HomeLyricsInnastu Bekenna Hrudayakke Rama Song lyrics - ಇನ್ನಷ್ಟು ಬೇಕೆನ್ನ ಹೃದಯಕ್ಕೆ ರಾಮ -...

Innastu Bekenna Hrudayakke Rama Song lyrics – ಇನ್ನಷ್ಟು ಬೇಕೆನ್ನ ಹೃದಯಕ್ಕೆ ರಾಮ – Top Devotional songs| Kannada Folks

Innastu Bekenna Hrudayakke Rama Song lyrics - ಇನ್ನಷ್ಟು ಬೇಕೆನ್ನ ಹೃದಯಕ್ಕೆ ರಾಮ

Innastu Bekenna Hrudayakke Rama Song lyrics – ಇನ್ನಷ್ಟು ಬೇಕೆನ್ನ ಹೃದಯಕ್ಕೆ ರಾಮ – Top Devotional songs| Kannada Folks

ಇನ್ನಷ್ಟು ಬೇಕೆನ್ನ ಹೃದಯಕ್ಕೆ ರಾಮ
ನಿನ್ನಷ್ಟು ನೆಮ್ಮದಿಯು ಎಲ್ಲಿಹುದೋ ರಾಮ
ರಾಮ ರಾಮ ರಾಮ ರಾಮ

ನೀನಿಷ್ಟದಂತೆನ್ನ ಇಟ್ಟಿರುವೆ ರಾಮ
ನನ್ನಿಷ್ಟದಂತೆಲ್ಲ ಕೊಟ್ಟಿರುವೆ ರಾಮ
ಕಷ್ಟಗಳ ಕೊಡಬೇಡ ಎನ್ನಲಾರೆ ರಾಮ
ಕಷ್ಟ ಸಹಿಸುವ ಸಹನೆ ಕೊಡು ನನಗೆ ರಾಮ
ಕಷ್ಟ ಸಹಿಸುವ ಸಹನೆ ಇನ್ನಷ್ಟು ರಾಮ
ಕಷ್ಟ ಸಹಿಸುವ ಸಹನೆ ನಿನ್ನಷ್ಟು ರಾಮ
ಇನ್ನಷ್ಟು ಬೇಕೆನ್ನ ಹೃದಯಕ್ಕೆ ರಾಮ
ನಿನ್ನಷ್ಟು ನೆಮ್ಮದಿಯು ಎಲ್ಲಿಹುದೋ ರಾಮ

ಇನ್ನಷ್ಟು ಬೇಕೆನ್ನ ಹೃದಯಕ್ಕೆ ರಾಮ
ನಿನ್ನಷ್ಟು ನೆಮ್ಮದಿಯು ಎಲ್ಲಿಹುದೋ ರಾಮ
ರಾಮ ರಾಮ ರಾಮ ರಾಮ

ಒಳಿತಿನೆಡೆ ಮುನ್ನೆಡೆವ ಮಾನವ ಕೊಡು ರಾಮ
ಸೆಳೆತಕ್ಕೆ ಸಿಗದಂತೆ ಸ್ಥಿರತೆ ಕೊಡು ರಾಮ
ನಿನ್ನೆಗಳ ಪಾಪಗಳ ಸೊನ್ನೆಯಾಗಿಸು ರಾಮ
ನಾಳೆಗಳು ಪುಣ್ಯಗಳ ಹದಿಯಾಗಲಿ ರಾಮ
ನನ್ನ ಬಳಿಗೆ ನಿನ್ನ ಹಸಿವ ಕೊಡು ರಾಮ
ನನ್ನ ತೋಳಿಗೆ ನಿನ್ನ ಕಸುವ ಕೊಡು ರಾಮ
ಕಣ್ಣು ಕಳೆದರು ನಿನ್ನ ಕನಸು ಕೊಡು ರಾಮ
ನನ್ನ ಹರಣಕೆ ನಿನ್ನ ಚಾರಣ ಕೊಡು ರಾಮ
ಇನ್ನಷ್ಟು ಬೇಕೆನ್ನ ಹೃದಯಕ್ಕೆ ರಾಮ
ನಿನ್ನಷ್ಟು ನೆಮ್ಮದಿಯು ಎಲ್ಲಿಹುದೋ ರಾಮ

