮ್ಮ ಕಥೆಗಳು, ಹಾಡುಗಳು ಮತ್ತು ಮಾಹಿತಿ ಇಷ್ಟವಾದರೆ ನಿಮ್ಮ ಸಮೂಹಕ್ಕೆ ಶೇರ್ ಮಾಡುವುದನ್ನ ಮರೆಯದಿರಿ 
RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments