HomeNewsIndia Women vs England Women T20 Series - ಮೊದಲ ಪಂದ್ಯ ಎಷ್ಟು ಗಂಟೆಗೆ...

India Women vs England Women T20 Series – ಮೊದಲ ಪಂದ್ಯ ಎಷ್ಟು ಗಂಟೆಗೆ ಆರಂಭ?

India Women vs England Women T20 Series: ಜೂನ್ 12ರಿಂದ ಆರಂಭವಾಗಲಿರುವ ಮಹಿಳಾ ಟಿ20 ವಿಶ್ವಕಪ್‌ಗೂ ಮುನ್ನ ಭಾರತ ವನಿತಾ ಪಡೆ ಇಂಗ್ಲೆಂಡ್ ವಿರುದ್ಧ ಟಿ20 ಸರಣಿ ಆಡಲಿದೆ.

India Women vs England Women T20 Series – ಮೊದಲ ಪಂದ್ಯ ಎಷ್ಟು ಗಂಟೆಗೆ ಆರಂಭ?

ಮಹಿಳಾ ಟಿ20 ವಿಶ್ವಕಪ್ (Women’s T20 World Cup) ಇದೇ ಜೂನ್ 12 ರಿಂದ ಆರಂಭವಾಗಲಿದೆ. ಆದರೆ ಅದಕ್ಕೂ ಮುನ್ನ ಭಾರತ ವನಿತಾ ಪಡೆ ಇಂಗ್ಲೆಂಡ್‌ ವಿರುದ್ಧ ಟಿ20 ಸರಣಿಯನ್ನು (India vs England T20 series) ಆಡಲಿದೆ. ಟಿ20 ವಿಶ್ವಕಪ್‌ಗೆ ತಯಾರಿ ದೃಷ್ಟಿಯಿಂದ ಈ ಸರಣಿ ಉಭಯ ತಂಡಗಳಿಗೂ ಅತ್ಯಂತ ಮಹತ್ವದ್ದಾಗಿದೆ. ಅದರಲ್ಲೂ ಏಕದಿನ ಕ್ರಿಕೆಟ್​ನಲ್ಲಿ ಹಾಲಿ ಚಾಂಪಿಯನ್ ಆಗಿರುವ ಹರ್ಮನ್​ಪ್ರೀತ್ ಕೌರ್ ಪಡೆ, ಇದೀಗ ಟಿ20 ವಿಶ್ವಕಪ್​ನಲ್ಲೂ ಟ್ರೋಫಿ ಎತ್ತಿಹಿಡಿಯುವ ಇರಾದೆಯಲ್ಲಿದೆ. ಅದು ಸಾಧ್ಯವಾಗಬೇಕಾದರೆ ಭಾರತ ತಂಡ, ಇಂಗ್ಲೆಂಡ್‌ ವಿರುದ್ಧ ಭರ್ಜರಿ ಪ್ರದರ್ಶನ ನೀಡುವ ಮೂಲಕ ತನ್ನ ಆತ್ಮಸ್ಥೈರ್ಯವನ್ನು ಹೆಚ್ಚಿಸಿಕೊಂಡು ಚುಟುಕು ವಿಶ್ವಸಮರಕ್ಕೆ ಕಾಲಿಡಬೇಕಿದೆ.

ಪ್ರಸ್ತುತ ಇಂಗ್ಲೆಂಡ್ ಪ್ರವಾಸದಲ್ಲಿರುವ ಟೀಂ ಇಂಡಿಯಾ 4 ಪಂದ್ಯಗಳ ಟಿ20 ಸರಣಿ ಮತ್ತು ಒಂದು ಟೆಸ್ಟ್ ಪಂದ್ಯವನ್ನು ಆಡಲಿದೆ. ಟೀಂ ಇಂಡಿಯಾದ ಪ್ರವಾಸವು ಮೇ 28 ರ ಗುರುವಾರದಿಂದ ಪ್ರಾರಂಭವಾಗಲಿದೆ. ಈ ಟಿ2 ಸರಣಿಯಲ್ಲಿ ಹರ್ಮನ್ಪ್ರೀತ್ ಕೌರ್ ತಂಡವನ್ನು ಮುನ್ನಡೆಸಲಿದ್ದು, ಸ್ಮೃತಿ ಮಂಧಾನ ಉಪನಾಯಕಿಯಾಗಿರುತ್ತಾರೆ. ಅಲ್ಲದೆ, ಷಾರ್ಲೆಟ್ ಡೀನ್ ಇಂಗ್ಲೆಂಡ್ ತಂಡವನ್ನು ಮುನ್ನಡೆಸಲಿದ್ದು, ಈ ಸರಣಿಯ ಮೊದಲ ಟಿ20 ಪಂದ್ಯದ ಪೂರ್ಣ ವಿವರ ಇಂತಿದೆ.IND vs ENG: ಭಾರತ- ಇಂಗ್ಲೆಂಡ್‌ ನಡುವೆ ಟಿ20 ಸರಣಿ; ಮೊದಲ ಪಂದ್ಯ ಎಷ್ಟು ಗಂಟೆಗೆ ಆರಂಭ?  | TV9 KannadaRead this – Vaibhav Suryavanshi;s IPL Sensation; ವೈಭವ್ ಸೂರ್ಯವಂಶಿ

ಇಂಗ್ಲೆಂಡ್ ಮತ್ತು ಭಾರತ ಮಹಿಳಾ ತಂಡದ ನಡುವಿನ ಮೊದಲ ಟಿ20 ಪಂದ್ಯ ಯಾವಾಗ ನಡೆಯಲಿದೆ?

