HomeLyricsInnastu Bekenna Hrudayakke Rama Song lyrics-ಇನ್ನಷ್ಟು ಬೇಕೆನ್ನ ಹೃದಯಕ್ಕೆ ರಾಮ |Devotional Song |Shri Rama...

Innastu Bekenna Hrudayakke Rama Song lyrics-ಇನ್ನಷ್ಟು ಬೇಕೆನ್ನ ಹೃದಯಕ್ಕೆ ರಾಮ |Devotional Song |Shri Rama Song

Shri Rama Devotional Song

Innastu Bekenna Hrudayakke Rama Song lyrics-ಇನ್ನಷ್ಟು ಬೇಕೆನ್ನ ಹೃದಯಕ್ಕೆ ರಾಮ 

ಇನ್ನಷ್ಟು ಬೇಕೆನ್ನ ಹೃದಯಕ್ಕೆ ರಾಮ
ನಿನ್ನಷ್ಟು ನೆಮ್ಮದಿಯು ಎಲ್ಲಿಹುದೋ ರಾಮ
ರಾಮ ರಾಮ ರಾಮ ರಾಮ

ನೀನಿಷ್ಟದಂತೆನ್ನ ಇಟ್ಟಿರುವೆ ರಾಮ
ನನ್ನಿಷ್ಟದಂತೆಲ್ಲ ಕೊಟ್ಟಿರುವೆ ರಾಮ
ಕಷ್ಟಗಳ ಕೊಡಬೇಡ ಎನ್ನಲಾರೆ ರಾಮ
ಕಷ್ಟ ಸಹಿಸುವ ಸಹನೆ ಕೊಡು ನನಗೆ ರಾಮ
ಕಷ್ಟ ಸಹಿಸುವ ಸಹನೆ ಇನ್ನಷ್ಟು ರಾಮ
ಕಷ್ಟ ಸಹಿಸುವ ಸಹನೆ ನಿನ್ನಷ್ಟು ರಾಮ
ಇನ್ನಷ್ಟು ಬೇಕೆನ್ನ ಹೃದಯಕ್ಕೆ ರಾಮ
ನಿನ್ನಷ್ಟು ನೆಮ್ಮದಿಯು ಎಲ್ಲಿಹುದೋ ರಾಮ

ಇನ್ನಷ್ಟು ಬೇಕೆನ್ನ ಹೃದಯಕ್ಕೆ ರಾಮ
ನಿನ್ನಷ್ಟು ನೆಮ್ಮದಿಯು ಎಲ್ಲಿಹುದೋ ರಾಮ
ರಾಮ ರಾಮ ರಾಮ ರಾಮ

ಒಳಿತಿನೆಡೆ ಮುನ್ನೆಡೆವ ಮಾನವ ಕೊಡು ರಾಮ
ಸೆಳೆತಕ್ಕೆ ಸಿಗದಂತೆ ಸ್ಥಿರತೆ ಕೊಡು ರಾಮ
ನಿನ್ನೆಗಳ ಪಾಪಗಳ ಸೊನ್ನೆಯಾಗಿಸು ರಾಮ
ನಾಳೆಗಳು ಪುಣ್ಯಗಳ ಹದಿಯಾಗಲಿ ರಾಮ
ನನ್ನ ಬಳಿಗೆ ನಿನ್ನ ಹಸಿವ ಕೊಡು ರಾಮ
ನನ್ನ ತೋಳಿಗೆ ನಿನ್ನ ಕಸುವ ಕೊಡು ರಾಮ
ಕಣ್ಣು ಕಳೆದರು ನಿನ್ನ ಕನಸು ಕೊಡು ರಾಮ
ನನ್ನ ಹರಣಕೆ ನಿನ್ನ ಚಾರಣ ಕೊಡು ರಾಮ
ಇನ್ನಷ್ಟು ಬೇಕೆನ್ನ ಹೃದಯಕ್ಕೆ ರಾಮ
ನಿನ್ನಷ್ಟು ನೆಮ್ಮದಿಯು ಎಲ್ಲಿಹುದೋ ರಾಮ

ಕೌಸಲ್ಯೆಯಾಗುವೆನು ಮಾಡಿಲಲಿರು ರಾಮ
ವೈದೇಹಿಯಾಗುವೆನು ಒಡನಾಡು ರಾಮ
ಪಾದುಕೆಯ ತಲೆಯಲಿಇಡು ಭಾರತನಾಗುವೆ ರಾಮ
ಸಹವಾಸ ಕೊಡು ನಾನು ಸೌಮಿತ್ರಿ ರಾಮ
ಸುಗ್ರೀವನಾಗುವೆನು ಸ್ನೇಹ ಕೊಡು ರಾಮ
ಹನುಮನಾಗುವೆ ನಿನ್ನ ಸೇವೆ ಕೊಡು ರಾಮ
ಶಬರಿಯಾಗುವೆ ನಿನ್ನ ಭಾವ ಕೊಡು ರಾಮ
ಇನ್ನಷ್ಟು ಬೇಕೆನ್ನ ಹೃದಯಕ್ಕೆ ರಾಮ
ನಿನ್ನಷ್ಟು ನೆಮ್ಮದಿಯು ಎಲ್ಲಿಹುದೋ ರಾಮ

ಇನ್ನಷ್ಟು ಬೇಕೆನ್ನ ಹೃದಯಕ್ಕೆ ರಾಮ
ನಿನ್ನಷ್ಟು ನೆಮ್ಮದಿಯು ಎಲ್ಲಿಹುದೋ ರಾಮ
ರಾಮ ರಾಮ ರಾಮ ರಾಮ

ಋತ ನೀನೆ ಋತು ನೀನೆ ಶೃತಿ ನೀನೆ ರಾಮ
ಮತಿ ನೀನೆ ಗತಿ ನೀನೆ ದ್ಯುತಿ ನೀನೆ ರಾಮ
ಆರಂಭ ಅಸ್ತಿತ್ತ್ವ ಅಂತ್ಯ ನೀ ರಾಮ
ಪೂರ್ಣ ನೀ ಪ್ರಕಟ ನೀ ಆನಂದ ರಾಮ
ಹರ ನೀನೆ ಹರಿ ನೀನೆ ಬ್ರಹ್ಮ ನೀ ರಾಮ
ಗುರಿ ನೀನೆ ಗುರು ನೀನೆ ಅರಿವು ನೀ ರಾಮ
ಗುರಿ ನೀನೆ ಗುರು ನೀನೆ ಅರಿವು ನೀ ರಾಮ
ರಘುರಾಮ ರಘುರಾಮ ರಘುರಾಮ ರಘುರಾಮ
ನಗುರಾಮ ನಗರಾಮ ಜಗರಾಮ ರಾಮ
ಇನ್ನಷ್ಟು ಬೇಕೆನ್ನ ಹೃದಯಕ್ಕೆ ರಾಮ
ನಿನ್ನಷ್ಟು ನೆಮ್ಮದಿಯು ಎಲ್ಲಿಹುದೋ ರಾಮ

ಇನ್ನಷ್ಟು ಬೇಕೆನ್ನ ಹೃದಯಕ್ಕೆ ರಾಮ
ನಿನ್ನಷ್ಟು ನೆಮ್ಮದಿಯು ಎಲ್ಲಿಹುದೋ ರಾಮ
ರಾಮ ರಾಮ ರಾಮ ರಾಮ

Get More Here : 

Kelo Madeva Kannada Song – kelo mahadeva kannada song lyrics

Devare neenu nijavappa lyrics

Kelo madeva song lyrics

Devare neenu nijavappa lyrics in kannada

Madeshwara song lyrics in kannada

Mahadeshwara daya barade lyrics

Siddayya swamy banni lyrics in kannada

Madeshwara song lyrics

Ganga jatadhara lyrics in kannada

Adidavara manava balle song lyrics

Follow Us 

Follow KannadaFolks channel on WhatsApp

Visit the Kannadafolks.in follow the latest updates

Subscribe and Receive exclusive content and updates on your favourite topics

Subscribe to KannadaFloks YouTube Channel and watch Videos

Subscribe for Free and Support Us 

ನಿಮ್ಮ ಈ - ಮೇಲ್ ಬಳಸಿ 👇ಇದೀಗ ಉಚಿತವಾಗಿ 🆓 ಚಂದಾದಾರರಾಗಿ..!  ನಿಮಗೆ ನಮ್ಮ ಕಥೆಗಳು, ಹಾಡುಗಳು ಮತ್ತು ಮಾಹಿತಿ ಇಷ್ಟವಾದರೆ ನಿಮ್ಮ ಸಮೂಹಕ್ಕೆ ಶೇರ್ ಮಾಡುವುದನ್ನ ಮರೆಯದಿರಿ 
RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

×