ಕೌಸಲ್ಯೆಯಾಗುವೆನು ಮಾಡಿಲಲಿರು ರಾಮ
ವೈದೇಹಿಯಾಗುವೆನು ಒಡನಾಡು ರಾಮ
ಪಾದುಕೆಯ ತಲೆಯಲಿಇಡು ಭಾರತನಾಗುವೆ ರಾಮ
ಸಹವಾಸ ಕೊಡು ನಾನು ಸೌಮಿತ್ರಿ ರಾಮ
ಸುಗ್ರೀವನಾಗುವೆನು ಸ್ನೇಹ ಕೊಡು ರಾಮ
ಹನುಮನಾಗುವೆ ನಿನ್ನ ಸೇವೆ ಕೊಡು ರಾಮ
ಶಬರಿಯಾಗುವೆ ನಿನ್ನ ಭಾವ ಕೊಡು ರಾಮ
ಇನ್ನಷ್ಟು ಬೇಕೆನ್ನ ಹೃದಯಕ್ಕೆ ರಾಮ
ನಿನ್ನಷ್ಟು ನೆಮ್ಮದಿಯು ಎಲ್ಲಿಹುದೋ ರಾಮ

ಇನ್ನಷ್ಟು ಬೇಕೆನ್ನ ಹೃದಯಕ್ಕೆ ರಾಮ
ನಿನ್ನಷ್ಟು ನೆಮ್ಮದಿಯು ಎಲ್ಲಿಹುದೋ ರಾಮ
ರಾಮ ರಾಮ ರಾಮ ರಾಮ

ಋತ ನೀನೆ ಋತು ನೀನೆ ಶೃತಿ ನೀನೆ ರಾಮ
ಮತಿ ನೀನೆ ಗತಿ ನೀನೆ ದ್ಯುತಿ ನೀನೆ ರಾಮ
ಆರಂಭ ಅಸ್ತಿತ್ತ್ವ ಅಂತ್ಯ ನೀ ರಾಮ
ಪೂರ್ಣ ನೀ ಪ್ರಕಟ ನೀ ಆನಂದ ರಾಮ
ಹರ ನೀನೆ ಹರಿ ನೀನೆ ಬ್ರಹ್ಮ ನೀ ರಾಮ
ಗುರಿ ನೀನೆ ಗುರು ನೀನೆ ಅರಿವು ನೀ ರಾಮ
ಗುರಿ ನೀನೆ ಗುರು ನೀನೆ ಅರಿವು ನೀ ರಾಮ
ರಘುರಾಮ ರಘುರಾಮ ರಘುರಾಮ ರಘುರಾಮ
ನಗುರಾಮ ನಗರಾಮ ಜಗರಾಮ ರಾಮ
ಇನ್ನಷ್ಟು ಬೇಕೆನ್ನ ಹೃದಯಕ್ಕೆ ರಾಮ
ನಿನ್ನಷ್ಟು ನೆಮ್ಮದಿಯು ಎಲ್ಲಿಹುದೋ ರಾಮ

ಇನ್ನಷ್ಟು ಬೇಕೆನ್ನ ಹೃದಯಕ್ಕೆ ರಾಮ
ನಿನ್ನಷ್ಟು ನೆಮ್ಮದಿಯು ಎಲ್ಲಿಹುದೋ ರಾಮ
ರಾಮ ರಾಮ ರಾಮ ರಾಮ

Read this – Shrikarane Srinivasane song Lyrics  ಶ್ರೀಕಾರನೇ ಶ್ರೀನಿವಾಸನೇ

Subscribe for Free and Support Us 

ನಿಮ್ಮ ಈ - ಮೇಲ್ ಬಳಸಿ 👇ಇದೀಗ ಉಚಿತವಾಗಿ 🆓 ಚಂದಾದಾರರಾಗಿ..!  ನಿಮಗೆ ನಮ್ಮ ಕಥೆಗಳು, ಹಾಡುಗಳು ಮತ್ತು ಮಾಹಿತಿ ಇಷ್ಟವಾದರೆ ನಿಮ್ಮ ಸಮೂಹಕ್ಕೆ ಶೇರ್ ಮಾಡುವುದನ್ನ ಮರೆಯದಿರಿ 
RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

×