ಇಂಗ್ಲೆಂಡ್ ಮತ್ತು ಭಾರತ ಮಹಿಳಾ ತಂಡಗಳ ನಡುವಿನ ಮೊದಲ ಟಿ20 ಪಂದ್ಯವು ಮೇ 28 ರ ಗುರುವಾರ ನಡೆಯಲಿದೆ.

ಇಂಗ್ಲೆಂಡ್ ಮತ್ತು ಭಾರತ ಮಹಿಳಾ ತಂಡದ ನಡುವಿನ ಮೊದಲ ಟಿ20 ಪಂದ್ಯ ಎಲ್ಲಿ ನಡೆಯುತ್ತದೆ?

ಚೆಲ್ಮ್ಸ್‌ಫೋರ್ಡ್‌ನ ಕೌಂಟಿ ಮೈದಾನದಲ್ಲಿ ಇಂಗ್ಲೆಂಡ್ ಮತ್ತು ಭಾರತ ಮಹಿಳಾ ತಂಡದ ನಡುವಿನ ಮೊದಲ ಟಿ20 ಪಂದ್ಯ ನಡೆಯುತ್ತಿದೆ.

Read this – DK Shivakumar Asks astrologer date And time for Karnataka CM oath ceremony ; ಡಿಕೆ ಶಿವಕುಮಾರ್

ಇಂಗ್ಲೆಂಡ್ ಮತ್ತು ಭಾರತ ಮಹಿಳಾ ತಂಡದ ನಡುವಿನ ಮೊದಲ ಟಿ20 ಪಂದ್ಯ ಯಾವಾಗ ಪ್ರಾರಂಭವಾಗುತ್ತದೆ?

ಇಂಗ್ಲೆಂಡ್ ಮತ್ತು ಭಾರತ ಮಹಿಳಾ ತಂಡದ ನಡುವಿನ ಮೊದಲ ಟಿ20 ಪಂದ್ಯವು ಭಾರತೀಯ ಕಾಲಮಾನ ರಾತ್ರಿ 11 ಗಂಟೆಗೆ ಪ್ರಾರಂಭವಾಗಲಿದೆ.

ಇಂಗ್ಲೆಂಡ್ ಮತ್ತು ಭಾರತ ಮಹಿಳಾ ತಂಡದ ನಡುವಿನ ಮೊದಲ ಟಿ20 ಪಂದ್ಯವನ್ನು ಎಲ್ಲಿ ವೀಕ್ಷಿಸಬಹುದು?

ಇಂಗ್ಲೆಂಡ್ ಮತ್ತು ಭಾರತ ಮಹಿಳಾ ತಂಡದ ನಡುವಿನ ಮೊದಲ ಟಿ20 ಪಂದ್ಯವನ್ನು ಸೋನಿ ಸ್ಪೋರ್ಟ್ಸ್ ನೆಟ್‌ವರ್ಕ್ ಚಾನೆಲ್‌ಗಳಲ್ಲಿ ಟಿವಿಯಲ್ಲಿ ನೇರ ಪ್ರಸಾರ ಮಾಡಲಾಗುತ್ತದೆ. ಸೋನಿ ಲಿವ್ ಅಪ್ಲಿಕೇಶನ್‌ನಲ್ಲಿಯೂ ಪಂದ್ಯವನ್ನು ನೇರಪ್ರಸಾರ ವೀಕ್ಷಿಸಬಹುದು.

Read this – Siddaramaiah Resigns; ಕರ್ನಾಟಕ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

ಹೆಡ್ ಟು ಹೆಡ್ ದಾಖಲೆ

ಇಲ್ಲಿಯವರೆಗೆ, ಟೀಂ ಇಂಡಿಯಾ ಮತ್ತು ಇಂಗ್ಲೆಂಡ್ ಮಹಿಳಾ ತಂಡಗಳ ನಡುವೆ 35 ಟಿ20 ಪಂದ್ಯಗಳು ನಡೆದಿವೆ. ಈ 35 ಪಂದ್ಯಗಳಲ್ಲಿ ಇಂಗ್ಲೆಂಡ್ ಮಹಿಳಾ ತಂಡವು 24 ಪಂದ್ಯಗಳನ್ನು ಗೆದ್ದಿದ್ದರೆ, ಟೀಂ ಇಂಡಿಯಾ ಕೇವಲ 11 ಪಂದ್ಯಗಳಲ್ಲಿ ಮಾತ್ರ ಗೆಲುವು ಸಾಧಿಸಿದೆ. ಆದಾಗ್ಯೂ ಕಳೆದ ಇಂಗ್ಲೆಂಡ್ ಪ್ರವಾಸದಲ್ಲಿ ಭಾರತ ತಂಡ ಟಿ20 ಸರಣಿಯನ್ನು ಗೆದ್ದುಕೊಂಡಿರುವುದು ತಂಡದ ಮನೋಬಲವನ್ನು ಹೆಚ್ಚಿಸಿದೆ.

Follow Us 

Follow KannadaFolks channel on WhatsApp

Visit the Kannadafolks.in follow the latest updates

Subscribe and Receive exclusive content and updates on your favourite topics

Subscribe to KannadaFloks YouTube Channel and watch Videos

 

 

Subscribe for Free and Support Us 

ನಿಮ್ಮ ಈ - ಮೇಲ್ ಬಳಸಿ 👇ಇದೀಗ ಉಚಿತವಾಗಿ 🆓 ಚಂದಾದಾರರಾಗಿ..!  ನಿಮಗೆ ನಮ್ಮ ಕಥೆಗಳು, ಹಾಡುಗಳು ಮತ್ತು ಮಾಹಿತಿ ಇಷ್ಟವಾದರೆ ನಿಮ್ಮ ಸಮೂಹಕ್ಕೆ ಶೇರ್ ಮಾಡುವುದನ್ನ ಮರೆಯದಿರಿ 
RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments